34 KM ಮೈಲೇಜ್, 4.99 ಲಕ್ಷ.. ಬಡವರ ಐರಾವತ ಮಾರುತಿ ವ್ಯಾಗನ್ಆರ್‌ಗೆ 5 ಬದಲಿ ಕಾರುಗಳಿವು, ಬೆಲೆ ಎಷ್ಟು, ವಿಶೇಷತೆಗಳೇನು?

ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR) ಜಗಮೆಚ್ಚಿದ ಹ್ಯಾಚ್‌ಬ್ಯಾಕ್ ಆಗಿದೆ. ಇದು ರೂ.4.99 ಲಕ್ಷದಿಂದ ರೂ.6.95 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1-ಲೀ. ಪೆಟ್ರೋಲ್, 1.2-ಲೀ. ಪೆಟ್ರೋಲ್ & 1-ಲೀ. ಪೆಟ್ರೋಲ್+ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 23 ರಿಂದ 34 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಹೊಂದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7 ಇಂಚು), ಕೀಲೆಸ್ ಎಂಟ್ರಿ, ಪವರ್ ವಿಂಡೋಗಳು, ಐಡಲ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್ ಹಾಗೂ ಸ್ಟೀರಿಂಗ್ ಮೌಂಟೆಡ್ ಕಂಟೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಸೀಟ್ ಬೆಲ್ಟ್ ವಾರ್ನಿಂಗ್ ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿದೆ.

ನೀವು ಇದೇ 'ಮಾರುತಿ ವ್ಯಾಗನ್ಆರ್'ಗೆ ಪರ್ಯಾಯವಾಗಿ ಈ 5 ಪ್ರಮುಖ ಕಾರುಗಳಾದ ಹ್ಯುಂಡೈ ಐ20, ಮಾರುತಿ ಸುಜುಕಿ ಇಗ್ನಿಸ್, ರೆನಾಲ್ಟ್ ಕ್ವಿಡ್, ಮಾರುತಿ ಸುಜುಕಿ ಸ್ವಿಫ್ಟ್ ಹಾಗೂ ಮಾರುತಿ ಸುಜುಕಿ ಸೆಲೆರಿಯೊಗಳನ್ನು ಖರೀದಿ ಮಾಡಬಹುದು. ಬನ್ನಿ, ಈ ನೂತನ ಹ್ಯಾಚ್‌ಬ್ಯಾಕ್‌ಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

Best 6 Other Options For Maruti WagonR i20 Ignis Kwid Swift Celerio And Tiago

ಹ್ಯುಂಡೈ ಐ20 (Hyundai i20):

ಇದು ಜನಪ್ರಿಯ ಹ್ಯಾಚ್‌ಬ್ಯಾಕ್‌ ಆಗಿದ್ದು, 'ಮಾರುತಿ ಸುಜುಕಿ ವ್ಯಾಗನ್ಆರ್'ಗೆ ಬದಲಾಗಿ ಕೊಂಡುಕೊಳ್ಳಬಹುದು. ಅದಕ್ಕೆ ತಕ್ಕಂತೆ ರೂ.6.87 ಲಕ್ಷದಿಂದ ರೂ.10.43 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 16 ರಿಂದ 20 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.25 ಇಂಚು) ಮತ್ತು 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis):

ಈ ಹ್ಯಾಚ್‌ಬ್ಯಾಕ್‌ನ್ನು 'ಮಾರುತಿ ವ್ಯಾಗನ್ಆರ್'ಗೆ ಪರ್ಯಾಯವಾಗಿ ಮನೆಗೆ ತರಬಹುದು. ರೂ.5.35 ಲಕ್ಷದಿಂದ ರೂ.7.55 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 21 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳು ಇದ್ದು, ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7 ಇಂಚು) ಹಾಗೂ ಡುಯಲ್ ಏರ್‌ಬ್ಯಾಗ್‌ಗಳನ್ನು ಹೊಂದಿದೆ.

Best 6 Other Options For Maruti WagonR i20 Ignis Kwid Swift Celerio And Tiago

ರೆನಾಲ್ಟ್ ಕ್ವಿಡ್ (Renault Kwid):

ಇದೊಂದು ವಿಶ್ವಾಸಾರ್ಹ ಹ್ಯಾಚ್‌ಬ್ಯಾಕ್‌ ಆಗಿ ಹೊರಹೊಮ್ಮಿದ್ದು, 'ಮಾರುತಿ ಸುಜುಕಿ ವ್ಯಾಗನ್ಆರ್'ಗೆ ಬದಲಿ ಆಯ್ಕೆಯಾಗಲಿದೆ. ರೂ.4.30 ಲಕ್ಷದಿಂದ ರೂ.5.90 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1-ಲೀ.ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 21 ರಿಂದ 22 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (8 ಇಂಚು) ಮತ್ತು ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift):

ಈ ಹ್ಯಾಚ್‌ಬ್ಯಾಕ್‌ನ್ನು 'ಮಾರುತಿ ವ್ಯಾಗನ್ಆರ್'ಗೆ ಪರ್ಯಾಯವಾಗಿ ಖರೀದಿ ಮಾಡಬಹುದು. ರೂ.5.79 ಲಕ್ಷದಿಂದ ರೂ.8.80 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. 5 ಆಸನಗಳನ್ನು ಒಳಗೊಂಡಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 24.80 ರಿಂದ 32.85 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ (9 ಇಂಚು) ಮತ್ತು 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

Best 6 Other Options For Maruti WagonR i20 Ignis Kwid Swift Celerio And Tiago

ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio):

ಇದು ಜನಪ್ರಿಯ ಹ್ಯಾಚ್‌ಬ್ಯಾಕ್‌ ಆಗಿದ್ದು, 'ಮಾರುತಿ ಸುಜುಕಿ ವ್ಯಾಗನ್ಆರ್'ಗೆ ಬದಲಿ ಕಾರಾಗಿದೆ. ರೂ.4.70 ಲಕ್ಷದಿಂದ ರೂ.6.73 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1-ಲೀಟರ್ ಪೆಟ್ರೋಲ್, 1-ಲೀಟರ್ ಪೆಟ್ರೋಲ್+ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 24.97 ರಿಂದ 34.43 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ (7 ಇಂಚು) ಹಾಗೂ 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಒಟ್ಟಾರೆಯಾಗಿ, ಇವುಗಳು 'ಮಾರುತಿ ವ್ಯಾಗನ್ಆರ್'ಗೆ ಅತ್ಯುತ್ತಮವಾದ ಪರ್ಯಾಯ ಕಾರುಗಳಾಗಿವೆ. ತುಂಬಾ ಚೆನ್ನಾಗಿರುವ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿವೆ. ಬಜೆಟ್ ಬೆಲೆಯಲ್ಲಿಯೂ ಲಭ್ಯವಿದ್ದು, ನಿಮಿಷ್ಟದ ಕಾರನ್ನು ಆಯ್ದುಕೊಳ್ಳಿರಿ.

More from DriveSpark

Article Published On: Saturday, November 1, 2025, 9:13 [IST]
English summary
Best 6 other options for maruti wagonr i20 ignis kwid swift celerio and tiago
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+