ಮಧ್ಯಮ ವರ್ಗದವರು ತೆಗೆದುಕೊಳ್ಳಬಹುದಾದ ಕ್ರೇಜಿ ಎಸ್‌ಯುವಿಗಳಿವು.. 7 ಲಕ್ಷಕ್ಕಿಂತ ಅಗ್ಗ.. 26+ ಕಿ.ಮೀ ಮೈಲೇಜ್!

ಭಾರತದಲ್ಲಿ ಮಧ್ಯಮ ವರ್ಗದ ಜನರು ದೊಡ್ಡ ಸಂಖ್ಯೆಯಲ್ಲಿದ್ದು, ತಮ್ಮ ಪುಟ್ಟ ಕುಟುಂಬಕ್ಕಾಗಿ ಹೊಚ್ಚ ಹೊಸ ಕಾರೊಂದನ್ನು ಖರೀದಿ ಮಾಡಬೇಕೆಂಬ ಆಸೆಯನ್ನು ಹೊಂದಿರುತ್ತಾರೆ. ನೀವು ಬಜೆಟ್ ಬೆಲೆಯಲ್ಲಿ ಲಭ್ಯವಾಗುವ ಕ್ರೇಜಿ ಎಸ್‌ಯುವಿಯನ್ನು ತೆಗೆದುಕೊಳ್ಳಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ, ಟಾಟಾ ಪಂಚ್, ಹ್ಯುಂಡೈ ಎಕ್ಸ್‌ಟರ್, ನಿಸ್ಸಾನ್ ಮ್ಯಾಗ್ನೈಟ್ ಹಾಗೂ ರೆನಾಲ್ಟ್ ಕಿಗರ್‌ಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ಬನ್ನಿ, ಈ ಎಸ್‌ಯುವಿಗಳ ಬೆಲೆ ಮತ್ತು ವಿಶೇಷತೆಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಯೋಣ.

ಟಾಟಾ ಪಂಚ್ (Tata Punch):

ಇದೊಂದು ಮೈಕ್ರೋ ಎಸ್‌ಯುವಿಯಾಗಿದ್ದು, ಅತಿ ಕಡಿಮೆ ಬೆಲೆಯಲ್ಲಿಯೂ ಸಿಗಲಿದೆ. ಹೀಗಾಗಿ, ಮಧ್ಯಮ ಹಾಗೂ ಶ್ರೀಮಂತ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಈ ಕಾರು ಕನಿಷ್ಠ ರೂ.6.20 ಲಕ್ಷ ಹಾಗೂ ಗರಿಷ್ಠ ರೂ.10.32 (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಆರ್ಕಸ್ ವೈಟ್, ಡೇಟೋನಾ ಗ್ರೇ, ಕ್ಯಾಲಿಪ್ಸೊ ರೆಡ್ ಮತ್ತು ಟೊರ್ನಾಡೊ ಬ್ಲೂ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Best 5 Suvs Under Rs 7 lakh Tata Punch Hyundai Exter Nissan Magnite Renault Kiger

ನೂತನ ಪಂಚ್ ಎಸ್‌ಯುವಿಯು 1.2-ಲೀಟರ್ ಸಾಮರ್ಥ್ಯದ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 18 ರಿಂದ 26.99 ಕಿ.ಮೀವರೆಗೂ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. 10.25-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಹಾಗೂ 6 ಏರ್‌ಬ್ಯಾಗ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಹ್ಯುಂಡೈ ಎಕ್ಸ್‌ಟರ್ (Hyundai Exter):

ಈ ಎಸ್‌ಯುವಿಯು ಬಜೆಟ್ ಬೆಲೆಯಲ್ಲಿಯೂ ದೊರೆಯಲಿದ್ದು, ರೂ.6 ಲಕ್ಷದಿಂದ ರೂ.10.51 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಇದು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಅಟ್ಲಾಸ್ ವೈಟ್, ರೇಂಜರ್ ಖಾಕಿ, ಸ್ಟಾರಿ ನೈಟ್, ಟೈಟಾನ್ ಗ್ರೇ, ಕಾಸ್ಮಿಕ್ ಬ್ಲೂ, ಅಬಿಸ್ ಬ್ಲ್ಯಾಕ್ ಮತ್ತು ಶ್ಯಾಡೋ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

Best 5 Suvs Under Rs 7 lakh Tata Punch Hyundai Exter Nissan Magnite Renault Kiger

ಇದು 1.2-ಲೀಟರ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಒಳಗೊಂಡಿದೆ. 19 ರಿಂದ 27 ಕಿ.ಮೀವರೆಗೂ ಮೈಲೇಜ್ ನೀಡುತ್ತದೆ. ಈ ಕಾರಿನಲ್ಲಿ 5 ಆಸನಗಳಿವೆ. 8-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಮತ್ತು 6 ಏರ್‌ಬ್ಯಾಗ್‌ಗಳು ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ನಿಸ್ಸಾನ್ ಮ್ಯಾಗ್ನೈಟ್ (Nissan Magnite):

ಹೊಸ ಮ್ಯಾಗ್ನೈಟ್ ಕಾರು ಬಜೆಟ್ ಬೆಲೆಯಲ್ಲಿ ಸಿಗಲಿದ್ದು, ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಖರೀದಿ ಮಾಡಬಹುದು. ಕನಿಷ್ಠ ರೂ.6.14 ಲಕ್ಷ ಮತ್ತು ರೂ.11.76 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಬ್ಲೇಡ್ ಸಿಲ್ವರ್, ಸನ್‌ರೈಸ್ ಕೂಪರ್ ಆರೆಂಜ್, ಫ್ಲೇರ್ ಗಾರ್ನೆಟ್ ರೆಡ್, ಓನಿಕ್ಸ್ ಬ್ಲ್ಯಾಕ್ ಮತ್ತು ಪರ್ಲ್ ವೈಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

Best 5 Suvs Under Rs 7 lakh Tata Punch Hyundai Exter Nissan Magnite Renault Kiger

ಈ ಕಾರು 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ & 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 17 ರಿಂದ 20 ಕಿ.ಮೀವರೆಗೂ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯು ಇದೆ. 8-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿರುವ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ 6-ಏರ್‌ಬ್ಯಾಗ್‌ನಂತಹ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

ರೆನಾಲ್ಟ್ ಕಿಗರ್ (Renault Kiger):

ಇದು ಅಗ್ಗದ ದರದಲ್ಲಿ ಲಭ್ಯವಿದ್ದು, ರೂ.6.15 ಲಕ್ಷದಿಂದ ರೂ.11.23 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ರೇಡಿಯಂಟ್ ರೆಡ್, ಕ್ಯಾಸ್ಪಿಯನ್ ಬ್ಲೂ, ಮೂನ್‌ಲೈಟ್ ಸಿಲ್ವರ್ ಮತ್ತು ಐಸ್ ಕೂಲ್ ವೈಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

Best 5 Suvs Under Rs 7 lakh Tata Punch Hyundai Exter Nissan Magnite Renault Kiger

ನೂತನ ಕಿಗರ್ ಎಸ್‌ಯುವಿಯು 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಹಾಗೂ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 18 - 20 ಕಿ.ಮೀವರೆಗೂ ಮೈಲೇಜ್ ನೀಡುತ್ತದೆ. ಈ ಕಾರು 5 ಆಸನಗಳನ್ನು ಒಳಗೊಂಡಿದೆ. 8-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿರುವ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು 4 ಏರ್‌ಬ್ಯಾಗ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

Article Published On: Sunday, July 20, 2025, 20:55 [IST]
English summary
Best 5 suvs under rs 7 lakh tata punch hyundai exter nissan magnite renault kiger
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+