ಬೈಕ್‌ನಂತೆ ಮೈಲೇಜ್.. ರೂ.5.50 ಲಕ್ಷದಿಂದ ಶುರು, ಜನ ಮೆಚ್ಚಿದ 5 ಪ್ರಮುಖ ಪೆಟ್ರೋಲ್ ಎಸ್‌ಯುವಿಗಳು!
ಭಾರತದಲ್ಲಿ ಎಸ್‌ಯುವಿಗಳಿಗೆ ವಿಪರೀತ ಬೇಡಿಕೆಯಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿ ಮಾಡಲು ಆಲೋಚಿದ್ದೀರಾ.. ಹಾಗಾದರೆ ಟಾಟಾ ಪಂಚ್, ನಿಸ್ಸಾನ್ ಮ್ಯಾಗ್ನೈಟ್, ರೆನಾಲ್ಟ್ ಕೈಗರ್, ಹ್ಯುಂಡೈ ಎಕ್ಸ್‌ಟರ್ ಹಾಗೂ ಮಾರುತಿ ಸುಜುಕಿ ಫ್ರಾಂಕ್ಸ್ ಪೆಟ್ರೋಲ್ ಎಸ್‌ಯುವಿಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಟಾಟಾ ಪಂಚ್ (Tata Punch):
ಇದು ಪ್ರಮುಖ ಎಸ್‌ಯುವಿಯಾಗಿದೆ. ಕನಿಷ್ಠ ರೂ.5.50 ಲಕ್ಷ ಹಾಗೂ ಗರಿಷ್ಠ ರೂ.9.30 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಟ್ರಾಪಿಕಲ್ ಮಿಸ್ಟ್, ಡೇಟೋನಾ ಗ್ರೇ, ಆರ್ಕಸ್ ವೈಟ್, ಕ್ಯಾಲಿಪ್ಸೊ ರೆಡ್, ಮೆಟಿಯರ್ ಬ್ರೌನ್ & ಟೊರ್ನಾಡೊ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 187 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,445 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

ನೂತನ 'ಪಂಚ್' 1.2-ಲೀ. ಪೆಟ್ರೋಲ್ ಹಾಗೂ 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 18 ರಿಂದ 27 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸನ್‌ರೂಫ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.
ನಿಸ್ಸಾನ್ ಮ್ಯಾಗ್ನೈಟ್ (Nissan Magnite):
ಈ ಎಸ್‌ಯುವಿಯನ್ನು ಜನರು ಮೆಚ್ಚಿಕೊಂಡಿದ್ದಾರೆ. ರೂ.5.62 ಲಕ್ಷದಿಂದ ರೂ.10.76 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಪಡೆದಿದೆ. ಸ್ಟಾರ್ಮ್ ವೈಟ್, ಬ್ಲೇಡ್ ಸಿಲ್ವರ್, ಸನ್‌ರೈಸ್ ಕಾಪರ್ ಆರೆಂಜ್, ಫ್ಲೇರ್ ಗಾರ್ನೆಟ್ ರೆಡ್, ವಿವಿಡ್ ಬ್ಲೂ ಮತ್ತು ಮೆಟಾಲಿಕ್ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 205 ಮಿ.ಮೀ ಗ್ರೌಂಡ್ ಕಿಯರೆನ್ಸ್ ಹಾಗೂ 2,500 ಮಿ.ಮೀ ವೀಲ್‌ಬೇಸ್‌ನ್ನು ತನ್ನದಾಗಿಸಿಕೊಂಡಿದೆ.

ಹೊಸ 'ಮ್ಯಾಗ್ನೈಟ್' 1-ಲೀ. ಪೆಟ್ರೋಲ್ ಮತ್ತು 1-ಲೀ. ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 18 ರಿಂದ 20 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಮತ್ತು ಆಂಬಿಯೆಂಟ್ ಲೈಟಿಂಗ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ.
ರೆನಾಲ್ಟ್ ಕೈಗರ್ (Renault Kiger):
ಇದೊಂದು ಜನಪ್ರಿಯ ಎಸ್‌ಯುವಿಯಾಗಿದೆ. ಕನಿಷ್ಠ ರೂ.5.76 ಲಕ್ಷ ಮತ್ತು ಗರಿಷ್ಠ ರೂ.10.34 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 1.0 ಲೀ. ಪೆಟ್ರೋಲ್ ಹಾಗೂ 1.0-ಲೀ. ಟರ್ಬೋಚಾರ್ಜ್ಡ್ ಪೆಟ್ರೋಲ್ ಆಯ್ಕೆಯನ್ನು ಹೊಂದಿದೆ. 20 ರಿಂದ 21 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಹ್ಯುಂಡೈ ಎಕ್ಸ್‌ಟರ್ (Hyundai Exter):
ಈ ಕಾರು ರೂ.5.68 ಲಕ್ಷದಿಂದ ರೂ.9.61 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.2-ಲೀ. ಪೆಟ್ರೋಲ್ ಮತ್ತು 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 19 ರಿಂದ 27 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ತನ್ನದಾಗಿಸಿಕೂಂಡಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್ ಮತ್ತು 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx):
ಇದು ಪ್ರಖ್ಯಾತ ಎಸ್‌ಯುವಿಯಾಗಿದೆ. ಕನಿಷ್ಠ ರೂ.6.85 ಲಕ್ಷ ಹಾಗೂ ಗರಿಷ್ಠ ರೂ.11.98 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1-ಲೀ. ಟರ್ಬೋಚಾರ್ಜ್ಡ್ ಪೆಟ್ರೋಲ್, 1.2-ಲೀ. ಪೆಟ್ರೋಲ್ ಹಾಗೂ 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 20.1 ರಿಂದ 28.51 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. 9 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.


Click it and Unblock the Notifications








