7-ಸೀಟರ್ Mpv ಹುಡುಕುತ್ತಿದ್ದೀರಾ.. ಈ 5 ಕಾರುಗಳು ಬೆಸ್ಟ್, ಬೆಲೆ ಎಷ್ಟು.. ವಿಶೇಷತೆಗಳೇನು?
ನೂತನ ಕಾರನ್ನು ಖರೀದಿ ಮಾಡಬೇಕೆಂದು ಸಾವಿರಾರು ಜನರ ಕನಸಾಗಿರುತ್ತದೆ. ವಿಶೇಷವಾಗಿ ಬಹುತೇಕರು ತಮ್ಮ ಕುಟುಂಬಕ್ಕಾಗಿ ಹೆಚ್ಚು ಆಸನಗಳ ಹೊಚ್ಚ ಹೊಸ ಎಂವಿಪಿ (ಮಲ್ಟಿ-ಪರ್ಪಸ್ ವೆಹಿಕಲ್) ಖರೀದಿಸಲು ಹುಡುಕಾಟ ನಡೆಸುತ್ತಿರುತ್ತಾರೆ. ಅಂತಹವರಿಗೆ ಕಿಯಾ ಕ್ಯಾರೆನ್ಸ್ ಕ್ಲಾವಿಸ್, ರೆನಾಲ್ಟ್ ಟ್ರೈಬರ್, ಮಾರುತಿ ಸುಜುಕಿ ಎರ್ಟಿಗಾ, ಟೊಯೊಟಾ ರೂಮಿಯನ್ ಹಾಗೂ ಮಾರುತಿ ಇಕೋ ಕಾರುಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ನಾವಿಲ್ಲಿ ಈ ಎಂಪಿವಿಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.
ಕಿಯಾ ಕ್ಯಾರೆನ್ಸ್ ಕ್ಲಾವಿಸ್ (Kia Carens Clavis):
ಈ ಎಂವಿಪಿಯು ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಸಿಗುತ್ತದೆ. ಕನಿಷ್ಠ ರೂ.11.08 ಲಕ್ಷ ಹಾಗೂ ಗರಿಷ್ಠ ರೂ.20.71 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಪ್ಯೂಟರ್ ಆಲಿವ್, ಇಂಪೀರಿಯಲ್ ಬ್ಲೂ, ಗ್ಲೇಸಿಯರ್ ವೈಟ್ ಪರ್ಲ್, ಗ್ರಾವಿಟಿ ಗ್ರೇ, ಸ್ಪಾರ್ಕ್ಲಿಂಗ್ ಸಿಲ್ವರ್ ಹಾಗೂ ಅರೋರಾ ಬ್ಲ್ಯಾಕ್ ಪರ್ಲ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 6 ಹಾಗೂ 7 ಆಸನಗಳನ್ನು ಹೊಂದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು.

ನೂತನ 'ಕ್ಯಾರೆನ್ಸ್ ಕ್ಲಾವಿಸ್' 1.5-ಲೀ.ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ & 1.5-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 15.34 ರಿಂದ 19.54 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೋರಮಿಕ್ ಸನ್‌ರೂಫ್ ಹಾಗೂ 6 ಏರ್‌ಬ್ಯಾಗ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ರೆನಾಲ್ಟ್ ಟ್ರೈಬರ್ (Renault Triber):
ಇದು ರೂ. 5.76 ಲಕ್ಷದಿಂದ ರೂ.8.60 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಆಂಬರ್ ಟೆರಾಕೋಟಾ, ಜನ್ಸ್ಕರ್ ಬ್ಲೂ ಮತ್ತು ಶ್ಯಾಡೋ ಗ್ರೇ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 7 ಆಸನಗಳನ್ನು ಪಡೆದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ಮಾಡಬಹುದು.

ಹೊಸ 'ಟ್ರೈಬರ್' 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 20 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 8 ಇಂಚಿನ ಪ್ಲೋಟಿಂಗ್ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಮ್ಯಾನುವಲ್ ಎಸಿ, ವೈರ್‌ಲೆಸ್ ಫೋನ್ ಚಾರ್ಜರ್, 6 ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) & ರೇರ್ ಪಾರ್ಕಿಂಗ್ ಕ್ಯಾಮೆರಾದಂತಹ ವೈಶಿಷ್ಟ್ಯಗಳನ್ನು ಪಡೆದಿದೆ.
ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga):
ಈ ಎಂಪಿವಿಯು ಕನಿಷ್ಠ ರೂ.8.80 ಲಕ್ಷ ಮತ್ತು ಗರಿಷ್ಠ ರೂ.12.94 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ತನ್ನದಾಗಿಸಿಕೊಂಡಿದೆ. 1.5-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 20 ರಿಂದ 26.11 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಮೆಟಾಲಿಕ್ ಮ್ಯಾಗ್ಮಾ ಗ್ರೇ & ಪರ್ಲ್ ಆರ್ಕ್ಟಿಕ್ ವೈಟ್ ಓಳಗೊಂಡಂತೆ ಹಲವು ಬಣ್ಣಗಳೊಂದಿಗೂ ಲಭ್ಯವಿದೆ. 7 ಆಸನಗಳನ್ನು ಪಡೆದಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ನಂತಹ ವೈಶಿಷ್ಟ್ಯಗಳನ್ನು ಹೊಂದಿದೆ.

ಟೊಯೊಟಾ ರೂಮಿಯನ್ (Toyota Rumion):
ಇದು ರೂ.10.44 ಲಕ್ಷದಿಂದ ರೂ.13.62 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದ್ದು,ಎಂಟೈಸಿಂಗ್ ಸಿಲ್ವರ್, ಸ್ಪಂಕಿ ಬ್ಲೂ, ರಸ್ಟಿಕ್ ಬ್ರೌನ್, ಐಕಾನಿಕ್ ಗ್ರೇ ಮತ್ತು ಕೆಫೆ ವೈಟ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 1.5-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 20.11 ರಿಂದ 26.11 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 7 ಆಸನಗಳನ್ನು ಹೊಂದಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಹಾಗೂ 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಮಾರುತಿ ಸುಜುಕಿ ಇಕೋ (Maruti Suzuki Eeco):
ಈ ಎಂಪಿವಿಯು ಕನಿಷ್ಠ ರೂ.5.21 ಲಕ್ಷ ಹಾಗೂ ಗರಿಷ್ಠ ರೂ.6.36 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಉತ್ತಮವಾದ ವಿನ್ಯಾಸವನ್ನು ಹೊಂದಿದೆ. ಮೆಟಾಲಿಕ್ ಗ್ಲಿಸ್ಟೆನಿಂಗ್ ಗ್ರೇ, ಸಾಲಿಡ್ ವೈಟ್, ಮೆಟಾಲಿಕ್ ಬ್ರಿಸ್ಕ್ ಬ್ಲೂ ಮತ್ತು ಮೆಟಾಲಿಕ್ ಸಿಲ್ಕಿ ಸಿಲ್ವರ್ ಎಂಬ ಬಣ್ಣಗಲರೊಂದಿಗೂ ದೊರೆಯುತ್ತದೆ. 1.2 ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 19 ರಿಂದ 27 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಸೆಮಿ ಡಿಜಿಟಲ್ ಸ್ಪೀಡೋಮೀಟರ್ ಹಾಗೂ 6 ಏರ್‌ಬ್ಯಾಗ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.


Click it and Unblock the Notifications








