ಪೆಟ್ರೋಲ್ ಬೇಕಿಲ್ಲ.. ಶಕ್ತಿಯುತ 'Tata Curvv' ಎಲೆಕ್ಟ್ರಿಕ್ ಎಸ್‌ಯುವಿಗೆ ಬದಲಿ ಆಯ್ಕೆಯಾಗಬಲ್ಲ 5 ಕಾರುಗಳಿವು!

ಟಾಟಾ ಕರ್ವ್ ಇವಿ (Tata Curvv EV) ಪ್ರಮುಖ ಎಲೆಕ್ಟ್ರಿಕ್ ಕೂಪೆ ಎಸ್‌ಯುವಿಯಾಗಿದೆ. ಇದು ರೂ.17.49 ಲಕ್ಷದಿಂದ ರೂ.22.24 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 45 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 55 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 430 ರಿಂದ 502 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದ್ದು, 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ನ್ನು ಪಡೆದಿದೆ. ನೀವು 'ಟಾಟಾ ಕರ್ವ್ ಇವಿ' ಬದಲಿಗೆ ಬೇರೊಂದು ಎಲೆಕ್ಟ್ರಿಕ್ ಎಸ್‌ಯುವಿಯನ್ನು ಕೊಂಡುಕೊಳ್ಳಲು ಆಲೋಚಿಸಿದ್ದೀರಾ.. ಹಾಗಾದರೆ, ಈ 5 ಕಾರುಗಳು ಅತುತ್ತಮವಾದ ಪರ್ಯಾಯ ಆಯ್ಕೆಯಾಗಲಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಎಂಜಿ ವಿಂಡ್ಸರ್ ಇವಿ ಪ್ರೊ (MG Windsor EV Pro): ಇದು ಟಾಟಾ ಕರ್ವ್ ಇವಿಗೆ ಉತ್ತಮವಾದ ಬದಲಿ ಕಾರಾಗಲಿದ್ದು, ರೂ.18.09 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಈ ಎಲೆಕ್ಟ್ರಿಕ್ ಎಸ್‌ಯುವಿಯಲ್ಲಿಯೂ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 579 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

Best 5 Alternative Electric Suv For Tata Curvv Ev Details

ಈ ಎಲೆಕ್ಟ್ರಿಕ್ ಎಸ್‌ಯುವಿ ಹೆಚ್ಚು ಬಲಿಷ್ಠವಾದ 52.9 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ ಆಯ್ಕೆಯನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 449 ಕಿಲೋಮೀಟರ್ ಕ್ರಮಿಸುತ್ತದೆ. ಹೊರಭಾಗದಲ್ಲೂ ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದ್ದು, ಸೆಲಾಡಾನ್ ಬ್ಲೂ, ಗ್ಲೇಜ್ ರೆಡ್ & ಅರೋರಾ ಸಿಲ್ವರ್ ಎಂಬ ಬಣ್ಣಗಳನ್ನು ಪಡೆದಿದೆ.

Best 5 Alternative Electric Suv For Tata Curvv Ev Details

ನೂತನ ವಿಂಡ್ಸರ್ ಇವಿ ಪ್ರೊ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. 15.6-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜಿಂಗ್ ಪೋರ್ಟ್‌ನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.

ಮಹೀಂದ್ರಾ ಬಿಇ 6 (Mahindra BE 6): ಈ ಎಲೆಕ್ಟ್ರಿಕ್ ಎಸ್‌ಯುವಿಯು ಟಾಟಾ ಕರ್ವ್ ಇವಿಗೆ ಪರ್ಯಾಯ ಆಯ್ಕೆಯಾಗಲಿದೆ. ಇದು ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ರೂ.18.90 ಲಕ್ಷದಿಂದ ರೂ.26.90 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಸಬಹುದು.

Best 5 Alternative Electric Suv For Tata Curvv Ev Details

ಈ ಎಲೆಕ್ಟ್ರಿಕ್ ಕಾರು ದೊಡ್ಡ ಗ್ರಾತ್ರದ 79 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 682 ಕಿಲೋಮೀಟರ್ ಓಡುತ್ತದೆ. ಹೊರಭಾಗದಲ್ಲೂ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಡೆಸರ್ಟ್ ಮಿಸ್ಟ್, ಎವರೆಸ್ಟ್ ವೈಟ್, ಫೈರ್‌ಸ್ಟಾರ್ಮ್ ಆರೆಂಜ್, ಟ್ಯಾಂಗೋ ರೆಡ್, ಡೆಸರ್ಟ್ ಮಿಸ್ಟ್ ಸ್ಯಾಟಿನ್ & ಡೀಪ್ ಫಾರೆಸ್ಟ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಹೊಸ ಬಿಇ 6 ಎಲೆಕ್ಟ್ರಿಕ್ ಕಾರು ವಿವಿಧ ನವೀನ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ & ಇನ್ಫೋಟೈನ್‌ಮೆಂಟ್ ಸಿಸ್ಟಮ್‌ಗಾಗಿ ಡುಯಲ್ ಸ್ಕ್ರೀನ್, ಟೂ-ಸ್ಪೋಕ್ ಸ್ಟೀರಿಂಗ್ ವೀಲ್ ಮತ್ತು ವೈರ್‌ಲೆಸ್ ಚಾರ್ಜರ್‌ಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಮಲ್ಟಿಪಲ್ ಏರ್‌ಬ್ಯಾಗ್‌ಗಳು ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

Best 5 Alternative Electric Suv For Tata Curvv Ev Details

ಮಹೀಂದ್ರಾ ಎಕ್ಸ್‌ಯುವಿ400 (Mahindra XUV400): ಇದು ಕೂಡ ಪ್ರಮುಖ ಎಲೆಕ್ಟ್ರಿಕ್ ಕಾರೆಂದೇ ಹೆಸರುವಾಸಿಯಾಗಿದೆ. ಈ ಎಸ್‌ಯುವಿಯನ್ನು ಕರ್ವ್ ಇವಿಗೆ ಬದಲಾಗಿಯೂ ಕೊಳ್ಳಬಹುದು. ಕನಿಷ್ಠ ರೂ.16.74 ಲಕ್ಷ ಮತ್ತು ಗರಿಷ್ಠ ರೂ.17.69 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇದರೊಟ್ಟಿಗೆ 5 ಆಸನದೊಂದಿಗೆ ಗ್ರಾಹಕರ ಖರೀದಿಗೆ ಲಭ್ಯವಾಗುತ್ತದೆ.

ಈ ಎಲೆಕ್ಟ್ರಿಕ್ ಎಸ್‌ಯುವಿ 34.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 39.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ ಕ್ರಮವಾಗಿ 375 ರಿಂದ 456 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. ಉತ್ತಮವಾದ ವಿನ್ಯಾಸವನ್ನು ಒಳಗೊಂಡಿದ್ದು, ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ ಎಕ್ಸ್‌ಯುವಿ400 ಎಲೆಕ್ಟ್ರಿಕ್ ಕಾರು 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಮತ್ತು ಡುಯಲ್ ಜೋನ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಮತ್ತು ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಒಳಗೊಂಡಿದೆ.

ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ (Hyundai Creta Electric): ಈ ಕಾರು ಸಹ ಟಾಟಾ ಕರ್ವ್ ಎಲೆಕ್ಟ್ರಿಕ್ ಎಸ್‌ಯುವಿಗೆ ಬದಲಿ ಆಯ್ಕೆಯಾಗಲಿದೆ. ಇದು ರೂ.17.99 ಲಕ್ಷದಿಂದ ರೂ.24.38 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಇದರಲ್ಲಿಯೂ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು 422 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

Take a Poll

ಈ ಎಲೆಕ್ಟ್ರಿಕ್ ಕಾರು 42 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 51.4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ ಕ್ರಮವಾಗಿ 390 ರಿಂದ 473 ಕಿಲೋಮೀಟರ್ ಓಡುತ್ತದೆ. ಅತ್ಯುತ್ತಮವಾದ ವಿನ್ಯಾಸವನ್ನು ಪಡೆದಿದೆ. ಇಕೋ, ನಾರ್ಮಲ್ ಮತ್ತು ಸ್ಪೋರ್ಟ್ ಎಂಬ ಡ್ರೈವಿಂಗ್ ಮೋಡ್‌ಗಳನ್ನು ತನ್ನದಾಗಿಸಿಕೊಂಡಿದೆ.

ಹೊಸ ಕ್ರೆಟಾ ಎಲೆಕ್ಟ್ರಿಕ್ ಎಸ್‌ಯುವಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ ಸ್ಕ್ರೀನ್ ಸೆಟಪ್, ಪನೋರಮಿಕ್ ಸನ್‌ರೂಫ್ ಮತ್ತು ಡುಯಲ್ ಜೋನ್ ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳ ಹಾಗೂ ರಿವರ್ಸ್ ಪಾರ್ಕಿಂಗ್ ಕ್ಯಾಮೆರಾವನ್ನು ಪಡೆದಿದೆ.

ಎಂಜಿ ಜಡ್ಎಸ್ ಇವಿ (MG ZS EV): ಇದು ಪ್ರಖ್ಯಾತ ಎಸ್‌ಯುವಿಯಾಗಿದ್ದು, ಟಾಟಾ ಕರ್ವ್ ಇವಿಗೆ ಅತ್ಯುತ್ತಮವಾದ ಪರ್ಯಾಯ ಆಯ್ಕೆಯಾಗಲಿದೆ. ರೂ.18.98 ಲಕ್ಷದಿಂದ ರೂ.26.64 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಈ ಕಾರಿನಲ್ಲಿ 5 ಆಸನಗಳಿವೆ. ಜಾಸ್ತಿ ಲಗೇಜ್ ತೆಗೆದುಕೊಂಡು ಹೋಗಲು 448 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.

ಈ ಎಲೆಕ್ಟ್ರಿಕ್ ಕಾರು 50.3 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 461 ಕಿಲೋಮೀಟರ್‌ ರೇಂಜ್ (ಮೈಲೇಜ್) ನೀಡುತ್ತದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಸನ್‌ರೂಫ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, May 20, 2025, 16:25 [IST]
English summary
Best 5 alternative electric suvs for tata curvv ev details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+