34 Km ಮೈಲೇಜ್.. 3.70 ಲಕ್ಷ, ಬಡವರ ಬಂಡಿ ಮಾರುತಿ ಆಲ್ಟೊ ಕೆ10ಗೆ ಬದಲಿ ಕಾರುಗಳಿವು.. ಬೆಲೆ ಎಷ್ಟು, ವಿಶೇಷತೆಗಳೇನು?

ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10), ಪ್ರಮುಖ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ಇದು ರೂ.3.70 ಲಕ್ಷದಿಂದ ರೂ.5.45 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 24 ರಿಂದ 34 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7 ಇಂಚು), ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 4-ಸ್ಪೀಕರ್‌ ಮ್ಯೂಸಿಕ್ ಸಿಸ್ಟಮ್ ಹಾಗೂ ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು ಮತ್ತು 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ತನ್ನದಾಗಿಸಿಕೊಂಡಿದೆ.

ನೀವು ಇದೇ 'ಆಲ್ಟೊ ಕೆ10'ಗೆ ಪರ್ಯಾಯವಾಗಿ ಈ 5 ಜನಪ್ರಿಯ ಕಾರುಗಳಾದ ಮಾರುತಿ ಸುಜುಕಿ ಎಸ್-ಪ್ರೆಸ್ಸೊ, ಟಾಟಾ ಟಿಯಾಗೊ, ರೆನಾಲ್ಟ್ ಕ್ವಿಡ್, ಮಾರುತಿ ಸುಜುಕಿ ವ್ಯಾಗನ್ಆರ್ ಹಾಗೂ ಮಾರುತಿ ಸುಜುಕಿ ಇಗ್ನಿಸ್‌ಗಳನ್ನು ಮನೆಗೆ ತರಬಹುದು. ಬನ್ನಿ, ಈ ನೂತನ ಹ್ಯಾಚ್‌ಬ್ಯಾಕ್‌ಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

Best 5 Replacement Cars For Maruti Alto K10 S-Presso Tiago KWID WagonR Ignis

ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso):

ಇದು 'ಮಾರುತಿ ಸುಜುಕಿ' ಕಂಪನಿಯ ಕಾರಾಗಿದ್ದರೂ 'ಆಲ್ಟೊ ಕೆ10'ಗೆ ಅತ್ಯುತ್ತಮವಾದ ಬದಲಿ ಆಯ್ಕೆಯಾಗಲಿದೆ. ಅದಕ್ಕೆ ತಕ್ಕಂತೆ ರೂ.3.50 ಲಕ್ಷದಿಂದ ರೂ.5.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 24 ರಿಂದ 33 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7 ಇಂಚು) ಮತ್ತು 2 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ಟಾಟಾ ಟಿಯಾಗೊ (Tata Tiago):

ಈ ಪ್ರಖ್ಯಾತ ಹ್ಯಾಚ್‌ಬ್ಯಾಕ್‌ನ್ನು 'ಮಾರುತಿ ಸುಜುಕಿ ಆಲ್ಟೊ ಕೆ10'ಗೆ ಪರ್ಯಾಯವಾಗಿ ಕೊಂಡುಕೊಳ್ಳಬಹುದು. ರೂ.4.57 ಲಕ್ಷದಿಂದ ರೂ.7.82 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.2-ಲೀ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 19 ರಿಂದ 28 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.25 ಇಂಚು) ಹಾಗೂ 2 ಏರ್‌ಬ್ಯಾಗ್‌ಗಳು ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

Best 5 Replacement Cars For Maruti Alto K10 S-Presso Tiago KWID WagonR Ignis

ರೆನಾಲ್ಟ್ ಕ್ವಿಡ್ (Renault KWID):

ಇದೊಂದು ಜನಪ್ರಿಯ ಹ್ಯಾಚ್‌ಬ್ಯಾಕ್‌ ಆಗಿದೆ. 'ಮಾರುತಿ ಆಲ್ಟೊ ಕೆ10'ಗೆ ಬದಲಿ ಕಾರಾಗಿಯೂ ಹೊರಹೊಮ್ಮಿದೆ. ರೂ.4.30 ಲಕ್ಷದಿಂದ ರೂ.5.90 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. 1-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 21 ರಿಂದ 22 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (8 ಇಂಚು) ಮತ್ತು 2 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR):

ಈ ಹ್ಯಾಚ್‌ಬ್ಯಾಕ್‌ನ್ನು 'ಆಲ್ಟೊ ಕೆ10'ಗೆ ಪರ್ಯಾಯವಾಗಿ ಮನೆಗೆ ಮಾರಬಹುದು. ರೂ.4.99 ಲಕ್ಷದಿಂದ ರೂ.6.95 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1-ಲೀಟರ್ ಪೆಟ್ರೋಲ್, 1.2-ಲೀಟರ್ ಪೆಟ್ರೋಲ್ ಮತ್ತು 1-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 23 ರಿಂದ 34 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಪಡೆದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7 ಇಂಚು) ಮತ್ತು 6 ಏರ್‌ಬ್ಯಾಗ್‌ನಂತಹ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

Best 5 Replacement Cars For Maruti Alto K10 S-Presso Tiago KWID WagonR Ignis

ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis):

ಇದು ಪ್ರೀಮಿಯಂ ಹ್ಯಾಚ್‌ಬ್ಯಾಕ್‌ ಆಗಿದೆ. ಆದರೂ 'ಮಾರುತಿ ಸುಜುಕಿ ಆಲ್ಟೊ ಕೆ10'ಗೆ ಬದಲಿ ಕಾರಾಗಿಯೂ ಖರೀದಿ ಮಾಡಬಹುದು. ರೂ.5.35 ಲಕ್ಷದಿಂದ ರೂ.7.55 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 21 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7 ಇಂಚು) ಹಾಗೂ 2 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

Best 5 Replacement Cars For Maruti Alto K10 S-Presso Tiago KWID WagonR Ignis

ಒಟ್ಟಾರೆಯಾಗಿ ಈ ಹ್ಯಾಚ್‌ಬ್ಯಾಕ್‌ಗಳು 'ಮಾರುತಿ ಆಲ್ಟೊ ಕೆ10'ಗೆ ಸೂಕ್ತವಾದ ಪರ್ಯಾಯ ಕಾರುಗಳಾಗಿವೆ. ಇವು ಒಂದಕ್ಕಿಂದ ಒಂದು ಚೆನ್ನಾಗಿದ್ದು, ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿವೆ. ಹಲವು ನವೀನ ವೈಶಿಷ್ಟ್ಯಗಳನ್ನು ಪಡೆದುಕೊಂಡಿವೆ. ಕೈಗೆಟುಕುವ ದರದರಲ್ಲೂ ದೊರೆಯುತ್ತವೆ. ನಿಮ್ಮ ಪುಟ್ಟ ಕುಟುಂಬಕ್ಕೆ ಯಾವ ಕಾರು ಉತ್ತಮ ಆಯ್ಕೆಯಾಗಲಿದೆ ಎಂಬುದನ್ನು ಆಲೋಚಿಸಿ, ಖರೀದಿಸಿರಿ.

More from DriveSpark

Article Published On: Wednesday, October 29, 2025, 8:42 [IST]
English summary
Best 5 replacement cars for maruti alto k10 s presso tiago kwid wagonr ignis
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+