2025ರಲ್ಲಿ ಖರೀದಿಸಬಹುದಾದ 5 ಬೆಸ್ಟ್ TATA ಕಾರುಗಳಿವು.. 6 ಲಕ್ಷದಿಂದ ಶುರು!

ಟಾಟಾ ಮೋಟಾರ್ಸ್ (Tata Motors) ಸುರಕ್ಷಿತ ಕಾರು ತಯಾರಿಕೆಗೆ ಹೆಸರುವಾಸಿಯಾಗಿರುವ ಕಂಪನಿಯಾಗಿದೆ. ಹೀಗಾಗಿ, ಗ್ರಾಹಕರು ಕೂಡ ಕಂಪನಿಯ ಕಾರುಗಳನ್ನು ನಾಮುಂದು - ತಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ನೀವು ಈ ವರ್ಷ (2025) ದೇಶೀಯ ಮಾರುಕಟ್ಟೆಯಲ್ಲಿ ಟಾಟಾ ಮಾರಾಟಗೊಳಿಸುವ ಕಾರೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, ಆಲ್ಟ್ರೋಜ್, ಟಿಯಾಗೊ ಇವಿ, ಕರ್ವ್, ಪಂಚ್ ಹಾಗೂ ನೆಕ್ಸಾನ್ ಮಾಡೆಲ್‌ಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ನಾವಿಲ್ಲಿ ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.

ಟಾಟಾ ಆಲ್ಟ್ರೋಜ್ (Tata Altroz):

ಇದು ರೂ.6.89 ಲಕ್ಷದಿಂದ ರೂ.11.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಎಂಬರ್ ಗ್ಲೋ, ಪ್ರಿಸ್ಟೈನ್ ವೈಟ್, ಡ್ಯೂನ್ ಗ್ಲೋ, ಪ್ಯೂರ್ ಗ್ರೇ ಹಾಗೂ ರಾಯಲ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 5 ಆಸನಗಳನ್ನು ಒಳಗೊಂಡಿದೆ. 345 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.

Best 5 Tata Cars In 2025 Altroz Tiago EV Curvv Punch Nexon

ಈ ಕಾರು 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೋ ಚಾರ್ಜ್ಡ್ ಡೀಸೆಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 19 ರಿಂದ 26 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 10.25-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 10.25-ಇಂಚಿರುವ ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌, 4-ಸ್ಪೀಕರ್ ಸೆಟಪ್‌, ರೇರ್ ಎಸಿ ವೆಂಟ್‌ಗಳು, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್ ಮತ್ತು 6-ಏರ್‌ಬ್ಯಾಗ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಟಾಟಾ ಟಿಯಾಗೊ ಇವಿ (Tata Tiago EV)

ಈ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಕೈಗೆಟುಕುವ ಬೆಲೆಯಲ್ಲಿಯೂ ಸಿಗಲಿದ್ದು, ಮಧ್ಯಮ ಹಾಗೂ ಶ್ರೀಮಂತ ವರ್ಗದ ಗ್ರಾಹಕರ ಕೊಂಡುಕೊಳ್ಳಬಹುದು. ಅದಕ್ಕೆ ತಕ್ಕಂತೆ ಕನಿಷ್ಠ ರೂ.7.99 ಲಕ್ಷ ಮತ್ತು ಗರಿಷ್ಠ ರೂ.11.14 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಡೇಟೋನಾ ಗ್ರೇ, ಪ್ರಿಸ್ಟೈನ್ ವೈಟ್, ಟೀಲ್ ಬ್ಲೂ, ಅರಿಜೋನಾ ಬ್ಲೂ ಮತ್ತು ಸೂಪರ್ನೋವಾ ಕಾಪರ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

Best 5 Tata Cars In 2025 Altroz Tiago EV Curvv Punch Nexon

ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದೆ. 19.2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 24 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 250 ರಿಂದ 315 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 7-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಟಾಟಾ ಕರ್ವ್ (Tata Curvv):

ಹೊಸ ಕರ್ವ್ ಕೂಪೆ ಎಸ್‌ಯುವಿಯಾಗಿದ್ದು, ರೂ.9.99 ಲಕ್ಷದಿಂದ ರೂ.19,51 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1.2 ಲೀಟರ್ ಟರ್ಬೊ ಪೆಟ್ರೋಲ್, 1.2.ಲೀಟರ್ ಜಿಡಿಐ ಟರ್ಬೊ ಪೆಟ್ರೋಲ್ ಮತ್ತು 1.5 ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 11 ರಿಂದ 15 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಪಡೆದಿದೆ. 12.3-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಮತ್ತು 6-ಏರ್‌ಬ್ಯಾಗ್‌ನಂತಹ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

Best 5 Tata Cars In 2025 Altroz Tiago EV Curvv Punch Nexon

ಟಾಟಾ ಪಂಚ್ (Tata Punch):

ಇದೊಂದು ಪುಟ್ಟ ಗಾತ್ರದ ಎಸ್‌ಯುವಿಯಾಗಿದೆ. ಕನಿಷ್ಠ ರೂ.6.20 ಲಕ್ಷ ಮತ್ತು ಗರಿಷ್ಠ ರೂ.10.32 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 18 ರಿಂದ 26.99 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ವ್ಯವಸ್ಥೆಯನ್ನು ಹೊಂದಿದೆ. 10.25-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6 ಏರ್‌ಬ್ಯಾಗ್‌ಗಳು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

Best 5 Tata Cars In 2025 Altroz Tiago EV Curvv Punch Nexon

ಟಾಟಾ ನೆಕ್ಸಾನ್ (Tata Nexon):

ಈ ಎಸ್‌ಯುವಿಯು ರೂ.8 ಲಕ್ಷದಿಂದ ರೂ.15.60 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1.2-ಲೀಟರ್ ಟರ್ಬೊ ಪೆಟ್ರೋಲ್, 1.5-ಲೀಟರ್ ಡೀಸೆಲ್ ಹಾಗೂ 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 17 ರಿಂದ 24 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. 10.25 ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಮತ್ತು 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

More from DriveSpark

Article Published On: Monday, July 21, 2025, 10:36 [IST]
English summary
Best 5 tata cars in 2025 altroz tiago ev curvv punch nexon
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+