ಬಡವರಿಗೆ ಪರ್ಫೆಕ್ಟ್ ಕಾರುಗಳಿವು.. 6 ಲಕ್ಷಕ್ಕಿಂತ ಅಗ್ಗ, 34 ಕಿ.ಮೀವರೆಗೆ ಮೈಲೇಜ್.. 5-ಸೀಟರ್!
ದೇಶೀಯ ಮಾರುಕಟ್ಟೆಯಲ್ಲಿ ಅಗ್ಗದ ಬೆಲೆಯ ಕಾರುಗಳಿಗೆ ಭಾರೀ ಬೇಡಿಕೆಯಿದೆ. ಅದರಲ್ಲೂ ಮಧ್ಯಮ ವರ್ಗದ ಗ್ರಾಹಕರಿಗೆ ನೂತನ ಕಾರೊಂದನ್ನು ಖರೀದಿ ಮಾಡಬೇಕು ಎಂಬುದು ಬಹುದೊಡ್ಡ ಕನಸಾಗಿರುತ್ತದೆ. ಆದರೆ, ಯಾವ ಕಾರನ್ನು ತೆಗೆದುಕೊಳ್ಳಬೇಕು ಎಂಬ ಗೊಂದಲದಲ್ಲಿರುತ್ತಾರೆ. ನೀವು ಹೊಚ್ಚ ಹೊಸ ಕಾರೊಂದನ್ನು ಕೊಂಡುಕೊಳ್ಳಲು ಆಲೋಚಿಸಿದ್ದೀರಾ.. ಹಾಗಾದರೆ, 6 ಲಕ್ಷಕ್ಕಿಂತ ಕಡಿಮೆ ಎಕ್ಸ್-ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿರುವ ಆಲ್ಟೊ ಕೆ10, ಇಗ್ನಿಸ್, ಕ್ವಿಡ್, ಇಕೋ ಹಾಗೂ ಟಿಯಾಗೊ ಕಾರುಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ಬನ್ನಿ, ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಯೋಣ.
ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10):
ಇದೊಂದು ಪ್ರಮುಖ ಹ್ಯಾಚ್‌ಬ್ಯಾಕ್ ಆಗಿದ್ದು, ಅತಿ ಹೆಚ್ಚಿನ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಕಡಿಮೆ ಬೆಲೆ ಹಾಗೂ ಭಾರೀ ಮೈಲೇಜ್‌ಗೂ ಹೆಸರುವಾಸಿಯಾಗಿದೆ. ಕನಿಷ್ಠ ರೂ.4.23 ಲಕ್ಷ ಹಾಗೂ ಗರಿಷ್ಠ ರೂ.6.21 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 5 ಆಸನಗಳನ್ನು ಒಳಗೊಂಡಿದ್ದು, 214 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸ್ಪೀಡಿ ಬ್ಲೂ ಮತ್ತು ಪ್ರೀಮಿಯಂ ಅರ್ಥ್ ಗೋಲ್ಡ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್ ಪಡೆದಿದ್ದು, 24 ರಿಂದ 33.85 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 7-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6-ಏರ್‌ಬ್ಯಾಗ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis):
ಇದು ಕೂಡ ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿ ಹೊರಹೊಮ್ಮಿದೆ. ಹೆಚ್ಚು ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದ್ದು, ಯುವಜನರನ್ನು ತನ್ನತ್ತ ಸೆಳೆಯುತ್ತಿದೆ. ಅದಕ್ಕೆ ತಕ್ಕಂತೆ ರೂ.5.85 ಲಕ್ಷದಿಂದ ರೂ.8.12 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, 260 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

ನೂತನ ಇಗ್ನಿಸ್ ಕೇವಲ 1.2-ಲೀಟರ್ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 20.89 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 7-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಡುಯಲ್ - ಏರ್‌ಬ್ಯಾಗ್‌ಗಳು ಮತ್ತು ರೇರ್ ಪಾರ್ಕಿಂಗ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.
ರೆನಾಲ್ಟ್ ಕ್ವಿಡ್ (Renault Kwid):
ಈ ಹ್ಯಾಚ್‌ಬ್ಯಾಕ್ ವಿಶ್ವಾಸಾರ್ಹತೆ ಹಾಗೂ ಉತ್ತಮವಾದ ಕಾರ್ಯಕ್ಷಮತೆಯಿಂದ ಹೆಚ್ಚು ಮನೆ ಮಾತಾಗಿದೆ. ಕನಿಷ್ಠ ರೂ.4.70 ಲಕ್ಷ ಮತ್ತು ಗರಿಷ್ಠ ರೂ.6.45 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 21 ರಿಂದ 22 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. 8 ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಮಾರುತಿ ಸುಜುಕಿ ಇಕೋ (Maruti Suzuki Eeco):
ಇದೊಂದು ಫ್ಯಾಮಿಲಿ ಕಾರಾಗಿದೆ. ಅತಿ ಕಡಿಮೆ ಬೆಲೆಯಲ್ಲೂ ಖರೀದಿಗೆ ದೊರೆಯುತ್ತದೆ. ರೂ.5.70 ಲಕ್ಷದಿಂದ ರೂ.6.96 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಒಳಗೊಂಡಿದೆ. 1.2-ಲೀಟರ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್ ಪಡೆದಿದ್ದು, 19 ರಿಂದ 27 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 5/ 7 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಸೆಮಿ ಡಿಜಿಟಲ್ ಸ್ಪೀಡೋಮೀಟರ್ ಮತ್ತು 6 ಏರ್‌ಬ್ಯಾಗ್‌ಗಳು ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಟಾಟಾ ಟಿಯಾಗೊ (Tata Tiago):
ಈ ಹ್ಯಾಚ್‌ಬ್ಯಾಕ್ ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಕನಿಷ್ಠ ರೂ.5 ಲಕ್ಷ ಹಾಗೂ ಗರಿಷ್ಠ ರೂ.8.55 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಹೊಂದಿದ್ದು, 19 ರಿಂದ 28 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. 10.25-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.


Click it and Unblock the Notifications