33 Km ಮೈಲೇಜ್.. 3.50 ಲಕ್ಷ, ಈ ಅಗ್ಗದ ಮಾರುತಿ ಎಸ್-ಪ್ರೆಸ್ಸೊಗೆ 5 ಪರ್ಯಾಯ ಕಾರುಗಳಿವು.. ಬೆಲೆ ಎಷ್ಟು, ಹೇಗಿವೆ?

ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso) ಪ್ರಮುಖ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ಇದು ನೋಡಲು ಎಸ್‌ಯುವಿಯಂತಿದೆ. ರೂ.3.50 ಲಕ್ಷದಿಂದ ರೂ.5.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1-ಲೀಟರ್ ಪೆಟ್ರೋಲ್ ಹಾಗೂ 1-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 24 ರಿಂದ 33 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಪವರ್ ವಿಂಡೋಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 2 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಸೆಂಟ್ರಲ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ.

ನೀವು ಇದೇ 'ಮಾರುತಿ ಎಸ್-ಪ್ರೆಸ್ಸೊ'ಗೆ ಬದಲಾಗಿ ಮಾರುತಿ ಸುಜುಕಿ ಆಲ್ಟೊ ಕೆ10, ಮಾರುತಿ ಸುಜುಕಿ ಇಗ್ನಿಸ್, ಟಾಟಾ ಪಂಚ್, ರೆನಾಲ್ಟ್ ಕ್ವಿಡ್ ಮತ್ತು ಟಾಟಾ ಟಿಯಾಗೊಗಳನ್ನು ಕೊಂಡುಕೊಳ್ಳಬಹುದು. ಬನ್ನಿ, ಈ 5 ಹೊಸ ಕಾರುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಯೋಣ.

Best 5 Replacement Cars For Maruti S-Presso Alto K10 Ignis Punch Kwid And Tiago

ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10):

ಇದು ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದೆ. 'ಮಾರುತಿ ಸುಜುಕಿ ಎಸ್-ಪ್ರೆಸ್ಸೊ'ಗೆ ಅತ್ಯುತ್ತಮವಾದ ಪರ್ಯಾಯವಾದ ಕಾರಾಗಲಿದೆ. ಅದಕ್ಕೆ ತಕ್ಕಂತೆ ರೂ.3.70 ಲಕ್ಷದಿಂದ ರೂ.5.45 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1-ಲೀಟರ್ ಪೆಟ್ರೋಲ್ ಮತ್ತು 1-ಲೀಟರ್ ಪೆಟ್ರೋಲ್ + ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 24 ರಿಂದ 34 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಹೊಂದಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis):

ಈ ಹ್ಯಾಚ್‌ಬ್ಯಾಕ್‌ನ್ನು 'ಮಾರುತಿ ಎಸ್-ಪ್ರೆಸ್ಸೊ'ಗೆ ಬದಲಾಗಿಯೂ ಕೊಂಡುಕೊಳ್ಳಬಹುದು. ರೂ.5.35 ಲಕ್ಷದಿಂದ ರೂ.7.55 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 21 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಹೊಂದಿದೆ.

Best 5 Replacement Cars For Maruti S-Presso Alto K10 Ignis Punch Kwid And Tiago

ಟಾಟಾ ಪಂಚ್ (Tata Punch):

ಇದೊಂದು ಎಸ್‌ಯುವಿಯಾಗಿದ್ದು, ಆದರೂ 'ಮಾರುತಿ ಸುಜುಕಿ ಎಸ್-ಪ್ರೆಸ್ಸೊ'ಗೆ ಪರ್ಯಾಯವಾಗಿ ತೆಗೆದುಕೊಳ್ಳಬಹುದು. ರೂ.5.50 ಲಕ್ಷದಿಂದ ರೂ.9.30 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್ ಹಾಗೂ 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 18 ರಿಂದ 27 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಹೊಂದಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ರೆನಾಲ್ಟ್ ಕ್ವಿಡ್ (Renault Kwid):

ಈ ಹ್ಯಾಚ್‌ಬ್ಯಾಕ್‌ನ್ನು 'ಮಾರುತಿ ಎಸ್-ಪ್ರೆಸ್ಸೊ'ಗೆ ಬದಲಾಗಿಯೂ ಮನೆಗೆ ತರಬಹುದು. ರೂ.4.30 ಲಕ್ಷದಿಂದ ರೂ.5.90 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 22 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಡುಯಲ್ ಏರ್‌ಬ್ಯಾಗ್‌ಗಳನ್ನು ಪಡೆದಿದೆ.

Best 5 Replacement Cars For Maruti S-Presso Alto K10 Ignis Punch Kwid And Tiago

ಟಾಟಾ ಟಿಯಾಗೊ (Tata Tiago):

ಇದು ಪ್ರಮುಖ ಹ್ಯಾಚ್‌ಬ್ಯಾಕ್‌ ಆಗಿದೆ. 'ಮಾರುತಿ ಸುಜುಕಿ ಎಸ್-ಪ್ರೆಸ್ಸೊ'ಗೆ ಪರ್ಯಾಯವಾಗಿದೆ. ರೂ.4.57 ಲಕ್ಷದಿಂದ ರೂ.7.82 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ ಹಾಗೂ .2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 19 ರಿಂದ 28 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಪಡೆದಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಡುಯಲ್ ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

Best 5 Replacement Cars For Maruti S-Presso Alto K10 Ignis Punch Kwid And Tiago

ಒಟ್ಟಾರೆಯಾಗಿ ಈ ಕಾರುಗಳು ಒಂದಕ್ಕಿಂತ ಒಂದು ಅದ್ಬುತವಾಗಿದೆ. 'ಮಾರುತಿ ಎಸ್-ಪ್ರೆಸ್ಸೊ'ಗೆ ಬದಲಾಗಿಯೂ ಖರೀದಿ ಮಾಡಬಹುದು. ಇವುಗಳು ತುಂಬಾ ಚೆನ್ನಾಗಿರುವ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿವೆ. ಜೊತೆಗೆ ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದ್ದು, ನಿಮ್ಮಿಷ್ಟದ ಕಾರನ್ನು ಆರಿಸಿಕೊಳ್ಳಿ.

More from DriveSpark

Article Published On: Wednesday, November 5, 2025, 8:38 [IST]
English summary
Best 5 replacement cars for maruti s presso alto k10 ignis punch kwid and tiago
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+