ಮೈಲೇಜ್‌ನಲ್ಲಿ ರಾಜಿಯಿಲ್ಲ! ಕೈಗೆಟುಕುವ ಬೆಲೆಯಲ್ಲಿ ಸಿಗುವ 5 ಬೆಸ್ಟ್ ಕಾಂಪ್ಯಾಕ್ಟ್ ಎಸ್‌ಯುವಿಗಳು

ಭಾರತವು ಅತಿದೊಡ್ಡ ಕಾರು ಮಾರುಕಟ್ಟೆಯನ್ನು ಹೊಂದಿದೆ. ಹ್ಯಾಚ್‌ಬ್ಯಾಕ್, ಸೆಡಾನ್ ಹಾಗೂ ಎಂಪಿವಿಗಳಿಗೆ ಹೋಲಿಕೆ ಮಾಡಿದರೆ, ಎಸ್‌ಯುವಿ (ಸ್ಪೋರ್ಟ್ಸ್ ಯುಟಿಲಿಟಿ ವೆಹಿಕಲ್) ವಿಭಾಗವು ವೇಗವಾಗಿ ಬೆಳೆಯುತ್ತಿದೆ. ಅದರಲ್ಲೂ ಮೈಕ್ರೋ ಮತ್ತು ಫುಲ್-ಸೈಜ್ ಎಸ್‌ಯುವಿಗಳಿಗಿಂತ ಕಾಂಪ್ಯಾಕ್ಟ್ ಎಸ್‌ಯುವಿಗಳಿಗೆ ಭಾರೀ ಬೇಡಿಕೆಯಿದೆ. ಇವು ನೋಡಲು ತುಂಬಾ ಚೆನ್ನಾಗಿದ್ದು, ಹತ್ತಾರು ಆಕರ್ಷಕವಾದ ವೈಶಿಷ್ಟ್ಯಗಳನ್ನು ಪಡೆದುಕೊಂಡಿವೆ. ಜೊತೆಗೆ ಉತ್ತಮವಾದ ಕಾರ್ಯಕ್ಷಮತೆಯಿಂದಲೂ ಹೆಸರುವಾಸಿಯಾಗಿವೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿ ಮಾಡಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ ಮಾರುತಿ ಸುಜುಕಿ ವಿಕ್ಟೋರಿಸ್, ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೋಸ್, ಹೋಂಡಾ ಎಲಿವೇಟ್ ಮತ್ತು ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್‌ಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ಬನ್ನಿ, ಈ 5 ಕಾಂಪ್ಯಾಕ್ಟ್ ಎಸ್‌ಯುವಿಗಳ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris):

ಇದೊಂದು ಜನಪ್ರಿಯ ಕಾಂಪ್ಯಾಕ್ಟ್ ಎಸ್‌ಯುವಿಯಾಗಿದೆ. ರೂ.10.50 ಲಕ್ಷದಿಂದ ರೂ.19.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಮಿಸ್ಟಿಕ್ ಗ್ರೀನ್, ಸಿಜ್ಲಿಂಗ್ ರೆಡ್, ಬ್ಲ್ಯೂಯಿಸ್ ಬ್ಲ್ಯಾಕ್, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಮತ್ತು ಪರ್ಲ್ ಆರ್ಕ್ಟಿಕ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು.

Best 5 Compact SUVs Victoris Creta Seltos Elevate And Nexon

ನೂತನ 'ವಿಕ್ಟೋರಿಸ್' 1.5-ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಹಾಗೂ 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 21 ರಿಂದ 29 ಕಿ.ಮೀವರಗೆ ಮೈಲೇಜ್ ನೀಡುತ್ತದೆ. 10.1 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೋರಮಿಕ್ ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಹ್ಯುಂಡೈ ಕ್ರೆಟಾ (Hyundai Creta):

ಈ ಕಾಂಪ್ಯಾಕ್ಟ್ ಎಸ್‌ಯುವಿಯನ್ನು ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ರೂ.11.11 ಲಕ್ಷದಿಂದ ರೂ.20.50 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಅಟ್ಲಾಸ್ ವೈಟ್, ಅಬಿಸ್ ಬ್ಲ್ಯಾಕ್, ಟೈಟಾನ್ ಗ್ರೇ, ಫಿಯರಿ ರೆಡ್, ರೇಂಜರ್ ಖಾಕಿ ಮತ್ತು ರೋಬಸ್ಟ್ ಎಮರಾಲ್ಡ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು.

Best 5 Compact SUVs Victoris Creta Seltos Elevate And Nexon

ಹೊಸ 'ಕ್ರೆಟಾ' 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 17 ರಿಂದ 21 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 10.25 ಇಂಚಿನ ಡುಯಲ್ ಡಿಸ್‌ಪ್ಲೇ (ಇನ್ಫೋಟೈನ್‌ಮೆಂಟ್ ಸಿಸ್ಟಮ್‌ & ಇನ್ಸ್ಟ್ರುಮೆಂಟ್ ಕ್ಲಸ್ಟರ್), ಸನ್‌ರೂಫ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜಿಂಗ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಕಿಯಾ ಸೆಲ್ಟೋಸ್ (Kia Seltos):

ಇದು ಪ್ರಮುಖ ಕಾಂಪ್ಯಾಕ್ಟ್ ಎಸ್‌ಯುವಿಯಾಗಿ ಹೊರಹೊಮ್ಮಿದೆ. ರೂ.10.79 ಲಕ್ಷದಿಂದ ರೂ.19.81 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ & 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 17 ರಿಂದ 21 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. 10.25 ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್‌ ಮತ್ತು 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

Best 5 Compact SUVs Victoris Creta Seltos Elevate And Nexon

ಹೋಂಡಾ ಎಲಿವೇಟ್ (Honda Elevate):

ಈ ಕಾಂಪ್ಯಾಕ್ಟ್ ಎಸ್‌ಯುವಿಯನ್ನು ಖರೀದಿದಾರರು ಇಷ್ಟಪಟ್ಟು ಕೊಂಡುಕೊಳ್ಳುತ್ತಾರೆ. ಅದಕ್ಕೆ ತಕ್ಕಂತೆ ರೂ.11 ಲಕ್ಷದಿಂದ ರೂ.16.15 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.5-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 15 ರಿಂದ 17 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

Best 5 Compact SUVs Victoris Creta Seltos Elevate And Nexon

ಟಾಟಾ ನೆಕ್ಸಾನ್ (Tata Nexon):

ಇದೊಂದು ನಂಬಿಕಾರ್ಹ ಕಾಂಪ್ಯಾಕ್ಟ್ ಎಸ್‌ಯುವಿಯಾಗಿದೆ. ರೂ.7.32 ಲಕ್ಷದಿಂದ ರೂ.14.05 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್, 1.5 ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಮತ್ತು 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್+ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 17 ರಿಂದ 24 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

Article Published On: Friday, November 21, 2025, 11:21 [IST]
English summary
Best 5 compact suvs victoris creta seltos elevate and nexon
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+