ಜನ ಮೆಚ್ಚಿದ 'ಮಾರುತಿ ಗ್ರ್ಯಾಂಡ್ ವಿಟಾರಾ'ಗೆ 5 ಬದಲಿ ಕಾರುಗಳಿವು.. ಅಷ್ಟೇ ಚೆನ್ನಾಗಿವೆ, ಬೆಲೆ ಎಷ್ಟಿದೆ?
ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ಜನ ಮೆಚ್ಚಿದ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಇದು ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ಕನಿಷ್ಠ ರೂ.11.42 ಲಕ್ಷ ಮತ್ತು ಗರಿಷ್ಠ ರೂ.20.68 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಮತ್ತು ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 19 ರಿಂದ 27 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಈ ಕಾರಿನಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ. ಅದರ ಹೊರತಾಗಿಯೂ ನೀವು ನೂತನ 'ಗ್ರ್ಯಾಂಡ್ ವಿಟಾರಾ' ದರಕ್ಕೆ ಬೇರೆ ಕಾರೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, ಈ 5 ಎಸ್‌ಯುವಿಗಳು ಅತ್ಯುತ್ತಮವಾದ ಬದಲಿ ಆಯ್ಕೆಯಾಗಲಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಎಂಜಿ ಆಸ್ಟರ್ (MG Astor): ಈ ಎಸ್‌ಯುವಿಯು ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಕಾರಿಗೆ ಉತ್ತಮವಾದ ಪರ್ಯಾಯ ಆಯ್ಕೆಯಾಗಲಿದೆ. ಇದು ರೂ.11.30 ಲಕ್ಷದಿಂದ ರೂ.17.56 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಈ ಕಾರಿನಲ್ಲಿ 5 ಆಸನಗಳಿವೆ. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 448 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.

ಈ ಎಸ್‌ಯುವಿಯು ಬೆಲೆಗೆ ತಕ್ಕಂತೆ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ & 1.3-ಲೀ. ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಮತ್ತು ಸಿವಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ. 14 ರಿಂದ 15 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ನೂತನ ಎಂಜಿ ಆಸ್ಟರ್ ಕಾರು ದೊಡ್ಡ ಗಾತ್ರದ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಜೊತೆಗೆ ಅರೋರಾ ಸಿಲ್ವರ್, ಗ್ಲೇಜ್ ರೆಡ್, ಕ್ಯಾಂಡಿ ವೈಟ್ & ಸ್ಟಾರಿ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಕಿಯಾ ಸೆಲ್ಟೋಸ್ (Kia Seltos): ಇದು ಕೂಡ ಜನಪ್ರಿಯ ಎಸ್‌ಯುವಿಯಾಗಿದೆ. ಗ್ರ್ಯಾಂಡ್ ವಿಟಾರಾಗೆ ಬದಲಿ ಕಾರಾಗಿಯೂ ಗುರುತಿಕೊಂಡಿದೆ. ಈ ಎಸ್‌ಯುವಿ ರೂ.11.19 ಲಕ್ಷದಿಂದ ರೂ.20.56 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ನಡೆಸಬಹುದು. ಜಾಸ್ತಿ ಲಗೇಜ್ ಸಾಗಿಸಲು 433 ಲೀ. ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.
ಈ ಕಾರು ಮೂರು ವಿವಿಧ ಪವರ್‌ಟ್ರೇನ್‌ನೊಂದಿಗೆ ದೊರೆಯುತ್ತದೆ. ಇದು 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ & 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಪಡೆದಿದೆ. 17 ರಿಂದ 20.7 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ನೂತನ ಕಿಯಾ ಸೆಲ್ಟೋಸ್ ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಕ್ಲಿಯರ್ ವೈಟ್, ಗ್ಲೇಸಿಯರ್ ಪರ್ಲ್ ವೈಟ್, ಅರೋರಾ ಬ್ಲ್ಯಾಕ್ ಪರ್ಲ್, ಗ್ರಾವಿಟಿ ಗ್ರೇ & ಸ್ಪಾರ್ಕ್ಲಿಂಗ್ ಸಿಲ್ವರ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ 10.25-ಇಂಚಿನ ಡಿಸ್‌ಪ್ಲೇಯಂತಹ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.
ಹ್ಯುಂಡೈ ಕ್ರೆಟಾ (Hyundai Creta): ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾಗೆ ಈ ಎಸ್‌ಯುವಿಯು ಅತ್ಯುತ್ತಮವಾದ ಪರ್ಯಾಯ ಆಯ್ಕೆಯಾಗಲಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಇದು ಕನಿಷ್ಠ ರೂ.11.11 ಲಕ್ಷದಿಂದ ರೂ.20.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಈ ಕಾರಿನಲ್ಲೂ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು.

ಈ ಎಸ್‌ಯುವಿ 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ ಮತ್ತು 1.5-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 17.4 ರಿಂದ 21.8 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದ್ದು, ಅಟ್ಲಾಸ್ ವೈಟ್, ಅಬಿಸ್ ಬ್ಲಾಕ್ & ಟೈಟಾನ್ ಗ್ರೇ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಹೊಸ ಕ್ರೆಟಾ ಎಸ್‌ಯುವಿ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ ಡಿಸ್‌ಪ್ಲೇ, ಡುಯಲ್-ಝೋನ್ ಎಸಿ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು ಹಿಲ್ ಸ್ಟಾರ್ಟ್ ಅಸಿಸ್ಟ್‌ಗಳನ್ನು ಪಡೆದಿದೆ.

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder): ಇದೊಂದು ಪ್ರಖ್ಯಾತ ಎಸ್‌ಯುವಿಯಾಗಿದ್ದು, ಗ್ರ್ಯಾಂಡ್ ವಿಟಾರಾಗೆ ಬದಲಿ ಕಾರಾಗಿಯೂ ಖರೀದಿ ಮಾಡಬಹುದು. ಈ ಎಸ್‌ಯುವಿ ರೂ.11.34 ಲಕ್ಷದಿಂದ ರೂ.20.19 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಇದರಲ್ಲಿಯೂ 5 ಆಸನಗಳಿವೆ. ಹೆಚ್ಚಿನ ಲಗೇಜ್ ಕೊಂಡೊಯ್ಯಲು 373 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.
ಈ ಕಾರು ಹೆಚ್ಚು ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. 1.5-ಲೀ. ಸಾಮರ್ಥ್ಯದ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಹಾಗೂ 1.5-ಲೀ. ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. ಯಾವ ಬೈಕ್‌ಗೂ ಕಡಿಮೆಯಿಲ್ಲದ ರೀತಿಯಲ್ಲಿ 19.39 ರಿಂದ 27.97 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಜೊತೆಗೆ ನೋಡುಗರ ಕಣ್ಮನ ಸೆಳೆಯುವ ವಿನ್ಯಾಸವನ್ನು ಒಳಗೊಂಡಿದೆ.

ಹೊಸ ಅರ್ಬನ್ ಕ್ರೂಸರ್ ಹೈರೈಡರ್ ಎಸ್‌ಯುವಿ ಕೆಫೆ ವೈಟ್, ಗೇಮಿಂಗ್ ಗ್ರೇ, ಸ್ಪೋರ್ಟಿನ್ ರೆಡ್ & ಮಿಡ್‌ನೈಟ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕನೆಕ್ಟೆಡ್ ಕಾರ್ ಟೆಕ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.
ಟಾಟಾ ಹ್ಯಾರಿಯರ್ (Tata Harrier): ಇದು ಸಹ ಪ್ರಮುಖ ಎಸ್‌ಯುವಿಯಾಗಿದ್ದು, ಗ್ರ್ಯಾಂಡ್ ವಿಟಾರಾಗೆ ಪರ್ಯಾಯ ಆಯ್ಕೆಯಾಗಲಿದೆ. ರೂ.15 ಲಕ್ಷದಿಂದ ರೂ.26.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಈ ಕಾರು 2-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದ್ದು, 14 ರಿಂದ 16 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ಈ ಎಸ್‌ಯುವಿ ಹೊರಭಾಗದಲ್ಲೂ ಅತ್ಯುತ್ತಮವಾದ ವಿನ್ಯಾಸವನ್ನು ಪಡೆದಿದೆ. ಕೋರಲ್ ರೆಡ್, ಪೆಬಲ್ ಗ್ರೇ, ಲೂನಾರ್ ವೈಟ್, ಒಬೆರಾನ್ ಬ್ಲ್ಯಾಕ್ & ಸೀವೀಡ್ ಗ್ರೀನ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications