ಪ್ರಮುಖ 5 ಬಜೆಟ್ ಕಾರುಗಳಿವು.. 10 ಲಕ್ಷದೊಳಗೆ ಲಭ್ಯ, ಮೈಲೇಜ್ ಕೂಡ ಜಾಸ್ತಿ!
ವಿಶ್ವದಲ್ಲೇ ಭಾರತ ಅತಿದೊಡ್ಡ ಕಾರು ಮಾರುಕಟ್ಟೆಯನ್ನು ಹೊಂದಿದೆ. ಇಲ್ಲಿ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಹೊಂದಿರುವ ಹತ್ತಾರು ಕಾರುಗಳನ್ನು ಮಾರಾಟ ಮಾಡಲಾಗುತ್ತಿದೆ. ನೀವು ಬಜೆಟ್ ಬೆಲೆಯಲ್ಲಿ ದೊರೆಯುವ ಹೊಚ್ಚ ಹೊಸ ಕಾರೊಂದನ್ನು ಮನೆಗೆ ತರಲು ಆಲೋಚಿಸಿದ್ದೀರಾ.. ಹಾಗದರೆ, ಮಾರುತಿ ಸುಜುಕಿ ಬಲೆನೊ, ಮಾರುತಿ ಸುಜುಕಿ ಸ್ವಿಫ್ಟ್, ಟಾಟಾ ಪಂಚ್, ಹ್ಯುಂಡೈ ವೆನ್ಯೂ ಹಾಗೂ ಮಾರುತಿ ಸುಜುಕಿ ಫ್ರಾಂಕ್ಸ್ ಮಾಡೆಲ್‌ಗಳು ಅತ್ಯುತ್ತಮ ಆಯ್ಕೆಯಾಗಲಿವೆ. ಬನ್ನಿ, ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಯೋಣ.
ಮಾರುತಿ ಸುಜುಕಿ ಬಲೆನೊ (Maruti Suzuki Baleno):
ಇದೊಂದು ಪ್ರಿಮಿಯಂ ಹ್ಯಾಚ್‌ಬ್ಯಾಕ್ ಆಗಿದ್ದು, ರೂ.6.70 ಲಕ್ಷದಿಂದ ರೂ.9.92 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ನೆಕ್ಸಾ ಬ್ಲೂ, ಗ್ರ್ಯಾಂಡಿಯರ್ ಗ್ರೇ, ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಲಕ್ಸ್ ಬೀಜ್ ಮತ್ತು ಒಪುಲೆಂಟ್ ರೆಡ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ಈ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 22 ರಿಂದ 30 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 9-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಫಾಸ್ಟ್ ಚಾರ್ಜಿಂಗ್ ಯುಎಸ್‌ಬಿ ಪೋರ್ಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.
ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift):
ಇದು ಜನಪ್ರಿಯ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ರೂ.6.49 ಲಕ್ಷದಿಂದ ರೂ.9.64 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಪಡೆದಿದೆ. ಸಿಜ್ಲಿಂಗ್ ರೆಡ್, ಪರ್ಲ್ ಆರ್ಕ್ಟಿಕ್ ವೈಟ್, ಮ್ಯಾಗ್ಮಾ ಗ್ರೇ ಹಾಗೂ ನಾವೆಲ್ ಆರೆಂಜ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ.

ನೂತನ ಸ್ವಿಫ್ಟ್ ಕಾರಿನಲ್ಲಿ 5 ಆಸನಗಳಿವೆ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 24 ರಿಂದ 32 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 9-ಇಂಚಿರುವ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋ ಕ್ಲೇಮೇಟ್ ಕಂಟ್ರೋಲ್ ಹಾಗೂ ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು ಮತ್ತು 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಪಡೆದಿದೆ.
ಟಾಟಾ ಪಂಚ್ (Tata Punch):
ಈ ಎಸ್‌ಯುವಿಯು ರೂ.6.20 ಲಕ್ಷದಿಂದ ರೂ.10.32 (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 18 ರಿಂದ 26 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. 10.25-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.
ಹ್ಯುಂಡೈ ವೆನ್ಯೂ (Hyundai Venue):
ಇದು ಎಸ್‌ಯುವಿಯಾಗಿದ್ದು, ರೂ.7.94 ಲಕ್ಷದಿಂದ ರೂ.13.62 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಹೊಂದಿದ್ದು, 24 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 8.0-ಇಂಚಿರುವ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx):
ಈ ಎಸ್‌ಯುವಿಯು ರೂ.7.54 ಲಕ್ಷದಿಂದ ರೂ.13.07 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 20 ರಿಂದ 28 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. 9-ಇಂಚಿರುವ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್, 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.


Click it and Unblock the Notifications