TATA: ಇವೇ ಗಟ್ಟಿಮುಟ್ಟಾದ 5 ಟಾಟಾ ಕಾರುಗಳು.. 8 ಲಕ್ಷದೊಳಗೆ ಲಭ್ಯ, 28 Km ವರೆಗೆ ಮೈಲೇಜ್.. ಪ್ರಯಾಣವು ಆರಾಮ!
ಟಾಟಾ (Tata) ಕಂಪನಿಯ ಕಾರುಗಳು ನಿರ್ಮಾಣ ಗುಣಮಟ್ಟಕ್ಕೆ ಹೆಸರುವಾಸಿಯಾಗಿವೆ. ಇದರಿಂದಾಗಿ ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ನೀವು ಬರೀ ರೂ.8 ಲಕ್ಷದೊಳಗೆ ಲಭ್ಯವಿರುವ ಹೊಚ್ಚ ಹೊಸ ಟಾಟಾ ಕಾರೊಂದನ್ನು ಕೊಂಡುಕೊಳ್ಳಲು ಆಲೋಚಿಸಿದ್ದೀರಾ.. ಹಾಗಾದರೆ ನೆಕ್ಸಾನ್, ಆಲ್ಟ್ರೋಜ್, ಪಂಚ್, ಟಿಗೂರ್ ಹಾಗೂ ಟಿಯಾಗೊಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ಬನ್ನಿ.. ಇವುಗಳ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಟಾಟಾ ನೆಕ್ಸಾನ್:
ಇದು ನಂಬರ್ 1 ಜನಪ್ರಿಯ ಎಸ್‌ಯುವಿಯಾಗಿದೆ. ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ಕನಿಷ್ಠ ರೂ.7.32 ಲಕ್ಷ ಹಾಗೂ ಗರಿಷ್ಠ ರೂ.14.05 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಪ್ಯೂರ್ ಗ್ರೇ, ಪ್ರಿಸ್ಟೈನ್ ವೈಟ್, ರಾಯಲ್ ಬ್ಲೂ ಮತ್ತು ಅಟ್ಲಾಸ್ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ. 208 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,498 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. 5 ಆಸನಗಳನ್ನು ಹೊಂದಿದೆ.

ನೂತನ 'ನೆಕ್ಸಾನ್' 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 17 ರಿಂದ 24 ಕಿಲೋಮೀಟರ್‌ವರಗೆ ಮೈಲೇಜ್ ನೀಡುತ್ತದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಹಾಗೂ ಸನ್‌ರೂಫ್‌ನಂತಹ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಟಾಟಾ ಆಲ್ಟ್ರೋಜ್:
ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನ್ನು ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಮನೆಗೆ ತರಬಹುದು. ರೂ.6.30 ಲಕ್ಷದಿಂದ ರೂ.10.51 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಪ್ಯೂರ್ ಗ್ರೇ, ರಾಯಲ್ ಬ್ಲೂ, ಎಂಬರ್ ಗ್ಲೋ & ಡ್ಯೂನ್ ಗ್ಲೋ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 165 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,501 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ.

ಹೊಸ 'ಆಲ್ಟ್ರೋಜ್' 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 19 ರಿಂದ 26 ಕಿಲೋಮೀಟರ್‌ವರಗೆ ಮೈಲೇಜ್ ಕೊಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 4 -ಸ್ಪೀಕರ್ ಸೆಟಪ್ ಹಾಗೂ ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಮತ್ತು 360 ಡಿಗ್ರಿ ಕ್ಯಾಮೆರಾವಿದೆ.
ಟಾಟಾ ಪಂಚ್:
ಇದೊಂದು ಪ್ರಖ್ಯಾತ ಮೈಕ್ರೋ ಎಸ್‌ಯುವಿಯಾಗಿದೆ. ಕನಿಷ್ಠ ರೂ.5.50 ಲಕ್ಷ ಮತ್ತು ಗರಿಷ್ಠ ರೂ.9.30 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 1.2-ಲೀಟರ್ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 18 ರಿಂದ 27 ಕಿಲೋಮೀಟರ್‌ವರಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಹೊಂದಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಟಾಟಾ ಟಿಗೂರ್:
ಈ ಸೆಡಾನ್‌ನ್ನು ದುಡಿಯುವ ವರ್ಗದ ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ರೂ.5.49 ಲಕ್ಷದಿಂದ ರೂ.8.74 ಲಕ್ಷ ಬೆಲೆಯನ್ನು ಹೊಂದಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 19 ರಿಂದ 28 ಕಿಲೋಮೀಟರ್‌ವರಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಮತ್ತು ಡುಯಲ್ ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ಟಾಟಾ ಟಿಯಾಗೊ:
ಇದು ವಿಶ್ವಾಸಾರ್ಹ ಹ್ಯಾಚ್‌ಬ್ಯಾಕ್ ಆಗಿದೆ. ಕನಿಷ್ಠ ರೂ.4.57 ಲಕ್ಷ ಹಾಗೂ ಗರಿಷ್ಠ ರೂ.7.82 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 19 ರಿಂದ 28 ಕಿಲೋಮೀಟರ್‌ವರಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಹಾಗೂ ಡುಯಲ್ ಏರ್‌ಬ್ಯಾಗ್‌ಗಳನ್ನು ಪಡೆದಿದೆ.


Click it and Unblock the Notifications








