Tata Sierra: ಹೊಸ ಟಾಟಾ ಸಿಯೆರಾ ಹೊಂದಿರುವ 5 ಬೊಂಬಾಟ್ ಫೀಚರ್‌ಗಳಿವು!

ಬಹುನಿರೀಕ್ಷಿತ ಟಾಟಾ ಸಿಯೆರಾ (Tata Sierra) ಎಸ್‌ಯುವಿಯನ್ನು ಶನಿವಾರ ಅನಾವರಣಗೊಳಿಸಲಾಯಿತು. ವಿಶೇಷವಾಗಿ ಐಸಿಇ ಮಾಡೆಲ್‌ನ್ನು ಪರಿಚಯಿಸಲಾಗಿದೆ. ಇದು ಕನಿಷ್ಠ ರೂ.11 ಲಕ್ಷ ಹಾಗೂ ಗರಿಷ್ಠ ರೂ.20 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರುವ ನಿರೀಕ್ಷೆಯಿದೆ. 1.5-ಲೀ. ಪೆಟ್ರೋಲ್ ಮತ್ತು 1.5-ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. ನವೆಂಬರ್ 25 ರಂದು ಬಿಡುಗಡೆಯಾಗಲಿದೆ. ಈ ಕಾರು 5 ಅದ್ಭುತವಾದ ವೈಶಿಷ್ಟ್ಯಗಳನ್ನು ಪಡೆದಿದೆ. ಬನ್ನಿ, ಆ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಟ್ರಿಪಲ್ ಸ್ಕ್ರೀನ್ ಸೆಟಪ್:

ನೂತನ 'ಸಿಯೆರಾ' ಒಳಗೊಂಡಿರುವ ಪ್ರಮುಖ ವೈಶಿಷ್ಟ್ಯವಾಗಿದೆ. ಇದು ವಿಶಾಲವಾದ ಡಿಜಿಟಲ್ ಡ್ರೈವರ್ ಡಿಸ್​ಪ್ಲೇ, ಟಚ್‌ಸ್ಕ್ರೀನ್ ಸೆಂಟ್ರಲ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಪ್ಯಾಸೆಂಜರ್ ಸೈಡ್ ಡಿಸ್​ಪ್ಲೇಯನ್ನು ಒಳಗೊಂಡಿದೆ. ವೈರ್‌ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇಯನ್ನು ಹೊಂದಿದೆ.

Best 5 Features Of The Tata Sierra Suv Details

ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್):

ಇದೊಂದು ಬಹುಮುಖ್ಯವಾದ ಸುರಕ್ಷತಾ ವೈಶಿಷ್ಟ್ಯವಾಗಿದೆ. ಟಾಟಾ ಹ್ಯಾರಿಯರ್ ಹಾಗೂ ಸಫಾರಿಯಂತೆ 'ಸಿಯೆರಾ'ದಲ್ಲೂ ಎಡಿಎಎಸ್ ನೀಡಲಾಗಿದೆ. ಈ ಸೇಫ್ಟಿ ಪ್ಯಾಕೇಜ್‌ ಲೇನ್ ಕೀಪ್ ಅಸಿಸ್ಟ್, ಆಟೋ ಎಮರ್ಜೆನ್ಸಿ ಬ್ರೇಕಿಂಗ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್ ಹಾಗೂ ಬ್ಲೈಂಡ್ ಸ್ಪಾಟ್ ಮಾನಿಟರಿಂಗ್ ಸೇರಿದಂತೆ ವಿವಿಧ ರಕ್ಷಣಾತ್ಮಕ ಅಂಶಗಳನ್ನು ಒಳಗೊಂಡಿದೆ. ಇದರೊಂದಿಗೆ 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಪನೋರಮಿಕ್ ಸನ್‌ರೂಫ್:

ಸದ್ಯ ದೇಶೀಯವಾಗಿ ಖರೀದಿಗೆ ದೊರೆಯುವ ಹಲವು ಮಿಡ್-ಸೈಜ್ ಎಸ್‌ಯುವಿಗಳು 'ಪನೋರಮಿಕ್ ಸನ್‌ರೂಫ್'ನ್ನು ಪಡೆದಿವೆ. ನೂತನ 'ಸಿಯೆರಾ'ದಲ್ಲೂ ಈ ವೈಶಿಷ್ಟ್ಯವನ್ನು ನೀಡಲಾಗಿದೆ. ಇದು ಸಾಮಾನ್ಯ ಸನ್‌ರೂಫ್‌ಗಿಂತ ದೊಡ್ಡದಾಗಿರುತ್ತದೆ. ಕಾರಿನೊಳಗೆ ಹೆಚ್ಚು ಬೆಳಕು ಬರುವಂತೆ ಮಾಡುತ್ತದೆ. ಜೊತೆಗೆ ಪ್ರಿಮಿಯಂ ಲುಕ್‌ನ್ನು ಒದಗಿಸಬಲ್ಲದು.

ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್ ಸಿಸ್ಟಮ್‌:

ಇದು ಅತ್ಯುತ್ತಮವಾದ ವೈಶಿಷ್ಟ್ಯವಾಗಿದೆ. 'ಟಾಟಾ ಸಿಯೆರಾ'ದಲ್ಲೂ ಬಳಕೆ ಮಾಡಲಾಗಿದೆ. ಡ್ರೈವರ್ & ಕೋ ಡ್ರೈವರ್ ಸೈಡ್‍ಗಳಲ್ಲಿ ಪ್ರತ್ಯೇಕವಾಗಿ ಟೆಂಪರೇಚರ್ ಸೆಟ್ಟಿಂಗ್‌ ಮಾಡಲು ಸಾಧ್ಯವಾಗಲಿದೆ. ಈ ಮೊದಲು 'ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್' ಎಂಬುದು ಟಾಟಾ ಹ್ಯಾರಿಯರ್ ಮತ್ತು ಸಫಾರಿ ಕಾರುಗಳಲ್ಲಿ ಲಭ್ಯವಿತ್ತು.

12 ಸ್ಪೀಕರ್ ಬಿಜಿಎಲ್ ಸೌಂಡ್ ಸಿಸ್ಟಮ್:

ಹೊಸ 'ಟಾಟಾ ಸಿಯೆರಾ' ಡಾಲ್ಬಿ ಅಟ್ಮಾಸ್‌ನೊಂದಿಗೆ 12 ಸ್ಪೀಕರ್ ಪ್ರೀಮಿಯಂ ಬಿಜಿಎಲ್ ಸೌಂಡ್ ಸಿಸ್ಟಮ್‌ ಆಯ್ಕೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಿದೆ. ಇದು ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಸುಮಧುರವಾದ ಸಂಗೀತ ಕೇಳಲು ಅನುವು ಮಾಡಿಕೊಡುತ್ತದೆ.

ವಿನ್ಯಾಸವು ಚೆನ್ನಾಗಿದೆ & ಆಕರ್ಷಕ ಬಣ್ಣಗಳೊಂದಿಗೂ ಲಭ್ಯ:

ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು & ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಅಂಡಮಾನ್ ಅಡ್ವೆಂಚರ್ (ಯೆಲ್ಲೋ), ಬೆಂಗಾಲ್ ರೂಜ್ (ರೆಡ್), ಕೂರ್ಗ್ ಕ್ಲೌಡ್ಸ್ (ಸಿಲ್ವರ್), ಮುನ್ನಾರ್ ಮಿಸ್ಟ್ (ಗ್ರೀನ್), ಮಿಂಟಲ್ ಗ್ರೇ ಮತ್ತು ಪ್ರಿಸ್ಟೀನ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಟಾಟಾ ಸಿಯೆರಾಗೆ ಹಲವು ಪ್ರತಿಸ್ಪರ್ಧಿಗಳಿವೆ:

ಈ ಕಾರಿಗೆ ಸಾಲು - ಸಾಲು ಎದುರಾಳಿಯಾಗಿವೆ. ಬಹುಮುಖ್ಯವಾಗಿ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್, ಮಹೀಂದ್ರಾ ಥಾರ್ ರಾಕ್ಸ್, ಎಂಜಿ ಹೆಕ್ಟರ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ಟೊಯೊಟಾ ಅರ್ಬನ್ ಕ್ರೂಸರ್ ಹೈ ರೈಡರ್, ಮಾರುತಿ ಸುಜುಕಿ ಫ್ರಾಂಕ್ಸ್, ಟಾಟಾ ನೆಕ್ಸಾನ್, ಟಾಟಾ ಕರ್ವ್, ಕಿಯಾ ಸೆಲ್ಟೋಸ್ ಮತ್ತು ಹ್ಯುಂಡೈ ಕ್ರೆಟಾಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

ಟಾಟಾ ಸಿಯೆರಾ ಇವಿಯು ಬಿಡುಗಡೆಯಾಗಲಿದೆ:

2026ರ ಜನವರಿಯಲ್ಲಿ ನೂತನ 'ಟಾಟಾ ಸಿಯೆರಾ ಇವಿ' ಕೂಡ ಮಾರಾಟಕ್ಕೆ ಬರುವ ನೀರಿಕ್ಷೆಯಿದೆ. ರೂ.15 ಲಕ್ಷ ಎಕ್ಸ್-ಶೋರೂಂ ದರವನ್ನು ಹೊಂದಿರುವ ಸಾಧ್ಯತೆಯಿದೆ. 65 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 75 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿರಲಿದೆ. ಭರ್ತಿ ಚಾರ್ಜ್‌ನಲ್ಲಿ 627 ಕಿ.ಮೀ ವರೆಗೆ ರೇಂಜ್ (ಮೈಲೇಜ್) ನೀಡಬಹುದು ಎಂದು ಅಂದಾಜಿಸಲಾಗಿದೆ.

More from DriveSpark

Article Published On: Monday, November 17, 2025, 13:45 [IST]
English summary
Best 5 features of the tata sierra suv details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+