30 Km ಮೈಲೇಜ್.. 6.39 ಲಕ್ಷ, ಜನಪ್ರಿಯ ಟೊಯೊಟಾ ಗ್ಲಾನ್ಜಾಗೆ 5 ಪರ್ಯಾಯ ಕಾರುಗಳಿವು.. ಬೆಲೆ ಎಷ್ಟು, ಹೇಗಿವೆ?

ಟೊಯೊಟಾ ಗ್ಲಾನ್ಜಾ (Toyota Glanza) ವಿಶ್ವಾಸಾರ್ಹ ಹ್ಯಾಚ್‌ಬ್ಯಾಕ್‌ ಆಗಿದೆ. ಇದು ರೂ.6.39 ಲಕ್ಷದಿಂದ ರೂ.9.15 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಸ್ಪೋರ್ಟಿನ್ ರೆಡ್, ಎಂಟೈಸಿಂಗ್ ಸಿಲ್ವರ್, ಗೇಮಿಂಗ್ ಗ್ರೇ ಹಾಗೂ ಕೆಫೆ ವೈಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 318 ಲೀ. ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ಈ ಕಾರು 1.2-ಲೀಟರ್ ಪೆಟ್ರೋಲ್ ಮತ್ತು 1.2-ಲೀ. ಪೆಟ್ರೋಲ್ + ಸಿಎನ್‌ಜಿ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 22.35 ರಿಂದ 30 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ ರಿವರ್ಸ್ ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿದೆ.

Best 5 Alternative Cars For Toyota Glanza Glanza Tiago Altroz Swift And i20

ನೀವು ಇದೇ 'ಟೊಯೊಟಾ ಗ್ಲಾನ್ಜಾ'ಗೆ ಪರ್ಯಾಯವಾಗಿ ಈ 5 ಹ್ಯಾಚ್‌ಬ್ಯಾಕ್‌ಗಳಾದ ಮಾರುತಿ ಸುಜುಕಿ ಬಲೆನೊ, ಟಾಟಾ ಟಿಯಾಗೊ, ಟಾಟಾ ಆಲ್ಟ್ರೋಜ್, ಮಾರುತಿ ಸುಜುಕಿ ಸ್ವಿಫ್ಟ್ ಹಾಗೂ ಹ್ಯುಂಡೈ ಐ20ಗಳನ್ನು ಖರೀದಿಸಬಹುದು. ಬನ್ನಿ, ಇವುಗಳು ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಮಾರುತಿ ಸುಜುಕಿ ಬಲೆನೊ (Maruti Suzuki Baleno):

ಇದು ಜನಪ್ರಿಯ ಹ್ಯಾಚ್‌ಬ್ಯಾಕ್‌ ಆಗಿದ್ದು, 'ಟೊಯೊಟಾ ಗ್ಲಾನ್ಜಾ'ಗೆ ಅತ್ಯುತ್ತಮವಾದ ಬದಲಿ ಆಯ್ಕೆಯಾಗಲಿದೆ. ಅದಕ್ಕೆ ತಕ್ಕಂತೆ ರೂ.5.99 ಲಕ್ಷದಿಂದ ರೂ.9.10 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀ. ಪೆಟ್ರೋಲ್ + ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿಯೂ ಸಿಗುತ್ತದೆ. 22 ರಿಂದ 30 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಹೊಂದಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

Best 5 Alternative Cars For Toyota Glanza Glanza Tiago Altroz Swift And i20

ಟಾಟಾ ಟಿಯಾಗೊ (Tata Tiago):

ಈ ಕಾರು ಸಹ 'ಟೊಯೊಟಾ ಗ್ಲಾನ್ಜಾ'ಗೆ ಪರ್ಯಾಯವಾಗಲಿದೆ. ರೂ.4.57 ಲಕ್ಷದಿಂದ ರೂ.7.82 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀ. ಪೆಟ್ರೋಲ್ ಮತ್ತು 1.2-ಲೀ. ಪೆಟ್ರೋಲ್ + ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 19 ರಿಂದ 28 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಡುಯಲ್ ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಟಾಟಾ ಆಲ್ಟ್ರೋಜ್ (Tata Altroz):

ಇದೊಂದು ಪ್ರಖ್ಯಾತ ಹ್ಯಾಚ್‌ಬ್ಯಾಕ್‌ ಆಗಿದೆ. 'ಟೊಯೊಟಾ ಗ್ಲಾನ್ಜಾ'ಗೂ ಬದಲಿ ಕಾರಾಗಿಯೂ ಹೊರಹೊಮ್ಮಿದೆ. ರೂ.6.30 ಲಕ್ಷದಿಂದ ರೂ.10.51 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀ. ಪೆಟ್ರೋಲ್ + ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಪಡೆದಿದೆ. 19 ರಿಂದ 26 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಹೊಂದಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಮತ್ತು 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

Best 5 Alternative Cars For Toyota Glanza Glanza Tiago Altroz Swift And i20

ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift):

ಈ ಕಾರನ್ನು 'ಟೊಯೊಟಾ ಗ್ಲಾನ್ಜಾ'ಗೆ ಪರ್ಯಾಯವಾಗಿ ಕೊಂಡುಕೊಳ್ಳಬಹುದು. ರೂ.5.79 ಲಕ್ಷದಿಂದ ರೂ.8.80 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀಟರ್ ಪೆಟ್ರೋಲ್ + ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 24.80 ರಿಂದ 32.85 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ. 9 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

Best 5 Alternative Cars For Toyota Glanza Glanza Tiago Altroz Swift And i20

ಹ್ಯುಂಡೈ ಐ20 (Hyundai i20):

ಇದು ಜನಪ್ರಿಯ ಹ್ಯಾಚ್‌ಬ್ಯಾಕ್‌ ಎಂದೇ ಹೆಸರುವಾಸಿಯಾಗಿದೆ. 'ಟೊಯೊಟಾ ಗ್ಲಾನ್ಜಾ'ಗೆ ಬದಲಾಗಿಯೂ ಮನೆಗೆ ತರಬಹುದು. ರೂ.6.87 ಲಕ್ಷದಿಂದ ರೂ.10.43 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ ಆಯ್ಕೆಯನ್ನು ಹೊಂದಿದೆ. 16 ರಿಂದ 20 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಪಡೆದಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Tuesday, November 18, 2025, 22:46 [IST]
English summary
Best 5 alternative cars for toyota glanza baleno tiago altroz swift and i20
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+