6-ಆಸನಗಳ ಎಸ್‌ಯುವಿಗಳಿವು.. 2 ಫ್ಯಾಮಿಲಿ ಹೋಗಬಹುದು, ಬೆಲೆ ಎಷ್ಟು.. ವಿಶೇಷತೆಗಳೇನು?

ದೇಶದಲ್ಲಿ ಫ್ಯಾಮಿಲಿ ಕಾರುಗಳಿಗೆ ಭಾರೀ ಬೇಡಿಕೆಯಿದೆ. ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ನಿಮ್ಮ ತುಂಬು ಕುಟುಂಬಕ್ಕಾಗಿ ಹೊಚ್ಚ ಹೊಸ 6-ಆಸನಗಳ ಎಸ್‌ಯುವಿವೊಂದನ್ನು ಖರೀದಿ ಮಾಡಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ ಮಹೀಂದ್ರಾ ಸ್ಕಾರ್ಪಿಯೋ ಎನ್, ಟಾಟಾ ಸಫಾರಿ, ಹ್ಯುಂಡೈ ಅಲ್ಕಾಜರ್ ಹಾಗೂ ಮಹೀಂದ್ರಾ ಎಕ್ಸ್‌ಯುವಿ700ಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ನಾವಿಲ್ಲಿ ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.

ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N):

ಇದು ಪ್ರಮುಖ ಎಸ್‌ಯುವಿಯಾಗಿದ್ದು, ಆಫ್-ರೋಡ್ ಚಾಲನೆಗೂ ಹೇಳಿ ಮಾಡಿಸಿದ ರೀತಿಯಲ್ಲಿದೆ. ರೂ.13.99 ಲಕ್ಷದಿಂದ ರೂ.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಆಕರ್ಷಕ ವಿನ್ಯಾಸವನ್ನು ಒಳಗೊಂಡಿದೆ. ಮಿಡ್‌ನೈಟ್ ಬ್ಲ್ಯಾಕ್, ಎವರೆಸ್ಟ್ ವೈಟ್, ಡ್ಯಾಜ್ಲಿಂಗ್ ಸಿಲ್ವರ್, ರೆಡ್ ರೇಜ್ ಮತ್ತು ಡೀಪ್ ಫಾರೆಸ್ಟ್ ಒಳಗೊಂಡಂತೆ ಹಲವು ಬಣ್ಣಗಳನ್ನು ಹೊಂದಿದೆ.

Best 6 Seater suvs In India Scorpio N Safari Alcazar XUV700

ಈ ಕಾರು 6/ 7 ಆಸನಗಳನ್ನು ಪಡೆದಿದೆ. 2.0 ಲೀಟರ್ ಪೆಟ್ರೋಲ್ ಮತ್ತು 2.2 ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 12 ರಿಂದ 15 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 8-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್ ಮತ್ತು 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಟಾಟಾ ಸಫಾರಿ (Tata Safari):

ಇದೊಂದು ಸುರಕ್ಷಿತ ಹಾಗೂ ವಿಶ್ವಾಸಾರ್ಹ ಎಸ್‌ಯುವಿ ಎಂದು ಹೆಸರುವಾಸಿಯಾಗಿದ್ದು, ದೊಡ್ಡ ಗಾತ್ರದಲ್ಲೂ ಇದೆ. ರೂ.15.50 ಲಕ್ಷದಿಂದ ರೂ.27.25 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಪಡೆದಿದೆ. ಕಾಸ್ಮಿಕ್ ಗೋಲ್ಡ್, ಒಬೆರಾನ್ ಬ್ಲ್ಯಾಕ್, ಸ್ಟಾರ್‌ಡಸ್ಟ್ ಆಶ್, ಸ್ಟೆಲ್ಲರ್ ಫ್ರಾಸ್ಟ್ ಹಾಗೂ ಸೂಪರ್‌ನೋವಾ ಕಾಪರ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Best 6 Seater suvs In India Scorpio N Safari Alcazar XUV700

ನೂತನ ಸಫಾರಿ 6/ 7 ಆಸನಗಳನ್ನು ಪಡೆದಿದೆ. 2-ಲೀಟರ್ ಸಾಮರ್ಥ್ಯದ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 14.50 ರಿಂದ 16.30 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 12.3-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿರುವ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360 ಡಿಗ್ರಿ ಕ್ಯಾಮೆರಾದಂತಹ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಹ್ಯುಂಡೈ ಅಲ್ಕಾಜರ್ (Hyundai Alcazar):

ಈ ಎಸ್‌ಯುವಿಯು ಸ್ಪರ್ಧಾತ್ಮಕ ಬೆಲೆಯಲ್ಲಿ ಸಿಗಲಿದ್ದು, ರೂ.14.99 ಲಕ್ಷದಿಂದ ರೂ.21.74 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಅಟ್ಲಾಸ್ ವೈಟ್, ಅಬಿಸ್ ಬ್ಲ್ಯಾಕ್ ಪರ್ಲ್, ರೇಂಜರ್ ಖಾಕಿ, ಫಿಯರಿ ರೆಡ್, ಸ್ಟಾರಿ ನೈಟ್ ಮತ್ತು ಟೈಟಾನ್ ಗ್ರೇ ಮ್ಯಾಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

Best 6 Seater suvs In India Scorpio N Safari Alcazar XUV700

ನೂತನ ಅಲ್ಕಾಜರ್ ಎಸ್‌ಯುವಿಯು 6/ 7 ಆಸನಗಳನ್ನು ಪಡೆದಿದೆ. 1.5-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 17.5 ರಿಂದ 20.4 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡಿಸ್‌ಪ್ಲೇಗಳು, ಪನೊರೊಮಿಕ್ ಸನ್‌ರೂಫ್‌, 6 ಏರ್‌ಬ್ಯಾಗ್‌ಗಳು ಮತ್ತು ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಮಹೀಂದ್ರಾ ಎಕ್ಸ್‌ಯುವಿ700 (Mahindra XUV700):

ಇದು ಶಕ್ತಿಶಾಲಿ ಎಸ್‌ಯುವಿಯಾಗಿದ್ದು, ರೂ.14.49 ಲಕ್ಷದಿಂದ ರೂ.25.14 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಎವರೆಸ್ಟ್ ವೈಟ್, ಡ್ಯಾಜ್ಲಿಂಗ್ ಸಿಲ್ವರ್, ರೆಡ್ ರೇಜ್, ಎಲೆಕ್ಟ್ರಿಕ್ ಬ್ಲೂ ಹಾಗೂ ಮ್ಯಾಟ್ ಬ್ಲೇಜ್ ರೆಡ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಾಗುತ್ತದೆ.

Best 6 Seater suvs In India Scorpio N Safari Alcazar XUV700

ಈ ಕಾರು 6/ 7 ಆಸನಗಳಿದ್ದು, 2-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 2.2-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 17 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, 7 ಏರ್‌ಬ್ಯಾಗ್‌ಗಳು ಮತ್ತು ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

Article Published On: Thursday, July 31, 2025, 8:30 [IST]
English summary
This article compares the leading six-seater SUVs in the Indian market, including Mahindra Scorpio N, Kia Carens Clavis, Tata Safari, and more. It discusses their prices, features, and mileage to help consumers make informed choices.
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+