6-ಸೀಟರ್.. ಇದೇ ಬಲಭೀಮ, ಈ ಟಾಟಾ SUVಗೆ 5 ಬದಲಿ ಕಾರುಗಳಿವು.. ಬೆಲೆ ಎಷ್ಟು, ವಿಶೇಷತೆಗಳೇನು?

ಟಾಟಾ ಸಫಾರಿ (Tata Safari) ಪ್ರಮುಖ ಎಸ್‌ಯುವಿಯಾಗಿದೆ. ಇದು ರೂ.15.50 ಲಕ್ಷದಿಂದ ರೂ.27.44 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಕಾಸ್ಮಿಕ್ ಗೋಲ್ಡ್, ಒಬೆರಾನ್ ಬ್ಲ್ಯಾಕ್, ಸ್ಟಾರ್‌ಡಸ್ಟ್ ಆಶ್, ಸ್ಟೆಲ್ಲರ್ ಫ್ರಾಸ್ಟ್ ಮತ್ತು ಸೂಪರ್‌ನೋವಾ ಕಾಪರ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 6/7 ಆಸನಗಳನ್ನು ಪಡೆದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. 420 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ. 205 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,741 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ಈ ಕಾರು 2-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 6-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಡಿದೆ. 14 ರಿಂದ 16 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 175 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್​ಪ್ಲೇ ಹಾಗೂ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

Best 5 Alternative Cars For Tata Safari Suv Innova Crysta Alcazar Innova Hycross Scorpio N XUV700

ನೀವು ಇದೇ 'ಟಾಟಾ ಸಫಾರಿ'ಗೆ ಪರ್ಯಾಯವಾಗಿ 5 ಜನಪ್ರಿಯ ಎಸ್‌ಯುವಿಗಳಾದ ಟೊಯೊಟಾ ಇನ್ನೋವಾ ಕ್ರಿಸ್ಟಾ, ಹ್ಯುಂಡೈ ಅಲ್ಕಾಜರ್, ಟೊಯೊಟಾ ಇನ್ನೋವಾ ಹೈಕ್ರಾಸ್, ಮಹೀಂದ್ರಾ ಸ್ಕಾರ್ಪಿಯೋ-ಎನ್ ಹಾಗೂ ಮಹೀಂದ್ರಾ ಎಕ್ಸ್‌ಯುವಿ700ಗಳನ್ನು ಕೊಂಡುಕೊಳ್ಳಬಹುದು. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಟೊಯೊಟಾ ಇನ್ನೋವಾ ಕ್ರಿಸ್ಟಾ (Toyota Innova Crysta):

ಇದೊಂದು ಜನಪ್ರಿಯ ಎಂಪಿವಿಯಾಗಿದೆ. ಆದರೂ 'ಟಾಟಾ ಸಫಾರಿ'ಗೆ ಬದಲಿ ಕಾರಾಗಿ ಕೊಂಡುಕೊಳ್ಳಬಹುದು. ರೂ.18.66 ಲಕ್ಷದಿಂದ ರೂ.25.27 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 2.4-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. 9 ರಿಂದ 10.5 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 7/8 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 7 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

Best 5 Alternative Cars For Tata Safari Suv Innova Crysta Alcazar Innova Hycross Scorpio N XUV700

ಹ್ಯುಂಡೈ ಅಲ್ಕಾಜರ್ (Hyundai Alcazar):

ಈ ಕಾರನ್ನು 'ಟಾಟಾ ಸಫಾರಿ'ಗೆ ಪರ್ಯಾಯವಾಗಿ ತೆಗೆದುಕೊಳ್ಳಬಹುದು. ಅದಕ್ಕೆ ತಕ್ಕಂತೆ ರೂ.14.47 ಲಕ್ಷದಿಂದ ರೂ.21.10 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.5-ಲೀ. ಟರ್ಬೊ ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿದೆ. 17 ರಿಂದ 20 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 6/ 7 ಆಸನಗಳನ್ನು ಹೊಂದಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25 ಇಂಚಿನ ಡಿಸ್‌ಪ್ಲೇಗಳು & 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross):

ಇದು ಪ್ರಮುಖ ಎಂಪಿವಿಯಾಗಿದ್ದು, 'ಟಾಟಾ ಸಫಾರಿ'ಗೆ ಬದಲಿ ಆಯ್ಕೆಯಾಗಿ ಮನೆಗೆ ತರಬಹುದು. ರೂ.18.16 ಲಕ್ಷದಿಂದ ರೂ.30.83 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 2-ಲೀ. ಪೆಟ್ರೋಲ್ ಮತ್ತು 2-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್‌ನ್ನು ಒಳಗೊಂಡಿದೆ. 23.24 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 7/8 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ. 10.1 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

Best 5 Alternative Cars For Tata Safari Suv Innova Crysta Alcazar Innova Hycross Scorpio N XUV700

ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N):

ಈ ಕಾರನ್ನು 'ಟಾಟಾ ಸಫಾರಿ'ಗೆ ಪರ್ಯಾಯವಾಗಿ ಖರೀದಿಸಬಹುದು.ರೂ.13.20 ಲಕ್ಷದಿಂದ ರೂ.24.17 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 2-ಲೀ. ಟರ್ಬೊ ಪೆಟ್ರೋಲ್ ಹಾಗೂ 2.2-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. 12 ರಿಂದ 16 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. . 6/7 ಆಸನಗಳನ್ನು ಒಳಗೊಂಡಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

Best 5 Alternative Cars For Tata Safari Suv Innova Crysta Alcazar Innova Hycross Scorpio N XUV700

ಮಹೀಂದ್ರಾ ಎಕ್ಸ್‌ಯುವಿ700 (Mahindra XUV700):

ಇದೊಂದು ಜಗಮೆಚ್ಚಿದ ಎಸ್‌ಯುವಿಯಾಗಿದೆ. ರೂ.13.66 ಲಕ್ಷದಿಂದ ರೂ.23.71 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 2-ಲೀ. ಟರ್ಬೊ ಪೆಟ್ರೋಲ್ ಹಾಗೂ 2.2-ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿದೆ. 17 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 6/7 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಏರ್‌ಬ್ಯಾಗ್‌ಗಳನ್ನು ಹೊಂದಿದೆ.

More from DriveSpark

Article Published On: Wednesday, November 26, 2025, 8:36 [IST]
English summary
Best 5 alternative cars for tata safari suv innova crysta alcazar innova hycross scorpio n xuv700
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+