ಸ್ವಲ್ಪ ದುಡ್ಡು ಅಡ್ಜಸ್ಟ್ ಮಾಡ್ಕೊಳ್ಳಿ.. ರೂ.5 ಲಕ್ಷದಿಂದ ಪ್ರಾರಂಭ, ಇವೇ ಪಂಚ ಪ್ರೀಮಿಯಂ ಮಾರುತಿ ಕಾರುಗಳು!
ಮಾರುತಿ ಸುಜುಕಿ (Maruti Suzuki) ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ನೆಕ್ಸಾ (Nexa) ಡೀಲರ್‌ಶಿಪ್ ಮೂಲಕ ಪ್ರೀಮಿಯಂ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಇವು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದ್ದು, ನಾನಾ ಬಗೆಯ ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿವೆ. ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಲಭ್ಯವಿದೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ 'ನೆಕ್ಸಾ' ಮಾಡೆಲ್‌ಗಳಾದ ಇಗ್ನಿಸ್, ಬಲೆನೊ, ಫ್ರಾಂಕ್ಸ್, ವಿಕ್ಟೋರಿಸ್ ಹಾಗೂ ಗ್ರ್ಯಾಂಡ್ ವಿಟಾರಾಗಳು ಬೆಸ್ಟ್ ಚಾಯ್ಸ್ ಆಗಲಿವೆ. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis):
ಇದು ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದೆ. ರೂ.5.35 ಲಕ್ಷದಿಂದ ರೂ.7.55 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ನೆಕ್ಸಾ ಬ್ಲ್ಯೂ, ಪರ್ಲ್ ಆರ್ಕ್ಟಿಕ್ ವೈಟ್, ಪರ್ಲ್ ಮಿಡ್‌ನೈಟ್ ಬ್ಲ್ಯಾಕ್, ಸಿಲ್ಕಿ ಸಿಲ್ವರ್ ಮತ್ತು ಟರ್ಕೋಯಿಸ್ ಬ್ಲ್ಯೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,435 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. 5-ಆಸನಗಳನ್ನು ಪಡೆದಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು.

ನೂತನ 'ಮಾರುತಿ ಇಗ್ನಿಸ್' 1.2-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 20.89 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 175 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಎಲೆಕ್ಟ್ರಿಕ್ ಪವರ್ ಸ್ಟೀರಿಂಗ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 2 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.
ಮಾರುತಿ ಸುಜುಕಿ ಬಲೆನೊ (Maruti Suzuki Baleno):
ಈ ಹ್ಯಾಚ್‌ಬ್ಯಾಕ್‌ನ್ನು ಮಧ್ಯಮ ವರ್ಗದ ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ರೂ.5.99 ಲಕ್ಷದಿಂದ ರೂ.9.10 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಲಕ್ಸ್ ಬೀಜ್, ಒಪುಲೆಂಟ್ ರೆಡ್ ಹಾಗೂ ಬ್ಲೂಯಿಶ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 170 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,520 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. 5-ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ.

ಹೊಸ 'ಮಾರುತಿ ಬಲೆನೊ' 1.2-ಲೀಟರ್ ಪೆಟ್ರೋಲ್ & 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 22.35 ರಿಂದ 30.61 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸ್ಟಾರ್ಟ್/ಸ್ಟಾಪ್ ಬಟನ್ ಹಾಗೂ ರೇರ್-ಎಸಿ ವೆಂಟ್‌ನಂತಹ ಹಲವು ವೈಶಿಷ್ಟ್ಯಗಳಿವೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.
ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx):
ಇದೊಂದು ಜಗಮೆಚ್ಚಿದ ಎಸ್‌ಯುವಿಯಾಗಿದೆ. ರೂ.6.85 ಲಕ್ಷದಿಂದ ರೂ.11.98 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1-ಲೀಟರ್ ಟರ್ಬೊ ಪೆಟ್ರೋಲ್, 1.2-ಲೀಟರ್ ಪೆಟ್ರೋಲ್ ಹಾಗೂ 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 20.01 ರಿಂದ 28.51 ಕಿಲೋಮೀಟರ್‌ವರೆಗೆ ನೀಡುತ್ತದೆ. 5-ಆಸನಗಳನ್ನು ಹೊಂದಿದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris):
ಈ ಎಸ್‌ಯುವಿಯನ್ನು ಗ್ರಾಹಕರು ಇಷ್ಟಪಟ್ಟಿದ್ದಾರೆ. ರೂ.10.50 ಲಕ್ಷದಿಂದ ರೂ.19.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಮತ್ತು 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 21 ರಿಂದ 28.65 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 5-ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 10.1 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara):
ಇದು ಪ್ರಖ್ಯಾತ ಎಸ್‌ಯುವಿಯಾಗಿದೆ. ರೂ.10.77 ಲಕ್ಷದಿಂದ ರೂ.19.72 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ ಹಾಗೂ 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 19 ರಿಂದ 28 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5-ಆಸನಗಳನ್ನು ಒಳಗೊಂಡಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.


Click it and Unblock the Notifications








