33 ಕಿ.ಮೀ ಮೈಲೇಜ್.. 6.26 ಲಕ್ಷ, ಜನಪ್ರಿಯ ಮಾರುತಿ ಡಿಜೈರ್‌ಗೆ 5 ಪರ್ಯಾಯ ಕಾರುಗಳಿವು.. ಬೆಲೆ ಎಷ್ಟು, ಹೇಗಿವೆ?

ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಪ್ರಖ್ಯಾತ ಸೆಡಾನ್‌ ಆಗಿದೆ. ಇದು ರೂ.6.26 ಲಕ್ಷದಿಂದ ರೂ.9.31 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್ ಹಾಗೂ 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 24 ರಿಂದ 33 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಹೊಂದಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರಿಗೆ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ನೀವು ಇದೇ 'ಮಾರುತಿ ಡಿಜೈರ್'ಗೆ ಬದಲಾಗಿ ಹೋಂಡಾ ಅಮೇಜ್, ಕಿಯಾ ಸೈರಸ್, ಹ್ಯುಂಡೈ ಔರಾ, ಮಾರುತಿ ಸುಜುಕಿ ಸ್ವಿಫ್ಟ್ ಹಾಗೂ ಮಾರುತಿ ಸುಜುಕಿ ಬಲೆನೊಗಳನ್ನು ಕೊಂಡುಕೊಳ್ಳಬಹುದು ಬನ್ನಿ, ಈ 5 ನೂತನ ಕಾರುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಪ್ರಮುಖ ವಿವರಗಳನ್ನು ತಿಳಿಯೋಣ.

best-5-replacement-cars-for-maruti-dzire-amaze-syros-aura-swift-and-baleno

ಹೋಂಡಾ ಅಮೇಜ್ (Honda Amaze):

ಇದು ವಿಶ್ವಾಸಾರ್ಹ ಸೆಡಾನ್ ಆಗಿದ್ದು, 'ಮಾರುತಿ ಸುಜುಕಿ ಡಿಜೈರ್'ಗೆ ಪರ್ಯಾಯವಾದ ಕಾರಾಗಿದೆ. ರೂ.7.41 ಲಕ್ಷದಿಂದ ರೂ.10 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 1.2-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 19 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಹಾಗೂ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಕಿಯಾ ಸೈರಸ್ (Kia Syros):

ಇದೊಂದು ಎಸ್‌ಯುವಿಯಾಗಿದೆ. ಆದರೂ 'ಮಾರುತಿ ಡಿಜೈರ್'ಗೆ ಬದಲಾಗಿ ಕೊಂಡುಕೊಳ್ಳಬಹುದು. ರೂ.8.67 ಲಕ್ಷದಿಂದ ರೂ.15.94 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 17 ರಿಂದ 20 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಹೊಂದಿದೆ. ಇನ್ಫೋಟೈನ್‌ಮೆಂಟ್‌ ಸಿಸ್ಟಮ್ - ಡ್ರೈವರ್ಸ್ ಡಿಸ್‌ಪ್ಲೇಗಾಗಿ ಡುಯಲ್ ಸ್ಕ್ರೀನ್‌ ಸೆಟಪ್ ಮತ್ತು 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

best-5-replacement-cars-for-maruti-dzire-amaze-syros-aura-swift-and-baleno

ಹ್ಯುಂಡೈ ಔರಾ (Hyundai Aura):

ಈ ಸೆಡಾನ್‌ನ್ನು 'ಡಿಜೈರ್'ಗೆ ಪರ್ಯಾಯವಾಗಿ ಮನೆ ತರಬಹುದು. ರೂ.5.98 ಲಕ್ಷದಿಂದ ರೂ.8.42 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್ & 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 17 ರಿಂದ 28 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift):

ಇದು ಹ್ಯಾಚ್‌ಬ್ಯಾಕ್‌ ಆಗಿದ್ದರೂ, 'ಮಾರುತಿ ಡಿಜೈರ್'ಗೆ ಬದಲಾಗಿ ಖರೀದಿ ಮಾಡಬಹುದು. ರೂ.5.79 ಲಕ್ಷದಿಂದ ರೂ.8.80 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 24.80 ರಿಂದ 32.85 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಹೊಂದಿದೆ. 9 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

best-5-replacement-cars-for-maruti-dzire-amaze-syros-aura-swift-and-baleno

ಮಾರುತಿ ಸುಜುಕಿ ಬಲೆನೊ (Maruti Suzuki Baleno):

ಈ ಕಾರನ್ನು 'ಮಾರುತಿ ಸುಜುಕಿ ಡಿಜೈರ್'ಗೆ ಪರ್ಯಾಯವಾಗಿ ತೆಗೆದುಕೊಳ್ಳಬಹುದು. ರೂ.5.99 ಲಕ್ಷದಿಂದ ರೂ.9.10 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 22 ರಿಂದ 30 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಒಟ್ಟಾರೆಯಾಗಿ, ಇವುಗಳು 'ಮಾರುತಿ ಸುಜುಕಿ ಡಿಜೈರ್'ಗೆ ಅತ್ಯುತ್ತಮವಾದ ಬದಲಿ ಆಯ್ಕೆಯಾಗಲಿವೆ. ತುಂಬಾ ಚೆನ್ನಾಗಿರುವ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿವೆ. ಜೊತೆಗೆ ಬಜೆಟ್ ಬೆಲೆಗೆ ಸಿಗಲಿದ್ದು, ಎಲ್ಲ ವರ್ಗದ ಗ್ರಾಹಕರಿಗೂ ಸುಲಭವಾಗಿ ಕೈಗೆಟುಕಲಿವೆ. ನಿಮ್ಮ ಕುಟುಂಬಕ್ಕೆ ಯಾವ ಕಾರು ಸೂಕ್ತವಾಗುತ್ತದೆಯೋ ಅದನ್ನೇ ಖರೀದಿ ಮಾಡಿರಿ.

More from DriveSpark

Article Published On: Monday, November 3, 2025, 13:29 [IST]
English summary
Best 5 replacement cars for maruti dzire amaze syros aura swift and baleno
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+