Maruti: ಇಲ್ಲಿವೆ ನೋಡಿ ಅಗ್ಗದ 5 ಮಾರುತಿ ಕಾರುಗಳು.. 3.50 ಲಕ್ಷದಿಂದ ಶುರು.. 33 Km ಮೈಲೇಜ್, 5-ಸೀಟರ್!
ಮಾರುತಿ ಸುಜುಕಿ (Maruti Suzuki) ಜನಪ್ರಿಯ ವಾಹನ ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ಸೆ.22 ರಿಂದ ಜಿಎಸ್‌ಟಿ ಪರಿಷ್ಕರಣೆಗೊಂಡಿದೆ. ಕಂಪನಿಯ ಕಾರುಗಳ ಬೆಲೆಯೂ ಇಳಿಕೆಯಾಗಿದೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ ಎಸ್-ಪ್ರೆಸ್ಸೊ, ಆಲ್ಟೊ ಕೆ10, ವ್ಯಾಗನ್ಆರ್, ಇಕೋ ಹಾಗೂ ಸ್ವಿಫ್ಟ್‌ಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso):
ಇದೊಂದು ಪ್ರಮುಖ ಹ್ಯಾಚ್‌ಬ್ಯಾಕ್ ಆಗಿದೆ. ಅತಿ ಕಡಿಮೆ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯಲಿದ್ದು, ರೂ.3.50 ಲಕ್ಷದಿಂದ ರೂ.5.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಸಾಲಿಡ್ ಫೈರ್ ರೆಡ್, ಬ್ಲೂಯಿಶ್ ಬ್ಲ್ಯಾಕ್, ಮೆಟಾಲಿಕ್ ಗ್ರಾನೈಟ್ ಗ್ರೇ ಮತ್ತು ಮೆಟಾಲಿಕ್ ಸಿಲ್ಕಿ ಸಿಲ್ವರ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,380 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

ಈ ಹ್ಯಾಚ್‌ಬ್ಯಾಕ್ 1-ಲೀ. ಪೆಟ್ರೋಲ್ & 1-ಲೀ. ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 24 ರಿಂದ 33 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡಬಲ್ಲದು. 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಯುಎಸ್‌ಬಿ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 2-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ.
ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10):
ಇದು ಜಗಮೆಚ್ಚಿದ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ದಶಕಗಳಿಂದ ಗ್ರಾಹಕರ ಮನ ಗೆದ್ದಿದೆ. ರೂ.3.70 ಲಕ್ಷದಿಂದ ರೂ.5.45 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಮೆಟಾಲಿಕ್ ಸಿಲ್ಕಿ ಸಿಲ್ವರ್, ಸಾಲಿಡ್ ವೈಟ್, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸ್ಪೀಡಿ ಬ್ಲೂ ಮತ್ತು ಮೆಟಾಲಿಕ್ ಸಿಜ್ಲಿಂಗ್ ರೆಡ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 167 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,380 ಮಿ.ಮೀ ವೀಲ್‌ಬೇಸ್‌ನ್ನು ತನ್ನದಾಗಿಸಿಕೊಂಡಿದೆ.

ಹೊಸ 'ಆಲ್ಟೊ ಕೆ10' ಕಾರು 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1-ಲೀ. ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 24 ರಿಂದ 34 ಕಿಲೋಮೀಟರ್‌ವರೆಗೆ ಮೈಲೇಜ್ ನೀಡಬಲ್ಲದು. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 4 ಸ್ಪೀಕರ್ ಮ್ಯೂಸಿಕ್ ಸಿಸ್ಟಮ್ ಹಾಗೂ ಕೀಲೆಸ್ ಎಂಟ್ರಿಯಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.
ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR):
ಈ ಹ್ಯಾಚ್‌ಬ್ಯಾಕ್‌ನ್ನು ಎಲ್ಲ ವರ್ಗದ ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ದೇಶೀಯ ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ರೂ.5 ಲಕ್ಷದಿಂದ ರೂ.6.95 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1-ಲೀ. ಪೆಟ್ರೋಲ್, 1.2-ಲೀ. ಪೆಟ್ರೋಲ್ ಮತ್ತು 1-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 23 ರಿಂದ 34 ಕಿ.ಕಿಲೋಮೀಟರ್‌ವರೆಗೆ ಮೈಲೇಜ್ ಕೊಡಬಲ್ಲದು. 5 ಆಸನಗಳನ್ನು ಒಳಗೊಂಡಿದೆ. 7-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ & 6-ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಮಾರುತಿ ಸುಜುಕಿ ಇಕೋ (Maruti Suzuki Eeco):
ಇದೊಂದು ಎಂಪಿವಿಯಾಗಿದೆ. ಅತ್ಯುತ್ತಮವಾದ ಫ್ಯಾಮಿಲಿ ಕಾರಾಗಿಯೂ ಹೊರಹೊಮ್ಮಿದೆ. ರೂ.5.21 ಲಕ್ಷದಿಂದ ರೂ.6.36 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2-ಲೀ. ಪೆಟ್ರೋಲ್ ಹಾಗೂ 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 19 ರಿಂದ 26 ಕಿಲೋಮೀಟರ್‌ವರೆಗೆ ಮೈಲೇಜ್ ನೀಡಬಲ್ಲದು. 5 ಅಥವಾ 6 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ. ಸೆಮಿ-ಡಿಜಿಟಲ್ ಸ್ಪೀಡೋಮೀಟರ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift):
ಈ ಹ್ಯಾಚ್‌ಬ್ಯಾಕ್‌ನ್ನು ಖರೀದಿದಾರರು ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ರೂ.5.79 ಲಕ್ಷದಿಂದ ರೂ.8.80 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 24 ರಿಂದ 33 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡಬಲ್ಲದು. 5 ಆಸನಗಳನ್ನು ಪಡೆದಿದೆ. 9 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ & 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.


Click it and Unblock the Notifications








