23 ಕಿ.ಮೀ ಮೈಲೇಜ್.. 8-ಸೀಟರ್, ಟೊಯೊಟಾ ಇನ್ನೋವಾ ಹೈಕ್ರಾಸ್‌ಗೆ 5 ಬದಲಿ ಕಾರುಗಳಿವು.. ಬೆಲೆ ಎಷ್ಟು?
ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಜಗಮೆಚ್ಚಿದ ಎಂಪಿವಿಯಾಗಿದೆ. ಅತಿ ಹೆಚ್ಚಿನ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತದೆ. ರೂ.18.16 ಲಕ್ಷದಿಂದ ರೂ.30.83 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 2-ಲೀಟರ್ 4-ಸಿಲಿಂಡರ್ ಪೆಟ್ರೋಲ್ ಹಾಗೂ 2-ಲೀಟರ್, 4-ಸಿಲಿಂಡರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್‌ನ್ನು ಹೊಂದಿದೆ. 16.13 ರಿಂದ 23.24 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 7/ 8 ಆಸನಗಳನ್ನು ಒಳಗೊಂಡಿದೆ. 10.1 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್ ಹಾಗೂ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ನೀವು ಇದೇ 'ಇನ್ನೋವಾ ಹೈಕ್ರಾಸ್'ಗೆ ಪರ್ಯಾಯವಾಗಿ ಈ 5 ಪ್ರಮುಖ ಕಾರುಗಳಾದ ಮಾರುತಿ ಸುಜುಕಿ ಇನ್ವಿಕ್ಟೋ, ಮಹೀಂದ್ರಾ ಎಕ್ಸ್‌ಯುವಿ700, ಹ್ಯುಂಡೈ ಅಲ್ಕಾಜರ್, ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಹಾಗೂ ಟಾಟಾ ಸಫಾರಿಗಳನ್ನು ಕೊಂಡುಕೊಳ್ಳಬಹುದು. ಇಲ್ಲಿ ಈ ಕಾರುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.

ಮಾರುತಿ ಸುಜುಕಿ ಇನ್ವಿಕ್ಟೋ (Maruti Suzuki Invicto):
ಇದೊಂದು ಪ್ರಮುಖ ಎಂಪಿವಿಯಾಗಿದ್ದು, 'ಟೊಯೊಟಾ ಇನ್ನೋವಾ ಹೈಕ್ರಾಸ್'ಗೆ ಅತ್ಯುತ್ತಮವಾದ ಬದಲಿ ಆಯ್ಕೆಯಾಗಲಿದೆ. ರೂ.24.97 ಲಕ್ಷದಿಂದ ರೂ.28.60 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 2-ಲೀಟರ್ 4-ಸಿಲಿಂಡರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಎಂಜಿನ್‌ನ್ನು ಪಡೆದಿದೆ. 23 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.
ನೂತನ 'ಇನ್ವಿಕ್ಟೋ' 7/8 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 10.1 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್ ಹಾಗೂ ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಮಹೀಂದ್ರಾ ಎಕ್ಸ್‌ಯುವಿ700 (Mahindra XUV700):
ಈ ಫ್ಯಾಮಿಲಿ ಎಸ್‌ಯುವಿಯನ್ನು 'ಇನ್ನೋವಾ ಹೈಕ್ರಾಸ್'ಗೆ ಬದಲಾಗಿ ಕೊಂಡುಕೊಳ್ಳಬಹುದು. ಅದಕ್ಕೆ ತಕ್ಕಂತೆ ರೂ.13.66 ಲಕ್ಷದಿಂದ ರೂ.23.71 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 2-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 2.2-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 17 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ.
ಹೊಸ 'ಎಕ್ಸ್‌ಯುವಿ700' ಕಾರು 6/ 7 ಆಸನಗಳನ್ನು ಹೊಂದಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸನ್‌ರೂಫ್ ಹಾಗೂ ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಹ್ಯುಂಡೈ ಅಲ್ಕಾಜರ್ (Hyundai Alcazar):
ಇದು ಕೂಡ 'ಟೊಯೊಟಾ ಇನ್ನೋವಾ ಹೈಕ್ರಾಸ್'ಗೆ ಪರ್ಯಾಯ ಕಾರಾಗಿದೆ. ರೂ.14.47 ಲಕ್ಷದಿಂದ ರೂ.21.10 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.5-ಲೀಟರ್ ಜಿಡಿಟಿ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 17 ರಿಂದ 20 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 6/ 7 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡಿಸ್‌ಪ್ಲೇಗಳು ಹಾಗೂ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.
ಕಿಯಾ ಕ್ಯಾರೆನ್ಸ್ ಕ್ಲಾವಿಸ್ (Kia Carens Clavis):
ಈ ಎಂಪಿವಿಯನ್ನು 'ಇನ್ನೋವಾ ಹೈಕ್ರಾಸ್'ಗೆ ಬದಲಾಗಿ ತೆಗೆದುಕೊಳ್ಳಬಹುದು. ರೂ.11.08 ಲಕ್ಷದಿಂದ ರೂ.20.71 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 6/ 7 ಆಸನಗಳನ್ನು ಒಳಗೊಂಡಿದೆ. 15.95 ರಿಂದ 19.54 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6-ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಟಾಟಾ ಸಫಾರಿ (Tata Safari):
ಇದನ್ನು 'ಟೊಯೊಟಾ ಇನ್ನೋವಾ ಹೈಕ್ರಾಸ್'ಗೆ ಪರ್ಯಾಯವಾಗಿ ಮನೆಗೆ ತರಬಹುದು. ರೂ.14.66 ಲಕ್ಷದಿಂದ ರೂ.25.96 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 2-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 14 ರಿಂದ 16 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 6/ 7 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.


Click it and Unblock the Notifications