7-ಸೀಟರ್.. ಬೆಲೆ ಮೊದಲೇ ಅಗ್ಗ, ಭರ್ಜರಿ ಮೈಲೇಜ್.. ಮಿಡಲ್ ಕ್ಲಾಸ್ ಜನರು ಖರೀದಿಸಬಹುದಾದ MPVಗಳಿವು!

ಭಾರತದಲ್ಲಿ ಮಧ್ಯಮ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ತಮ್ಮ ಕುಟುಂಬಕ್ಕಾಗಿ ಹೊಚ್ಚ ಹೊಸ ಕಾರು ಖರೀದಿಸಬೇಕೆಂಬ ಬಹುದೊಡ್ಡ ಆಸೆಯಿರುತ್ತದೆ. ನೀವು ನೂತನ ಕಾರೊಂದನ್ನು ಮನೆಗೆ ತರಲು ಆಲೋಚಿಸಿದ್ದೀರಾ.. ಹಾಗಾದರೆ, ಕಿಯಾ ಕ್ಯಾರೆನ್ಸ್ ಕ್ಲಾವಿಸ್, ಮಾರುತಿ ಸುಜುಕಿ ಎರ್ಟಿಗಾ, ಟೊಯೊಟಾ ರೂಮಿಯನ್, ರೆನಾಲ್ಟ್ ಟ್ರೈಬರ್ ಹಾಗೂ ಮಾರುತಿ ಸುಜುಕಿ ಇಕೋ ಎಂಪಿವಿಗಳು ಅತ್ಯುತ್ತಮ ಆಯ್ಕೆಯಾಗಲಿವೆ. ನಾವಿಲ್ಲಿ ಈ ಕಾರುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.

ಕಿಯಾ ಕ್ಯಾರೆನ್ಸ್ ಕ್ಲಾವಿಸ್ (Kia Carens Clavis):

ಇದು ಜನಪ್ರಿಯ ಎಂಪಿವಿಯಾಗಿದೆ. ರೂ.11.08 ಲಕ್ಷದಿಂದ ರೂ.20.71 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಇಂಪೀರಿಯಲ್ ಬ್ಲೂ, ಗ್ರಾವಿಟಿ ಗ್ರೇ, ಸ್ಪಾರ್ಕ್ಲಿಂಗ್ ಸಿಲ್ವರ್ ಮತ್ತು ಅರೋರಾ ಬ್ಲ್ಯಾಕ್ ಪರ್ಲ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ. 195 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 2,780 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

Best 5 Mpvs For Middle Class People Carens Clavis Ertiga Rumion Triber And Eeco

ಹೊಸ 'ಕ್ಯಾರೆನ್ಸ್ ಕ್ಲಾವಿಸ್' 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. 15 ರಿಂದ 20 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 6 ಮತ್ತು 7 ಆಸನಗಳನ್ನು ಪಡೆದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್‌ (10.25 ಇಂಚು) & 6 ಏರ್‌ಬ್ಯಾಗ್‌ನಂತಹ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga):

ಈ ಎಂಪಿವಿಯು ಸ್ಪರ್ಧಾತ್ಮಕ ದರದಲ್ಲಿ ಲಭ್ಯವಿದೆ. ರೂ.8.80 ಲಕ್ಷದಿಂದ ರೂ.12.94 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮಿಡ್ನೈಟ್ ಬ್ಲಾಕ್ ಮತ್ತು ಪರ್ಲ್ ಆರ್ಕ್ಟಿಕ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 185 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,740 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

Best 5 Mpvs For Middle Class People Carens Clavis Ertiga Rumion Triber And Eeco

ನೂತನ 'ಎರ್ಟಿಗಾ' 1.5-ಲೀ. ಪೆಟ್ರೋಲ್ ಹಾಗೂ 1.5-ಲೀ. ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 20.3 ರಿಂದ 26.11 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 7 ಆಸನಗಳನ್ನು ತನ್ನದಾಗಿಸಿಕೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7 ಇಂಚು), ಪ್ಯಾಡಲ್ ಶಿಫ್ಟರ್ಸ್, ಕೀಲೆಸ್ ಎಂಟ್ರಿ, ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್ ಹಾಗೂ 6 ಏರ್‌ಬ್ಯಾಗ್‌ಗಳು ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಟೊಯೊಟಾ ರೂಮಿಯನ್ (Toyota Rumion):

ಇದೊಂದು ಪ್ರಖ್ಯಾತ ಎಂಪಿವಿಯಾಗಿದೆ. ರೂ.10.44 ಲಕ್ಷದಿಂದ ರೂ.13.62 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 7 ಆಸನಗಳನ್ನು ಹೊಂದಿದೆ. 1.5-ಲೀ. ಪೆಟ್ರೋಲ್ ಹಾಗೂ 1.5-ಲೀ. ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 20 ರಿಂದ 26.11 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ (7-ಇಂಚು), 6-ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಎಸಿ ಮತ್ತು 6 ಏರ್‌ಬ್ಯಾಗ್‌ನಂತಹ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

Best 5 Mpvs For Middle Class People Carens Clavis Ertiga Rumion Triber And Eeco

ರೆನಾಲ್ಟ್ ಟ್ರೈಬರ್ (Renault Triber):

ಈ ಎಂಪಿವಿಯು ರೂ.5.76 ಲಕ್ಷದಿಂದ ರೂ.8.60 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ ಆಯ್ಕೆಯನ್ನು ಪಡೆದಿದೆ. 17 ರಿಂದ 20 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 7 ಆಸನಗಳನ್ನು ಹೊಂದಿದೆ. 17 ರಿಂದ 20 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (8 ಇಂಚು), ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ ಹಾಗೂ 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

Best 5 Mpvs For Middle Class People Carens Clavis Ertiga Rumion Triber And Eeco

ಮಾರುತಿ ಸುಜುಕಿ ಇಕೋ (Maruti Suzuki Eeco):

ಇದು ಅಗ್ಗದ ದರದಲ್ಲೂ ಲಭ್ಯವಿದೆ. ರೂ.5.21 ಲಕ್ಷದಿಂದ ರೂ.6.36 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1.2 ಲೀ. ಪೆಟ್ರೋಲ್ ಹಾಗೂ 1.2 ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 19 ರಿಂದ 27 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5/ 6 ಆಸನಗಳನ್ನು ತನ್ನದಾಗಿಸಿಕೊಂಡಿದೆ. ಸೆಮಿ ಡಿಜಿಟಲ್ ಸ್ಪೀಡೋಮೀಟರ್, ಬೇಸಿಕ್ ಆಡಿಯೊ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ಗಳು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

More from DriveSpark

Article Published On: Monday, October 27, 2025, 19:13 [IST]
English summary
Best 5 mpvs for middle class people carens clavis ertiga rumion triber and eeco
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+