Kia: 8.67 ಲಕ್ಷ.. 20 ಕಿ.ಮೀ ಮೈಲೇಜ್, ಹೊಸ ಕಿಯಾ ಸೈರಸ್‌ಗೆ 5 ಬದಲಿ ಕಾರುಗಳಿವು.. ಬೆಲೆ ಎಷ್ಟು, ವಿಶೇಷತೆಗಳೇನು?
ಕಿಯಾ ಸೈರಸ್ (Kia Syros) ಪ್ರಮುಖ ಎಸ್‌ಯುವಿಯಾಗಿದೆ. ಕನಿಷ್ಠ ರೂ.8.67 ಲಕ್ಷ ಹಾಗೂ ಗರಿಷ್ಠ ರೂ.15.94 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಅರೋರಾ ಬ್ಲ್ಯಾಕ್ ಪರ್ಲ್, ಫ್ರಾಸ್ಟ್ ಬ್ಲೂ, ಗ್ಲೇಸಿಯರ್ ವೈಟ್ ಪರ್ಲ್, ಗ್ರಾವಿಟಿ ಗ್ರೇ, ಇಂಪೀರಿಯಲ್ ಬ್ಲೂ, ಇಂಟೆನ್ಸ್ ರೆಡ್, ಪ್ಯೂಟರ್ ಆಲಿವ್ ಹಾಗೂ ಸ್ಪಾರ್ಕ್ಲಿಂಗ್ ಸಿಲ್ವರ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 3,995 ಮಿ.ಮೀ ಉದ್ದ, 1,800 ಮಿ.ಮೀ ಅಗಲ ಮತ್ತು 1,665 ಮಿ.ಮೀ ಎತ್ತರವಿದೆ.
ಇದು 1-ಲೀ. ಟರ್ಬೊ ಪೆಟ್ರೋಲ್ ಮತ್ತು 1.5-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 17.65 ರಿಂದ 20.75 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಡ್ರೈವರ್ಸ್ ಡಿಸ್‌ಪ್ಲೇಗಾಗಿ ಡುಯಲ್ ಸ್ಕ್ರೀನ್ ಸೆಟಪ್, ಡುಯಲ್ ಜೋನ್ ಎಸಿ ಹಾಗೂ ಪನೊರೊಮಿಕ್ ಸನ್‌ರೂಫ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ನೀವು ಕಿಯಾ ಸೈರಸ್‌ಗೆ ಪರ್ಯಾಯವಾಗಿ ಈ 5 ಜನಪ್ರಿಯ ಕಾರುಗಳಾದ ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್, ಮಾರುತಿ ಸುಜುಕಿ ಬ್ರೆಝಾ, ಟಾಟಾ ನೆಕ್ಸಾನ್, ಹೋಂಡಾ ಎಲಿವೇಟ್ ಹಾಗೂ ಹ್ಯುಂಡೈ ವೆನ್ಯೂಗಳನ್ನು ಖರೀದಿ ಮಾಡಬಹುದು. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ (Toyota Urban Cruiser Taisor):
ಈ ಕಾರು 'ಕಿಯಾ ಸೈರಸ್'ಗೆ ಬದಲಿ ಆಯ್ಕೆಯಾಗಲಿದೆ. ಅದಕ್ಕೆ ತಕ್ಕಂತೆ ರೂ.7.21 ಲಕ್ಷದಿಂದ ರೂ.12.06 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2-ಲೀ. ಪೆಟ್ರೋಲ್, 1.0-ಲೀ. ಟರ್ಬೊ ಪೆಟ್ರೋಲ್ ಮತ್ತು 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 19 ರಿಂದ 28 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಪಡೆದಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳು ಮತ್ತು 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಮಾರುತಿ ಸುಜುಕಿ ಬ್ರೆಝಾ (Maruti Suzuki Brezza):
ಇದೊಂದು ಜನಪ್ರಿಯ ಎಸ್‌ಯುವಿಯಾಗಿದೆ. 'ಕಿಯಾ ಸೈರಸ್'ಗೆ ಪರ್ಯಾಯವಾಗಿ ಕೊಂಡುಕೊಳ್ಳಬಹುದು. ಕನಿಷ್ಠ ರೂ.8.26 ಲಕ್ಷ ಮತ್ತು ಗರಿಷ್ಠ ರೂ.13.01 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀ. ಪೆಟ್ರೋಲ್, 1.5-ಲೀ. ಮೈಲ್ಡ್ ಹೈಬ್ರಿಡ್ ಪೆಟ್ರೋಲ್ ಮತ್ತು 1.5-ಲೀ. ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 17.80 ರಿಂದ 25.51 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ರೇರ್ ಎಸಿ ವೆಂಟ್‌ಗಳು ಹಾಗೂ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಟಾಟಾ ನೆಕ್ಸಾನ್ (Tata Nexon):
ಈ ಕಾರನ್ನು 'ಕಿಯಾ ಸೈರಸ್'ಗೆ ಬದಲಾಗಿ ಮನೆಗೆ ತರಬಹುದು. ರೂ.7.32 ಲಕ್ಷದಿಂದ ರೂ.14.05 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. 1.2-ಲೀ. ಟರ್ಬೋಚಾರ್ಜ್ಡ್ ಪೆಟ್ರೋಲ್, 1.5-ಲೀ. ಟರ್ಬೋಚಾರ್ಜ್ಡ್ ಪೆಟ್ರೋಲ್ ಹಾಗೂ 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 17 ರಿಂದ 24 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಮತ್ತು 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಹೋಂಡಾ ಎಲಿವೇಟ್ (Honda Elevate):
ಇದನ್ನು 'ಕಿಯಾ ಸೈರಸ್'ಗೆ ಪರ್ಯಾಯವಾಗಿ ಖರೀದಿ ಮಾಡಬಹುದು. ಕನಿಷ್ಠ ರೂ.11 ಮತ್ತು ಗರಿಷ್ಠ ರೂ.16.67 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1.5-ಲೀ. ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 15 ರಿಂದ 17 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7 ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಹಾಗೂ 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ಹ್ಯುಂಡೈ ವೆನ್ಯೂ (Hyundai Venue):
ಈ ಕಾರನ್ನು 'ಕಿಯಾ ಸೈರಸ್'ಗೆ ಬದಲಾಗಿ ತೆಗೆದುಕೊಳ್ಳಬಹುದು. ರೂ.7.89 ಲಕ್ಷದಿಂದ ರೂ.15.48 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2-ಲೀ. ಪೆಟ್ರೋಲ್, 1.5-ಲೀ. ಡಿಸೇಲ್ ಹಾಗೂ 1.0-ಲೀ. ಟರ್ಬೊ ಪೆಟೋಲ್ ಎಂಜಿನ್‌ನ್ನು ಹೊಂದಿದೆ. 17.9 ರಿಂದ 20.99 ಕಿ.ಮೀವರೆಗೆ ಕೊಡುತ್ತದೆ. 5 ಆಸನಗಳನ್ನು ಪಡೆದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ - ಡ್ರೈವರ್ ಡಿಸ್‌ಪ್ಲೇಗಾಗಿ ಡುಯಲ್ 12.3 ಇಂಚಿನ ಸ್ಕ್ರೀನ್‌ಗಳು, ಎಲೆಕ್ಟ್ರಿಕ್ ಸನ್‌ರೂಫ್ ಮತ್ತು 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.


Click it and Unblock the Notifications








