26 Km ಮೈಲೇಜ್.. 10 ಲಕ್ಷ, 7 ಆಸನಗಳು.. ಈ Toyota Mpvಗೆ ಬದಲಿ ಆಯ್ಕೆಯಾಗಬಲ್ಲ 5 ಕಾರುಗಳಿವು!

ಟೊಯೊಟಾ ರೂಮಿಯನ್ (Toyota Rumion) ಜನಪ್ರಿಯ ಎಂಪಿವಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಈ ಕಾರು ಅತ್ಯಂತ ಬಜೆಟ್ ಬೆಲೆಯಲ್ಲಿ ಖರೀದಿಗೆ ದೊರೆಯಲಿದ್ದು, ರೂ.10 ಲಕ್ಷದಿಂದ ರೂ.14 ಲಕ್ಷವರೆಗೆ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1.5-ಲೀಟರ್ ಸಾಮರ್ಥ್ಯದ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಪಡೆದಿದೆ. 20.11 ರಿಂದ 26.11 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 7 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 4-ಏರ್‌ಬ್ಯಾಗ್‌ಗಳನ್ನು ಪಡೆದಿದೆ. ನೀವು 'ರೂಮಿಯನ್' ಎಂಪಿವಿಗೆ ಬದಲಾಗಿ ಈ 5 ಕಾರುಗಳನ್ನು ಕೊಂಡುಕೊಳ್ಳಬಹುದು. ಬನ್ನಿ, ಇವುಗಳ ಬೆಲೆ ಹಾಗೂ ವಿಶೇಷತೆಗಳನ್ನು ಕುರಿತಂತೆ ಸಂಕ್ಷಿಪ್ತವಾದ ಮಾಹಿತಿಯನ್ನು ತಿಳಿಯೋಣ.

ಕಿಯಾ ಕ್ಯಾರೆನ್ಸ್ (Kia Carens): ಇದು ಕೂಡ ಪ್ರಖ್ಯಾತ ಎಂಪಿವಿಯಾಗಿದ್ದು, ಟೊಯೊಟಾ ರೂಮಿಯನ್ ಕಾರಿಗೆ ಪರ್ಯಾಯ ಆಯ್ಕೆಯಾಗಲಿದೆ. ರೂ.10.60 ಲಕ್ಷದಿಂದ ರೂ.19.70 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಈ ಎಂಪಿವಿ ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದ್ದು, ಇಂಪೀರಿಯಲ್ ಬ್ಲೂ, ಇಂಟೆನ್ಸ್ ರೆಡ್, ಅರೋರಾ ಬ್ಲಾಕ್ ಪರ್ಲ್, ಸ್ಪಾರ್ಕ್ಲಿಂಗ್ ಸಿಲ್ವರ್, ಗ್ರಾವಿಟಿ ಗ್ರೇ ಮತ್ತು ಗ್ಲೇಸಿಯರ್ ವೈಟ್ ಪರ್ಲ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Best 5 Alternative Cars For Toyota Rumion Mpv Carens XL6 Triber Ertiga Bolero

ಹೊಸ ಕಿಯಾ ಕ್ಯಾರೆನ್ಸ್ ಎಂಪಿವಿಯು ಶಕ್ತಿಯುತವಾದ 3 ಪವರ್‌ಟ್ರೇನ್‌ನ್ನು ಹೊಂದಿದೆ. 1.5-ಲೀಟರ್ ಪೆಟ್ರೋಲ್, 1.4-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 16 ರಿಂದ 21 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಈ ಕಾರಿನಲ್ಲಿ 6/ 7 ಆಸನಗಳಿವೆ. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 216 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ನೂತನ ಕಿಯಾ ಕ್ಯಾರೆನ್ಸ್ ಕಾರು 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 8-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್, ಎಲೆಕ್ಟ್ರಿಕ್ ಸನ್‌ರೂಫ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, 64 ಕಲರ್ ಆಂಬಿಯೆಂಟ್ ಲೈಟಿಂಗ್ ಮತ್ತು ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

Best 5 Alternative Cars For Toyota Rumion Mpv Carens XL6 Triber Ertiga Bolero

ಮಾರುತಿ ಸುಜುಕಿ ಎಕ್ಸ್ಎಲ್6 (Maruti Suzuki XL6): ಈ ಎಂಪಿವಿಯನ್ನು ಸಹ ಟೊಯೊಟಾ ರೂಮಿಯನ್ ಕಾರಿಗೆ ಬದಲಾಗಿ ಖರೀದಿ ಮಾಡಬಹುದು. ಇದು ರೂ.12 ಲಕ್ಷದಿಂದ ರೂ.15 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಈ ಕಾರು 6 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರವಾಸಕ್ಕೆ ಹೋಗುವ ಲಗೇಜ್ ಸಾಗಿಸಲು 209 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

ಹೊಸ ಮಾರುತಿ ಎಕ್ಸ್ಎಲ್6 ಎಂಪಿವಿ 1.5- ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 20.27 ರಿಂದ 26.32 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಜೊತೆಗೆ ಈ ಕಾರು ಹೊರಭಾಗದಲ್ಲಿ ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ನೆಕ್ಸಾ ಬ್ಲೂ, ಬ್ರೇವ್ ಖಾಖಿ, ಗ್ರ್ಯಾಂಡ್ಯೂರ್ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್ ಹಾಗೂ ಪರ್ಲ್ ಮಿಡ್ ನೈಟ್ ಬ್ಲ್ಯಾಕ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

Best 5 Alternative Cars For Toyota Rumion Mpv Carens XL6 Triber Ertiga Bolero

ಈ ಕಾರು ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಬಹುಮುಖ್ಯವಾಗಿ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7-ಇಂಚು), ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಕ್ರೂಸ್ ಕಂಟ್ರೋಲ್ ಹಾಗೂ ಆಟೋ ಎಸಿಯನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 4 ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ರೆನಾಲ್ಟ್ ಟ್ರೈಬರ್ (Renault Triber): ಇದೊಂದು ಜನಪ್ರಿಯ ಎಂಪಿವಿಯಾಗಿ ಹೊರಹೊಮ್ಮಿದೆ. ರೂ.6 ಲಕ್ಷದಿಂದ ರೂ.9 ಲಕ್ಷವರೆಗೆ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇದರಲ್ಲಿ 7 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. 84 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

Best 5 Alternative Cars For Toyota Rumion Mpv Carens XL6 Triber Ertiga Bolero

ನೂತನ ರೆನಾಲ್ಟ್ ಟ್ರೈಬರ್ ಎಂಪಿವಿಯು 1-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 18.2 ರಿಂದ 20 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ. ಹಾಗೆಯೇ ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದ್ದು, ಐಸ್ ಕೂಲ್ ವೈಟ್, ಸೀಡರ್ ಬ್ರೌನ್ ಮತ್ತು ಮೂನ್‌ಲೈಟ್ ಸಿಲ್ವರ್ ಸೇರಿದಂತೆ ಹಲವು ಬಣ್ಣಗಳೊಂದಿಗೂ ಲಭ್ಯವಿದೆ.

ಈ ಕಾರು 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಚಾರ್ಜರ್ ಮತ್ತು ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ನಂತಹ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 4 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ ರೇರ್ ವ್ಯೂ ಕ್ಯಾಮೆರಾವನ್ನು ಒಳಗೊಂಡಿದೆ.

Best 5 Alternative Cars For Toyota Rumion Mpv Carens XL6 Triber Ertiga Bolero

ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga): ಈ ಎಂಪಿವಿಯೂ ಟೊಯೊಟಾ ರೂಮಿಯನ್ ಕಾರಿಗೆ ಬದಲಿ ಆಯ್ಕೆಯಾಗಲಿದೆ. ಇದು ರೂ.9 ಲಕ್ಷದಿಂದ ರೂ.13 ಲಕ್ಷವರೆಗೆ (ಎಕ್ಸ್-ಶೋರೂಂ) ಬೆಲೆಯನ್ನು ಆಯ್ಕೆಯನ್ನು ಒಳಗೊಂಡಿದೆ. ಇದು 7 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಸಂಚರಿಸಬಹುದು. 209 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ನೂತನ ಎರ್ಟಿಗಾ ಕಾರು 1.5-ಲೀಟರ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 20.3 ರಿಂದ 26.11 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಪ್ಯಾಡಲ್ ಶಿಫ್ಟರ್‌, ಕ್ರೂಸ್ ಕಂಟ್ರೋಲ್ ಮತ್ತು ಆಟೋ ಎಸಿಯಂತಹ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಯ ದೃಷ್ಟಿಯಿಂದ 4 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

Best 5 Alternative Cars For Toyota Rumion Mpv Carens XL6 Triber Ertiga Bolero

ಮಹೀಂದ್ರಾ ಬೊಲೆರೊ ನಿಯೋ (Mahindra Bolero Neo): ಇದೊಂದು ಫ್ಯಾಮಿಲಿ ಎಸ್‌ಯುವಿಯಾಗಿದೆ. ರೂ.10 ಲಕ್ಷದಿಂದ ರೂ.11 ಲಕ್ಷವರೆಗೆ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇದರಲ್ಲಿ 7 ಆಸನಗಳಿದ್ದು, ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 384 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. ಮೆಜೆಸ್ಟಿಕ್ ಸಿಲ್ವರ್, ಹೈವೇ ರೆಡ್, ಪರ್ಲ್ ವೈಟ್ ಮತ್ತು ಡೈಮಂಡ್ ವೈಟ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

ಈ ಕಾರು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 17.29 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕ್ರೂಸ್ ಕಂಟ್ರೋಲ್, ಹೈಟ್ ಅಡ್ಜಸ್ಟಬಲ್ ಡ್ರೈವರ್ ಸೀಟ್ ಮತ್ತು ಕೀಲೆಸ್ ಎಂಟ್ರಿಯಂತಹ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, May 11, 2025, 20:20 [IST]
English summary
Best 5 alternative cars for toyota rumion mpv carens xl6 triber ertiga bolero
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+