Tata Sierra Suv: ನಿನ್ನೆ ಪರಿಚಯ.. ಹೊಸ ಟಾಟಾ ಸಿಯೆರಾಗೆ 5 ಬದಲಿ ಕಾರುಗಳಿವು, ಬೆಲೆ ಎಷ್ಟು.. ವಿಶೇಷತೆಗಳೇನು?

ನಿನ್ನೆ ಹೊಚ್ಚ ಹೊಸ ಟಾಟಾ ಸಿಯೆರಾ (Tata Sierra) ಎಸ್‌ಯುವಿಯನ್ನು ಅದ್ದೂರಿಯಾಗಿ ಅನಾವರಣಗೊಳಿಸಲಾಯಿತು. ವಿಶೇಷವಾಗಿ ಐಸಿಇ (ICE) ಮಾಡೆಲ್‌ನ್ನು ಮಾತ್ರವೇ ಪರಿಚಯಿಸಲಾಯಿತು. ಅತಿ ಶೀಘ್ರದಲ್ಲೇ ಎಲೆಕ್ಟ್ರಿಕ್ ಚಾಲಿತ ಮಾಡೆಲ್‌ನ್ನು ಬಹಿರಂಗಗೊಳಿಸುವ ನಿರೀಕ್ಷೆಯಿದೆ. ಈ ನೂತನ ಕಾರು, ರೂ.11 ಲಕ್ಷದಿಂದ ರೂ.20 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಗ್ರಾಹಕರ ದೊರೆಯಬಹುದು ಎಂದು ಅಂದಾಜಿಸಲಾಗಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಅಂಡಮಾನ್ ಅಡ್ವೆಂಚರ್ (ಯೆಲ್ಲೋ), ಬೆಂಗಾಲ್ ರೂಜ್ (ರೆಡ್), ಕೂರ್ಗ್ ಕ್ಲೌಡ್ಸ್ (ಸಿಲ್ವರ್), ಮುನ್ನಾರ್ ಮಿಸ್ಟ್ (ಗ್ರೀನ್), ಮಿಂಟಲ್ ಗ್ರೇ ಹಾಗೂ ಪ್ರಿಸ್ಟೀನ್ ವೈಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಹೊಸ 'ಸಿಯೆರಾ' 5 ಆಸನಗಳನ್ನು ಹೊಂದಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್ (ಡಿಜಿಟಲ್ ಡ್ರೈವರ್ ಡಿಸ್​ಪ್ಲೇ, ಟಚ್‌ಸ್ಕ್ರೀನ್ ಸೆಂಟ್ರಲ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಪ್ಯಾಸೆಂಜರ್-ಸೈಡ್ ಡಿಸ್​ಪ್ಲೇ), ಡುಯಲ್ ಜೋನ್ ಕ್ಲೇಮೇಟ್ ಕಂಟ್ರೋಲ್ ಹಾಗೂ ಪನೋರಮಿಕ್ ಸನ್‌ರೂಫ್‌ನಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಲೆವೆಲ್ 2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ. ಸದ್ಯಕ್ಕೆ ಪವರ್‌ಟ್ರೇನ್ ಕುರಿತಂತೆ ಯಾವುದೇ ವಿವರಗಳು ಲಭ್ಯವಾಗಿಲ್ಲ.

Best 5 Replacement Cars For New Tata Sierra Suv Scorpio Thar Roxx Hector Seltos And Creta Details

ನೀವು ಇದೇ 'ಟಾಟಾ ಸಿಯೆರಾ'ಗೆ ಪರ್ಯಾಯವಾಗಿ ಈ 5 ಜನಪ್ರಿಯ ಎಸ್‌ಯುವಿಗಳಾದ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್, ಮಹೀಂದ್ರಾ ಥಾರ್ ರಾಕ್ಸ್, ಎಂಜಿ ಹೆಕ್ಟರ್, ಕಿಯಾ ಸೆಲ್ಟೋಸ್ ಹಾಗೂ ಹ್ಯುಂಡೈ ಕ್ರೆಟಾಗಳನ್ನು ಖರೀದಿ ಮಾಡಬಹುದು. ಬನ್ನಿ, ಇವುಗಳ ಬೆಲೆ ಹಾಗೂ ವಿಶೇಷತೆಗಳ ಬಗ್ಗೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ (Mahindra Scorpio Classic):

ಇದೊಂದು ಪ್ರಮುಖ ಎಸ್‌ಯುವಿಯಾಗಿದೆ. 'ಟಾಟಾ ಸಿಯೆರಾ'ಗೂ ಬದಲಿ ಆಯ್ಕೆಯಾಗಿದೆ. ಅದಕ್ಕೆ ತಕ್ಕಂತೆ ರೂ.12.97 ಲಕ್ಷದಿಂದ ರೂ.16.70 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 2.2-ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿದೆ. 14 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 7/9 ಆಸನಗಳನ್ನು ಒಳಗೊಂಡಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್ ಹಾಗೂ ಡುಯಲ್ ಏರ್‌ಬ್ಯಾಗ್‌ಗಳು ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

Best 5 Replacement Cars For New Tata Sierra Suv Scorpio Thar Roxx Hector Seltos And Creta

ಮಹೀಂದ್ರಾ ಥಾರ್ ರಾಕ್ಸ್ (Mahindra Thar Roxx)

ಈ ಆಫ್-ರೋಡ್ ಎಸ್‌ಯುವಿಯನ್ನು 'ಟಾಟಾ ಸಿಯೆರಾ'ಗೆ ಪರ್ಯಾಯವಾಗಿ ಕೊಂಡುಕೊಳ್ಳಬಹುದು. ರೂ.12.25 ಲಕ್ಷದಿಂದ ರೂ.22.06 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 2-ಲೀ. ಟರ್ಬೊ ಪೆಟ್ರೋಲ್ ಮತ್ತು 2.2-ಲೀ. ಡಿಸೇಲ್ ಎಂಜಿನ್‌ನ್ನು ಪಡೆದಿದೆ. 12.4 ರಿಂದ 15.2 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪನೋರಮಿಕ್ ಸನ್‌ರೂಫ್ & 6 ಏರ್‌ಬ್ಯಾಗ್‌ನಂತಹ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಎಂಜಿ ಹೆಕ್ಟರ್ (MG Hector):

ಇದು ಕೂಡ ಜನಪ್ರಿಯ ಎಸ್‌ಯುವಿಯಾಗಿದ್ದು, 'ಟಾಟಾ ಸಿಯೆರಾ'ಗೆ ಬದಲಾಗಿ ತೆಗೆದುಕೊಳ್ಳಬಹುದು. ರೂ.14 ಲಕ್ಷದಿಂದ ರೂ.20.76 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀ. ಟರ್ಬೊ ಪೆಟ್ರೋಲ್ ಹಾಗೂ 2-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 12.34 ರಿಂದ 15.58 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಹೊಂದಿದೆ. 14 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಹಾಗೂ 6 ಏರ್‌ಬ್ಯಾಗ್‌ಗಳು ಸೇರಿದಂತೆ ಹತ್ತಾರು ಒಳಗೊಂಡಿದೆ.

Best 5 Replacement Cars For New Tata Sierra Suv Scorpio Thar Roxx Hector Seltos And Creta Details

ಕಿಯಾ ಸೆಲ್ಟೋಸ್ (Kia Seltos):

ಈ ಕಾರನ್ನು 'ಟಾಟಾ ಸಿಯೆರಾ' ಎಸ್‌ಯುವಿಗೆ ಪರ್ಯಾಯವಾಗಿ ಖರೀದಿ ಮಾಡಬಹುದು ರೂ.10.79 ಲಕ್ಷದಿಂದ ರೂ.19.81 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ ಮತ್ತು 1.5-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. 21 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 10.25 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್ ಜೋನ್ ಕ್ಲೇಮೇಟ್ ಕಂಟ್ರೋಲ್ & 6 ಏರ್‌ಬ್ಯಾಗ್‌ಗಳು ಒಳಗೊಂಡಂತೆ ಹಲವು ಹೊಂದಿದೆ.

Best 5 Replacement Cars For New Tata Sierra Suv Scorpio Thar Roxx Hector Seltos And Creta Details

ಹ್ಯುಂಡೈ ಕ್ರೆಟಾ (Hyundai Creta):

ಇದನ್ನು ಸಹ 'ಟಾಟಾ ಸಿಯೆರಾ'ಗೆ ಬದಲಾಗಿ ಮನೆಗೆ ತರಬಹುದಾಗಿದೆ. ರೂ.10.73 ಲಕ್ಷದಿಂದ ರೂ.20.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿದೆ. 17 ರಿಂದ 21 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. 10.25 ಇಂಚಿನ ಡುಯಲ್ ಡಿಸ್‌ಪ್ಲೇ (ಇನ್ಫೋಟೈನ್‌ಮೆಂಟ್ ಸಿಸ್ಟಮ್‌ & ಇನ್ಸ್ಟ್ರುಮೆಂಟ್ ಕ್ಲಸ್ಟರ್) ಮತ್ತು 6 ಏರ್‌ಬ್ಯಾಗ್‌ನಂತಹ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

Article Published On: Sunday, November 16, 2025, 12:00 [IST]
English summary
Best 5 replacement cars for new tata sierra suv scorpio thar roxx hector seltos and creta
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+