28 Km ಮೈಲೇಜ್.. 6.85 ಲಕ್ಷ, ಈ ಜನಪ್ರಿಯ ಮಾರುತಿ SUVಗೆ 5 ಪರ್ಯಾಯ ಕಾರುಗಳಿವು.. ಬೆಲೆ ಎಷ್ಟು?
ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಪ್ರಮುಖ ಎಸ್‌ಯುವಿಯಾಗಿದೆ. ಪ್ರತಿ ತಿಂಗಳು ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ರೂ.6.85 ಲಕ್ಷ ಮತ್ತು ರೂ.11.98 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.ಲೀ. ಟರ್ಬೋಚಾರ್ಜ್ಡ್ ಪೆಟ್ರೋಲ್, 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀ. ಪೆಟ್ರೋಲ್ + ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 20.1 ರಿಂದ 28.51 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಹೊಂದಿದೆ. 9 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ ಹಾಗೂ ಅರ್ಕಾಮಿಸ್-ಟ್ಯೂನ್ಡ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ನೀವು ಇದೇ 'ಫ್ರಾಂಕ್ಸ್' ಬದಲಾಗಿ ಈ 5 ಪ್ರಮುಖ ಕಾರುಗಳಾದ ಟಾಟಾ ನೆಕ್ಸಾನ್, ಹ್ಯುಂಡೈ ವೆನ್ಯೂ, ನಿಸ್ಸಾನ್ ಮ್ಯಾಗ್ನೈಟ್, ರೆನಾಲ್ಟ್ ಕೈಗರ್ ಹಾಗೂ ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್‌ಗಳನ್ನು ಕೊಂಡುಕೊಳ್ಳಬಹುದು. ಇಲ್ಲಿ ಈ ಎಸ್‌ಯುವಿಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.

ಟಾಟಾ ನೆಕ್ಸಾನ್ (Tata Nexon):
ಈ ಕಾರನ್ನು 'ಮಾರುತಿ ಫ್ರಾಂಕ್ಸ್'ಗೆ ಪರ್ಯಾಯವಾಗಿ ತೆಗೆದುಕೊಳ್ಳಬಹುದು. ಅದಕ್ಕೆ ತಕ್ಕಂತೆ ರೂ.7.32 ಲಕ್ಷದಿಂದ ರೂ.14.05 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.2-ಲೀ. ಟರ್ಬೊ ಪೆಟ್ರೋಲ್, 1.5-ಲೀ. ಡೀಸೆಲ್ ಮತ್ತು 1.2-ಲೀ. ಪೆಟ್ರೋಲ್ + ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 17 ರಿಂದ 24 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.
ಹ್ಯುಂಡೈ ವೆನ್ಯೂ (Hyundai Venue):
ಇದನ್ನು ಕೂಡ 'ಮಾರುತಿ ಸುಜುಕಿ ಫ್ರಾಂಕ್ಸ್'ಗೆ ಬದಲಾಗಿ ಮನೆಗೆ ತರಬಹುದು. ರೂ.7.89 ಲಕ್ಷದಿಂದ ರೂ.15.48 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಡಿಸೇಲ್ ಮತ್ತು 1.0-ಲೀ. ಟರ್ಬೊ ಪೆಟೋಲ್ ಎಂಜಿನ್‌ನ್ನು ಹೊಂದಿದೆ. 17 ರಿಂದ 20 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಪಡೆದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ - ಡ್ರೈವರ್ ಡಿಸ್‌ಪ್ಲೇಗಾಗಿ ಡುಯಲ್ 12.3 ಇಂಚಿನ ಸ್ಕ್ರೀನ್‌ಗಳು ಮತ್ತು 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ನಿಸ್ಸಾನ್ ಮ್ಯಾಗ್ನೈಟ್ (Nissan Magnite):
ಈ ಎಸ್‌ಯುವಿಯನ್ನು 'ಫ್ರಾಂಕ್ಸ್'ಗೆ ಪರ್ಯಾಯವಾಗಿ ಖರೀದಿ ಮಾಡಬಹುದು. ರೂ.5.62 ಲಕ್ಷದಿಂದ ರೂ.10.76 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀ. ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 17.9 ರಿಂದ 19.9 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.
ರೆನಾಲ್ಟ್ ಕೈಗರ್ (Renault Kiger):
ಇದು ಪ್ರಖ್ಯಾತ ಕಾರಾಗಿದೆ. 'ಮಾರುತಿ ಸುಜುಕಿ ಫ್ರಾಂಕ್ಸ್'ಗೆ ಬದಲಾಗಿ ಕೊಂಡುಕೊಳ್ಳಬಹುದು. ರೂ.5.76 ಲಕ್ಷದಿಂದ ರೂ.10.34 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1.0-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.0-ಲೀ. ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 19.83 ರಿಂದ 20.38 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಹೊಂದಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ (Toyota Urban Cruiser Taisor):
ಈ ಎಸ್‌ಯುವಿಯನ್ನು 'ಮಾರುತಿ ಫ್ರಾಂಕ್ಸ್'ಗೆ ಪರ್ಯಾಯವಾಗಿ ತೆಗೆದುಕೊಳ್ಳಬಹುದು. ರೂ.7.21 ಲಕ್ಷದಿಂದ ರೂ.12.06 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.0-ಲೀ. ಟರ್ಬೊ ಪೆಟ್ರೋಲ್ ಹಾಗೂ 1.2-ಲೀ. ಪೆಟ್ರೋಲ್ + ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 19 ರಿಂದ 28 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ಗಳನ್ನುಒಳಗೊಂಡಿದೆ.

ಒಟ್ಟಾರೆ, ಇವುಗಳನ್ನು 'ಮಾರುತಿ ಸುಜುಕಿ ಫ್ರಾಂಕ್ಸ್'ಗೆ ಬದಲಾಗಿ ಸುಲಭವಾಗಿ ಮನೆಗೆ ತರಬಹುದು. ಅದಕ್ಕೆ ತಕ್ಕಂತೆ ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಲಭ್ಯವಿವೆ. ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿವೆ. ಜೊತೆಗೆ ವಿವಿಧ ಬಣ್ಣಗಳೊಂದಿಗೂ ಸಿಗಲಿದ್ದು, ನಿಮಿಷ್ಟದ ಕಾರು ಯಾವುದೆಂದು ಆಯ್ದುಕೊಳ್ಳಿರಿ.


Click it and Unblock the Notifications








