ಜನ ಮನಸೋತಿರುವ 5 ಕಾಂಪ್ಯಾಕ್ಟ್ ಎಸ್‌ಯುವಿಗಳಿವು.. ಕಾಸು ಕೂಡಿಡಿ.. ಪ್ರಮಾಣವು ಆರಾಮದಾಯಕ!
ಮೈಕ್ರೋ ಎಸ್‌ಯುವಿಗಳು ಸಣ್ಣ ಗಾತ್ರದಲ್ಲಿರುತ್ತವೆ. ಇವುಗಳಲ್ಲಿ ದೂರದ ಊರುಗಳಿಗೆ ಪ್ರಯಾಣಿಸುವುದು ಕೊಂಚ ಮಟ್ಟಿಗೆ ಕಷ್ಟ ಸಾಧ್ಯ.. ಪುಲ್-ಸೈಜ್ ಎಸ್‌ಯುವಿಗಳು ಬಹಳಷ್ಟು ದೊಡ್ಡದಾಗಿರುತ್ತವೆ. ಜೊತೆಗೆ ದುಬಾರಿ ಬೆಲೆಯನ್ನು ಹೊಂದಿರುತ್ತವೆ. ಇದರಿಂದಾಗಿ ಹಲವು ಖರೀದಿದಾರರು ಕಾಂಪ್ಯಾಕ್ಟ್ ಎಸ್‌ಯುವಿಗಳ ಮೊರೆ ಹೋಗುತ್ತಾರೆ. ಈ ಕಾರುಗಳು ಸ್ವಲ್ಪ ವಿಶಾಲವಾಗಿರಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಓಡಾಟ ನಡೆಸಬಹುದಾಗಿದೆ. ಅದಕ್ಕೆ ತಕ್ಕಂತೆ ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಲಭ್ಯವಾಗಲಿವೆ.
ನೀವು ಹೊಚ್ಚ ಹೊಸ ಕಾಂಪ್ಯಾಕ್ಟ್ ಎಸ್‌ಯುವಿಯೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ ಹ್ಯುಂಡೈ ಕ್ರೆಟಾ, ಹೋಂಡಾ ಎಲಿವೇಟ್, ಸ್ಕೋಡಾ ಕುಶಾಕ್, ಟೊಯೊಟಾ ಅರ್ಬನ್ ಕ್ರೂಸರ್ ಹೈಬ್ರಿಡ್ ಮತ್ತು ಎಂಜಿ ಹೆಕ್ಟರ್‌ಗಳು ಬೆಸ್ಟ್ ಚಾಯ್ಸ್ ಆಗಲಿವೆ. ಬನ್ನಿ, ಈ ಕಾರುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಹ್ಯುಂಡೈ ಕ್ರೆಟಾ (Hyundai Creta):
ಇದು ಪ್ರಖ್ಯಾತ ಎಸ್‌ಯುವಿಯಾಗಿ ಹೊರಹೊಮ್ಮಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.10.73 ಲಕ್ಷದಿಂದ ರೂ.20.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಅಟ್ಲಾಸ್ ವೈಟ್, ಅಬಿಸ್ ಬ್ಲ್ಯಾಕ್, ಟೈಟಾನ್ ಗ್ರೇ, ಫಿಯರಿ ರೆಡ್, ರೇಂಜರ್ ಖಾಕಿ ಮತ್ತು ಬ್ಲ್ಯಾಕ್ ಮ್ಯಾಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 190 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,610 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.
ನೂತನ 'ಕ್ರೆಟಾ' 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 17 ರಿಂದ 21 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5-ಆಸನಗಳಿದ್ದು, 10.25 ಇಂಚಿನ ಡುಯಲ್ ಡಿಸ್‌ಪ್ಲೇ (ಇನ್ಫೋಟೈನ್‌ಮೆಂಟ್ ಸಿಸ್ಟಮ್ - ಇನ್ಸ್ಟ್ರುಮೆಂಟ್ ಕ್ಲಸ್ಟರ್) ಸನ್‌ರೂಫ್ ಹಾಗೂ 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಹೋಂಡಾ ಎಲಿವೇಟ್ (Honda Elevate):
ಈ ಕಾರನ್ನು ಕಾಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಮಾರಾಟಗೊಳಿಸಲಾಗುತ್ತಿದೆ. ರೂ.11 ಲಕ್ಷದಿಂದ ರೂ.16.67 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಫೀನಿಕ್ಸ್ ಆರೆಂಜ್ ಪರ್ಲ್, ಅಬ್ಸಿಡಿಯನ್ ಬ್ಲೂ ಪರ್ಲ್, ರೇಡಿಯಂಟ್ ರೆಡ್ ಮೆಟಾಲಿಕ್, ಲೂನಾರ್ ಸಿಲ್ವರ್ ಮೆಟಾಲಿಕ್ ಹಾಗೂ ಪ್ಲಾಟಿನಂ ವೈಟ್ ಪರ್ಲ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. 220 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,650 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.
ಹೊಸ 'ಎಲಿವೇಟ್' 1.5-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 15 ರಿಂದ 17 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 5-ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7 ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಸ್ಕೋಡಾ ಕುಶಾಕ್ (Skoda Kushaq):
ಇದೊಂದು ಜನಪ್ರಿಯ ಕಾಂಪ್ಯಾಕ್ಟ್ ಎಸ್‌ಯುವಿಯಾಗಿದೆ. ರೂ.10.61 ಲಕ್ಷದಿಂದ ರೂ.18.43 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 18.86 ರಿಂದ 19.76 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5-ಆಸನಗಳನ್ನು ತನ್ನದಾಗಿಸಿಕೊಂಡಿದೆ. 10 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ & 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.
ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder):
ಈ ಕಾರು ಪ್ರಮುಖ ಕಾಂಪ್ಯಾಕ್ಟ್ ಎಸ್‌ಯುವಿ ಎಂದೇ ಹೆಸರುವಾಸಿಯಾಗಿದೆ. ರೂ.10.95 ಲಕ್ಷದಿಂದ ರೂ.19.76 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಡಿದೆ. 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಮತ್ತು 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 19 ರಿಂದ 28 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 5-ಆಸನಗಳಿದ್ದು, 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಎಂಜಿ ಹೆಕ್ಟರ್ (MG Hector):
ಇದು ನಂಬಿಕಾರ್ಹ ಕಾಂಪ್ಯಾಕ್ಟ್ ಎಸ್‌ಯುವಿಯಾಗಿದೆ. ರೂ.11.99 ಲಕ್ಷದಿಂದ ರೂ.19.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 12.34 ರಿಂದ 13.79 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5-ಆಸನ ಆಯ್ಕೆ ವ್ಯವಸ್ಥೆವನ್ನು ಪಡೆದಿದೆ. 14 ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್ ಹಾಗೂ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.


Click it and Unblock the Notifications








