Nissan: 20 Km ಮೈಲೇಜ್, 5.62 ಲಕ್ಷ.. 'ನಿಸ್ಸಾನ್ ಮ್ಯಾಗ್ನೈಟ್'ಗೆ 5 ಜನಪ್ರಿಯ ಪರ್ಯಾಯ ಕಾರುಗಳು!

ನಿಸ್ಸಾನ್ ಮ್ಯಾಗ್ನೈಟ್ (Nissan Magnite) ಪ್ರಮುಖ ಎಸ್‌ಯುವಿಯಾಗಿದೆ. ರೂ.5.62 ಲಕ್ಷದಿಂದ ರೂ.10.76 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಓನಿಕ್ಸ್ ಬ್ಲ್ಯಾಕ್, ಸ್ಟಾರ್ಮ್ ವೈಟ್, ಬ್ಲೇಡ್ ಸಿಲ್ವರ್, ಸನ್‌ರೈಸ್ ಕಾಪರ್ ಆರೆಂಜ್, ಫ್ಲೇರ್ ಗಾರ್ನೆಟ್ ರೆಡ್, ವಿವಿಡ್ ಬ್ಲೂ ಮತ್ತು ಮೆಟಾಲಿಕ್ ಗ್ರೇ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 205 ಎಂಎಂ ಗ್ರೌಂಡ್ ಕಿಯರೆನ್ಸ್ ಹಾಗೂ 2,500 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. 5 ಆಸನಗಳನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಸಂಚಾರ ಮಾಡಬಹುದು.

ಈ ಕಾರು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 17 ರಿಂದ 20 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಫಂಕ್ಷನ್ ಸ್ಟೀರಿಂಗ್ ವೀಲ್ ಮತ್ತು ಯುಎಸ್‌‍ಬಿ ಚಾರ್ಜರ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

Best 5 Replacement Cars For Nissan Magnite Suv Fronx Punch Brezza Venue And XUV 3XO

ನೀವು ಇದೇ 'ನಿಸ್ಸಾನ್ ಮ್ಯಾಗ್ನೈಟ್'ಗೆ ಬದಲಾಗಿ ಈ 5 ಎಸ್‌ಯುವಿಗಳಾದ ಮಾರುತಿ ಸುಜುಕಿ ಫ್ರಾಂಕ್ಸ್, ಟಾಟಾ ಪಂಚ್, ಮಾರುತಿ ಸುಜುಕಿ ಬ್ರೆಝಾ, ಹ್ಯುಂಡೈ ವೆನ್ಯೂ ಹಾಗೂ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒಗಳನ್ನು ಖರೀದಿ ಮಾಡಬಹುದು. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx):

ಇದೊಂದು ಪ್ರಖ್ಯಾತ ಎಸ್‌ಯುವಿಯಾಗಿದೆ. 'ನಿಸ್ಸಾನ್ ಮ್ಯಾಗ್ನೈಟ್'ಗೆ ಪರ್ಯಾಯ ಕಾರಾಗಿದೆ. ರೂ.6.85 ಲಕ್ಷದಿಂದ ರೂ.11.98 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1-ಲೀ. ಟರ್ಬೊಚಾರ್ಜ್ಡ್ ಪೆಟ್ರೋಲ್, 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 20 ರಿಂದ 28.51 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 9 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

Best 5 Replacement Cars For Nissan Magnite Suv Fronx Punch Brezza Venue And XUV 3XO

ಟಾಟಾ ಪಂಚ್ (Tata Punch):

ಈ ಎಸ್‌ಯುವಿಯನ್ನು ಗ್ರಾಹಕರು ಮೆಚ್ಚಿಕೊಂಡಿದ್ದಾರೆ. 'ನಿಸ್ಸಾನ್ ಮ್ಯಾಗ್ನೈಟ್'ಗೆ ಬದಲಿ ಆಯ್ಕೆಯಾಗಲಿದೆ. ರೂ.5.50 ಲಕ್ಷದಿಂದ ರೂ.9.30 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀ. ಪೆಟ್ರೋಲ್ ಮತ್ತು 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 18 ರಿಂದ 27 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸನ್‌ರೂಫ್‌, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಮತ್ತು 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಮಾರುತಿ ಸುಜುಕಿ ಬ್ರೆಝಾ (Maruti Suzuki Brezza):

ಇದು ಜಗಮೆಚ್ಚಿದ ಎಸ್‌ಯುವಿಯಾಗಿದೆ. 'ನಿಸ್ಸಾನ್ ಮ್ಯಾಗ್ನೈಟ್'ಗೆ ಪರ್ಯಾಯವಾಗಿದೆ. ರೂ.8.26 ಲಕ್ಷದಿಂದ ರೂ.13.01 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.5-ಲೀ. ಪೆಟ್ರೋಲ್, 1.5-ಲೀ. ಮೈಲ್ಡ್ ಹೈಬ್ರಿಡ್ ಹಾಗೂ 1.5-ಲೀ. ಪೆಟ್ರೋಲ್/ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 17.80 ರಿಂದ 25.51 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. 9 ಇಂಚಿನ ಟಚ್‌ಸ್ಕ್ರೀನ್ ಸಿಸ್ಟಮ್, ಯುಎಸ್‌ಬಿ ಫಾಸ್ಟ್ ಚಾರ್ಜರ್‌ಗಳು ಹಾಗೂ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

Best 5 Replacement Cars For Nissan Magnite Suv Fronx Punch Brezza Venue And XUV 3XO
ಹ್ಯುಂಡೈ ವೆನ್ಯೂ (Hyundai Venue):

ಈ ಎಸ್‌ಯುವಿಯು 'ನಿಸ್ಸಾನ್ ಮ್ಯಾಗ್ನೈಟ್'ಗೆ ಬದಲಿ ಕಾರಾಗಿದೆ. ರೂ.7.89 ಲಕ್ಷದಿಂದ ರೂ.15.48 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಡಿಸೇಲ್ ಮತ್ತು 1.0-ಲೀ. ಟರ್ಬೊ ಪೆಟೋಲ್ ಎಂಜಿನ್‌ನ್ನು ಪಡೆದಿದೆ. 17.9 ರಿಂದ 20.99 ಕಿ.ಮೀವರೆಗೆ ನೀಡುತ್ತದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ - ಡ್ರೈವರ್ ಡಿಸ್‌ಪ್ಲೇಗಾಗಿ 12.3 ಇಂಚಿನ ಡುಯಲ್ ಸ್ಕ್ರೀನ್‌ಗಳು ಮತ್ತು 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

Best 5 Replacement Cars For Nissan Magnite Suv Fronx Punch Brezza Venue And XUV 3XO

ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO):

ಇದೊಂದು ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದೆ. 'ನಿಸ್ಸಾನ್ ಮ್ಯಾಗ್ನೈಟ್' ಪರ್ಯಾಯವಾಗಬಲ್ಲದು. ರೂ.7.28 ಲಕ್ಷದಿಂದ ರೂ.14.40 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2-ಲೀ. ಪೆಟ್ರೋಲ್, 1.2-ಲೀ. ಟಿಜಿಡಿಐ ಟರ್ಬೊ ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. 18 ರಿಂದ 21 ಕಿ.ಮೀವರೆಗೆ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ - ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25 ಇಂಚಿನ ಡುಯಲ್ ಡಿಸ್​ಪ್ಲೇಗಳು ಹಾಗೂ 6-ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

More from DriveSpark

Article Published On: Wednesday, December 10, 2025, 8:55 [IST]
English summary
Best 5 replacement cars for nissan magnite suv fronx punch brezza venue and xuv 3xo
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+