ಸೇಲ್ಸ್‌ನಲ್ಲಿ ನಂ.1 ಕಾರಿದು.. 7 ಲಕ್ಷ, 24 Km ಮೈಲೇಜ್.. ಈ ಜನಪ್ರಿಯ ಟಾಟಾ ಎಸ್‌ಯುವಿಗೆ 5 ಬದಲಿ ಕಾರುಗಳಿವು, ಬೆಲೆ ಎಷ್ಟು?

ಟಾಟಾ ನೆಕ್ಸಾನ್ (Tata Nexon) ಪ್ರಮುಖ ಎಸ್‌ಯುವಿಯಾಗಿದೆ. ಈ ಸೆಪ್ಟೆಂಬರ್​ನಲ್ಲಿ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 22,500 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಣೆ ಮಾಡಲಾಗಿದೆ. ಇದರೊಂದಿಗೆ ಮಾರಾಟದಲ್ಲಿ ಮೊದಲ ಸ್ಥಾನದಲ್ಲಿದೆ. ನೂತನ 'ನೆಕ್ಸಾನ್' ಕಾರು ರೂ.7.32 ಲಕ್ಷದಿಂದ ರೂ.14.05 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.2-ಲೀಟರ್ ಟರ್ಬೊ ಪೆಟ್ರೋಲ್, 1.5-ಲೀಟರ್ ಡೀಸೆಲ್ ಹಾಗೂ 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 17 ರಿಂದ 24 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ಗಳು ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ನೀವು ಇದೇ 'ನೆಕ್ಸಾನ್'ಗೆ ಬದಲಾಗಿ ಈ 5 ಪ್ರಮುಖ ಕಾರುಗಳಾದ ಮಾರುತಿ ಸುಜುಕಿ ಬ್ರೆಝಾ, ರೆನಾಲ್ಟ್ ಕೈಗರ್, ಕಿಯಾ ಸೋನೆಟ್, ಸ್ಕೋಡಾ ಕೈಲಾಕ್ ಹಾಗೂ ಮಾರುತಿ ಸುಜುಕಿ ಫ್ಯಾಂಕ್ಸ್ ಗಳನ್ನು ಕೊಂಡುಕೊಳ್ಳಬಹುದು. ಬನ್ನಿ, ಈ ಹೊಚ್ಚ ಹೊಸ ಎಸ್‌ಯುವಿಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಒಂದಷ್ಟು ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

Best 5 Replacement Cars For Tata Nexon Brezza Kiger Sonet Kylaq Fronx

ಮಾರುತಿ ಸುಜುಕಿ ಬ್ರೆಝಾ (Maruti Suzuki Brezza):

ಇದೊಂದು ಪ್ರಖ್ಯಾತ ಎಸ್‌ಯುವಿಯಾಗಿದ್ದು, 'ಟಾಟಾ ನೆಕ್ಸಾನ್'ಗೆ ಪರ್ಯಾಯವಾಗಿ ಕೊಂಡುಕೊಳ್ಳಬಹುದು. ಅದಕ್ಕೆ ತಕ್ಕಂತೆ ರೂ.8.26 ಲಕ್ಷದಿಂದ ರೂ.13.01 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್ ಮತ್ತು 1.5-ಲೀಟರ್ ಪೆಟ್ರೋಲ್+ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 17.80 ರಿಂದ 25.51 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ರೆನಾಲ್ಟ್ ಕೈಗರ್ (Renault Kiger):

ಈ ಎಸ್‌ಯುವಿಯನ್ನು 'ಟಾಟಾ ನೆಕ್ಸಾನ್'ಗೆ ಬದಲಾಗಿ ಮನೆಗೆ ತರಬಹುದಾಗಿದೆ. ರೂ.5.76 ಲಕ್ಷದಿಂದ ರೂ.10.34 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.0-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 19.83 ರಿಂದ 20.38 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಹೊಂದಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

Best 5 Replacement Cars For Tata Nexon Brezza Kiger Sonet Kylaq Fronx

ಕಿಯಾ ಸೋನೆಟ್‌ (Kia Sonet):

ಇದು ವಿಶ್ವಸಾರ್ಹ ಎಸ್‌ಯುವಿಯಾಗಿದ್ದು, 'ಟಾಟಾ ನೆಕ್ಸಾನ್'ಗೆ ಅತ್ಯುತ್ತಮವಾದ ಪರ್ಯಾಯವಾಗಲಿದೆ. ರೂ.7.30 ಲಕ್ಷದಿಂದ ರೂ.14 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1-ಲೀಟರ್ ಟರ್ಬೊ ಪೆಟ್ರೋಲ್, 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 18 ರಿಂದ 24 ಕಿ.ಮೀ ವರೆಗೆ ಮೈಲೇಜ್ ಕೊಂಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಸ್ಕೋಡಾ ಕೈಲಾಕ್ (Skoda Kylaq):

ಈ ಕಾರನ್ನು 'ಟಾಟಾ ನೆಕ್ಸಾನ್'ಗೆ ಬದಲಾಗಿ ಖರೀದಿ ಮಾಡಬಹುದಾಗಿದೆ. ರೂ.7.55 ಲಕ್ಷದಿಂದ ರೂ.12.80 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.0-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 15 ರಿಂದ 18 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಹೊಂದಿದೆ. 10 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಹಾಗೂ 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

Best 5 Replacement Cars For Tata Nexon Brezza Kiger Sonet Kylaq Fronx

ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx):

ಇದೊಂದು ಜಗಮೆಚ್ಚಿದ ಎಸ್‌ಯುವಿಯಾಗಿದ್ದು, 'ಟಾಟಾ ನೆಕ್ಸಾನ್'ಗೆ ಪರ್ಯಾಯವಾಗಿ ತೆಗೆದುಕೊಳ್ಳಬಹುದು. ರೂ.6.85 ಲಕ್ಷದಿಂದ ರೂ.11.98 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1-ಲೀಟರ್ ಟರ್ಬೊ ಪೆಟ್ರೋಲ್, 1.2-ಲೀಟರ್ ಡುಯಲ್ಜೆಟ್ ಪೆಟ್ರೋಲ್ ಹಾಗೂ 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 20 ರಿಂದ 28 ಕಿ.ಮೀವರೆಗೆ ಮೈಲೇಜ್‌ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 9 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಒಟ್ಟಾರೆಯಾಗಿ 'ಟಾಟಾ ನೆಕ್ಸಾನ್'ಗೆ ಬದಲಿ ಆಯ್ಕೆಯಾಗಿರುವ ಈ ಕಾರುಗಳು ಒಂದಕ್ಕಿಂತ ಒಂದು ತುಂಬಾ ಚೆನ್ನಾಗಿವೆ. ನವೀನವಾದ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಕೂಡ ಪಡೆದುಕೊಂಡಿವೆ. ಬಜೆಟ್ ಬೆಲೆಯಲ್ಲಿಯೂ ಖರೀದಿಗೆ ಲಭ್ಯವಿವೆ. ನಿಮ್ಮ ಪುಟ್ಟ ಕುಟುಂಬಕ್ಕೆ ಯಾವ ಕಾರು ಹೆಚ್ಚು ಸೂಕ್ತವಾಗಲಿದೆ ಎಂಬುದನ್ನು ಆಲೋಚಿಸಿ, ಖರೀದಿಸಿರಿ.

Article Published On: Friday, October 31, 2025, 8:30 [IST]
English summary
Best 5 replacement cars for tata nexon brezza kiger sonet kylaq fronx
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+