2025ರಲ್ಲಿ ಖರೀದಿಗೆ ಲಭ್ಯವಿರುವ 5 ಕೂಪೆ ಸ್ಟೈಲ್ SUVಗಳು.. ನೋಡುವುದಕ್ಕೂ ಆಕರ್ಷಕ! ಬೆಲೆ ಎಷ್ಟು, ವಿಶೇಷತೆಗಳೇನು?
ಭಾರತದ ಮಾರುಕಟ್ಟೆಯಲ್ಲಿ ಕೂಪೆ ಸ್ಟೈಲ್ ಎಸ್‌ಯುವಿಗಳಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಇವು ಸ್ಪೋರ್ಟಿ ವಿನ್ಯಾಸ ಹೊಂದಿದ್ದು, ಇಳಿಜಾರಾದ ರೂಫ್‌ನ್ನು ಹೊಂದಿರುತ್ತವೆ. ಜೊತೆಗೆ ಈ ಕಾರುಗಳ ಆಕರ್ಷಕ ನೋಟ ಪ್ರತಿಯೊಬ್ಬರನ್ನು ಸೆಳೆಯುವಂತಿದೆ. ನೀವು ಹೊಸದೊಂದು ಕೂಪೆ ಆಕಾರದ ಎಸ್‌ಯುವಿ ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ, 2025ರಲ್ಲಿ ಸ್ಪರ್ಧಾತ್ಮಕ ಬೆಲೆಗೆ ಸಿಗುವ ಈ ಟಾಟಾ ಕರ್ವ್, ಮಹೀಂದ್ರಾ ಬಿ6, ಮಹೀಂದ್ರಾ ಎಕ್ಸ್ಇವಿ 9ಇ, ಸಿಟ್ರನ್ ಬಸಾಲ್ಟ್ ಹಾಗೂ ವಿನ್‌ಫಾಸ್ಟ್ ವಿಎಫ್7ಗಳು ಬೆಸ್ಟ್ ಚಾಯ್ಸ್ ಆಗಲಿವೆ. ಬನ್ನಿ.. ಇವುಗಳ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಟಾಟಾ ಕರ್ವ್ (Tata Curvv):
ಇದು ಜನಪ್ರಿಯ ಕೂಪೆಯಾಗಿದೆ. ಕನಿಷ್ಠ ರೂ.9.66 ಲಕ್ಷ ಹಾಗೂ ಗರಿಷ್ಠ ರೂ.18.85 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ನೋಡಲು ತುಂಬಾ ಚೆಂದದ ವಿನ್ಯಾಸವನ್ನು ಒಳಗೊಂಡಿದೆ. ಪ್ಯೂರ್ ಗ್ರೇ, ಡೇಟೋನಾ ಗ್ರೇ, ಫ್ಲೇಮ್ ರೆಡ್, ಒಪೇರಾ ಬ್ಲ್ಯೂ ಮತ್ತು ಪ್ರೈಸ್ಟೈನ್ ವೈಟ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 208 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,560 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ನೂತನ 'ಕರ್ವ್' 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. 1.2-ಲೀ.ಟರ್ಬೊ ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿದೆ. 13 ರಿಂದ 17 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಮತ್ತು ಸನ್‌ರೂಫ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ಮಹೀಂದ್ರಾ ಬಿಇ 6 (Mahindra BE 6):
ಈ ಎಸ್‌ಯುವಿಯು ಕೂಪೆ ಸ್ಟೈಲ್‌ನಲ್ಲಿದೆ. ರೂ.18.90 ಲಕ್ಷದಿಂದ ರೂ.27.79 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ತನ್ನದಾಗಿಸಿಕೊಂಡಿದೆ. ಎವರೆಸ್ಟ್ ವೈಟ್, ಸ್ಟೆಲ್ತ್ ಬ್ಲ್ಯಾಕ್, ಡೆಸರ್ಟ್ ಮಿಸ್ಟ್, ಡೀಪ್ ಫಾರೆಸ್ಟ್, ಟ್ಯಾಂಗೋ ರೆಡ್, ಫೈರ್‌ಸ್ಟಾರ್ಮ್ ಆರೆಂಜ್, ನಪೋಲಿ ಬ್ಲ್ಯಾಕ್ ಮತ್ತು ಡೆಸರ್ಟ್ ಮಿಸ್ಟ್ ಸ್ಯಾಟಿನ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 207 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,775 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಹೊಸ 'ಬಿಇ 6' ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 59 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 79 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 556 ರಿಂದ 682 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 12.3-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಚಾರ್ಜರ್‌ಗಳು ಮತ್ತು ಕೀಲೆಸ್ ಎಂಟ್ರಿಯಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಮಹೀಂದ್ರಾ ಎಕ್ಸ್ಇವಿ 9ಇ (Mahindra XEV 9e):
ಇದೊಂದು ಪ್ರಖ್ಯಾತ ಕೂಪೆ ಸ್ಟೈಲ್ ಎಸ್‌ಯುವಿಯಾಗಿದೆ. ಕನಿಷ್ಠ ರೂ.22.40 ಲಕ್ಷ ಮತ್ತು ಗರಿಷ್ಠ ರೂ.31.25 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 5 ಆಸನಗಳನ್ನು ಹೊಂದಿದೆ. 59 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) & 79 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ತನ್ನದಾಗಿಸಿಕೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 542 ರಿಂದ 656 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ & ಪ್ಯಾಸೆಂಜರ್ ಸೈಡ್ ಡಿಸ್‌ಪ್ಲೇಗಾಗಿ 12.3-ಇಂಚಿನ ಸ್ಕ್ರೀನ್ ಮತ್ತು 7-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಸಿಟ್ರನ್ ಬಸಾಲ್ಟ್ (Citroen Basalt):
ಈ ಕೂಪೆ ಎಸ್‌ಯುವಿಯು ಹೆಚ್ಚು ಅತ್ಯಾಧುನಿಕವಾಗಿದೆ. ರೂ.7.95 ಲಕ್ಷದಿಂದ ರೂ.13.11 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀ. ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 18 ರಿಂದ 19.5 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಮತ್ತು 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ವಿನ್‌ಫಾಸ್ಟ್ ವಿಎಫ್7 (VinFast VF7):
ಇದು ಕೂಪೆ ಸ್ಟೈಲ್ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಕನಿಷ್ಠ ರೂ.20.89 ಲಕ್ಷ ಹಾಗೂ ಗರಿಷ್ಠ ರೂ.25,49 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. 59.6 ಕಿಲೋವ್ಯಾಟ್ ಮತ್ತು 70.8 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 438 ಕಿಲೋಮೀಟರ್ ರಿಂದ 532 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 12.9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ & 7-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.


Click it and Unblock the Notifications








