ಅಗ್ಗದ ಈ ಜನಪ್ರಿಯ 'Tata Suv'ಗೆ ಸಪ್ತ ಬದಲಿ ಕಾರುಗಳಿವು.. ಬೆಲೆ ಇಷ್ಟೇನಾ, ವಿಶೇಷತೆಗಳೇನು?

ಟಾಟಾ ನೆಕ್ಸಾನ್ (Tata Nexon) ಪ್ರಮುಖ ಎಸ್‌ಯುವಿಯಾಗಿದೆ. ಇದು ಗ್ರಾಹಕರ ಮೆಚ್ಚಿನ ಕಾರಾಗಿ ಹೊರಹೊಮ್ಮಿದ್ದು, ಕನಿಷ್ಠ ರೂ.8 ಲಕ್ಷ ಮತ್ತು ಗರಿಷ್ಠ ರೂ.15.60 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀ. ಟರ್ಬೊ ಪೆಟ್ರೋಲ್, 1.5-ಲೀ. ಡೀಸೆಲ್ ಮತ್ತು 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 17.01 ರಿಂದ 24 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಮಂದಿ ಓಡಾಟ ನಡೆಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ. ನಾವಿಲ್ಲಿ ಟಾಟಾ ನೆಕ್ಸಾನ್ ಎಸ್‌ಯುವಿಗೆ ಪರ್ಯಾಯ ಆಯ್ಕೆಯಾಗಬಲ್ಲ 7 ಕಾರುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.

ಮಾರುತಿ ಸುಜುಕಿ ಬ್ರೆಝಾ (Maruti Suzuki Brezza): ಈ ಎಸ್‌ಯುವಿ ಟಾಟಾ ನೆಕ್ಸಾನ್ ಕಾರಿಗೆ ಅತ್ಯುತ್ತಮವಾದ ಬದಲಿ ಆಯ್ಕೆಯಾಗಲಿದೆ. ಇದು ಅತ್ಯಂತ ಕೈಗೆಟುಕುವ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ಸಿಗುತ್ತದೆ. ರೂ.8 ಲಕ್ಷದಿಂದ ರೂ.14 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಇದರಲ್ಲಿಯೂ 5 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು.

Best 7 Alternative Cars For Tata Nexon Suv Brezza Venue Sonet Taisor Kiger Fronx

ನೂತನ ಬ್ರೆಝಾ ಕಾರು 1.5-ಲೀಟರ್ ಸಾಮರ್ಥ್ಯದ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 17.38 ರಿಂದ 25.51 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 328 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಸನ್‌ರೂಫ್ ಮತ್ತು 6-ಸ್ಪೀಕರ್ ಸೆಟಪ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಹ್ಯುಂಡೈ ವೆನ್ಯೂ (Hyundai Venue): ಇದು ಜನಪ್ರಿಯ ಎಸ್‌ಯುವಿ ಎಂದೇ ಹೆಸರುವಾಸಿಯಾಗಿದ್ದು, 'ನೆಕ್ಸಾನ್'ಗೆ ಪರ್ಯಾಯ ಆಯ್ಕೆಯಾಗಲಿದ್ದು, ಅದಕ್ಕೆ ತಕ್ಕಂತೆ ಬಜೆಟ್ ಬೆಲೆಯಲ್ಲಿಯೇ ದೊರೆಯುತ್ತದೆ. ಈ ಕಾರು ಕನಿಷ್ಠ 8 ಲಕ್ಷ ಮತ್ತು ಗರಿಷ್ಠ ರೂ.14 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ.

Best 7 Alternative Cars For Tata Nexon Suv Brezza Venue Sonet Taisor Kiger Fronx

ಈ ಕಾರು ಹೆಚ್ಚು ಶಕ್ತಿಯುತವಾದ ಪೆಟ್ರೋಲ್ & ಡೀಸೆಲ್ ಎಂಜಿನ್‌ನ್ನು ಪಡೆದಿದೆ. ಜೊತೆಗೆ ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 17 ರಿಂದ 22.7 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಟೈಟಾನ್ ಗ್ರೇ, ಡೆನಿಮ್ ಬ್ಲೂ, ಫಿಯರಿ ರೆಡ್ ಮತ್ತು ಅಟ್ಲಾಸ್ ವೈಟ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಕಿಯಾ ಸೋನೆಟ್ (Kia Sonet): ಇದೊಂದು ಪ್ರಖ್ಯಾತ ಎಸ್‌ಯುವಿಯಾಗಿದ್ದು, ಅತಿ ಹೆಚ್ಚಿನ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಈ ಕಾರು ರೂ.8 ಲಕ್ಷದಿಂದ ರೂ.15.60 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣ ಮಾಡಬಹುದು.

Best 7 Alternative Cars For Tata Nexon Suv Brezza Venue Sonet Taisor Kiger Fronx

ಹೊಸ ಕಿಯಾ ಸೋನೆಟ್ ಸಾಕಷ್ಟು ಬಲಿಶಾಲಿಯಾದ ಪೆಟ್ರೋಲ್ & ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 18.7 ರಿಂದ 22.3 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO): ಈ ಎಸ್‌ಯುವಿಯು ಟಾಟಾ ನೆಕ್ಸಾನ್ ಕಾರಿಗೆ ಉತ್ತಮವಾದ ಬದಲಿ ಆಯ್ಕೆಯಲಿದ್ದು, ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಗ್ರಾಹಕರು ಸುಲಭವಾಗಿ ಕೊಳ್ಳಬಹುದು. ಇದು ರೂ.8 ಲಕ್ಷದಿಂದ ರೂ.15 ಲಕ್ಷವರೆಗೆ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ.

Best 7 Alternative Cars For Tata Nexon Suv Brezza Venue Sonet Taisor Kiger Fronx

ಈ ಕಾರು ಅತ್ಯುತ್ತಮವಾದ ಪೆಟ್ರೋಲ್ & ಡೀಸೆಲ್ ಎಂಜಿನ್‌ನ್ನು ಪಡೆದಿದೆ. ಸಾಮಾನ್ಯ ಮೋಟಾರ್‌ಸೈಕಲ್‌ನಂತೆ 17.96 ರಿಂದ 21.2 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 5 ಜನರು ಸುಲಭವಾಗಿ ಓಡಾಟ ನಡೆಸಬಹುದು. ಡುಯಲ್ ಡಿಸ್‌ಪ್ಲೇ, ಡುಯಲ್ ಝೋನ್ ಎಸಿ ಹಾಗೂ ಸನ್‌ರೂಫ್ ಒಳಗೊಂಡನಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ (Toyota Urban Cruiser Taisor): ಇದು ವಿಶ್ವಾಸಾರ್ಹ ಎಸ್‌ಯುವಿಯಾಗಿದ್ದು, ಅತಿ ಕಡಿಮೆ ಬೆಲೆಯಲ್ಲಿಯೇ ಗ್ರಾಹಕರ ಖರೀದಿಗೆ ಸಿಗುತ್ತದೆ. ಈ ಕಾರು ರೂ.8 ಲಕ್ಷದಿಂದ ರೂ.13 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇದರಲ್ಲಿಯೂ 5 ಆಸನ ಆಯ್ಕೆ ವ್ಯವಸ್ಥೆಯಿದೆ.

Take a Poll

ನೂತನ ಟೈಸರ್ ಕಾರು ಉತ್ತಮವಾಗಿರುವ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 1 ಲೀಟರ್ ಪೆಟ್ರೋಲ್ ಹಾಕಿಸಿದರೆ ಸಾಕು 19.8 ರಿಂದ 28.5 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ರೆನಾಲ್ಟ್ ಕಿಗರ್ (Renault Kiger): ಈ ಎಸ್‌ಯುವಿಯು 'ಟಾಟಾ ನೆಕ್ಸಾನ್'ಗೆ ಹೆಚ್ಚು ಪರ್ಯಾಯ ಆಯ್ಕೆಯಾಗಲಿದೆ. ಇದು ಬಜೆಟ್ ಬೆಲೆಯಲ್ಲಿಯೇ ಲಭ್ಯವಾಗುತ್ತದೆ. ಕನಿಷ್ಠ ರೂ.6 ಲಕ್ಷದಿಂದ ರೂ.11 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಈ ಕಾರಿನಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚಾರ ನಡೆಸಬಹುದು.

ಹೊಸ ಕಿಗರ್ ಕಾರು ಸಹ ಹೆಚ್ಚು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 18.24 ರಿಂದ 20.5 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಪುಶ್-ಬಟನ್ ಸ್ಟಾರ್ಟ್/ ಸ್ಟಾಪ್ ಮತ್ತು ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx): ಇದು ಕೂಡ ಪ್ರಖ್ಯಾತ ಎಸ್‌ಯುವಿಯಾಗಿದ್ದು, ಅತ್ಯಂತ ಕಡಿಮೆ ಬೆಲೆಯಲ್ಲಿಯೂ ಖರೀದಿದಾರರು ಕೊಂಡುಕೊಳ್ಳಬಹುದು. ಈ ಕಾರು ರೂ.7 ಲಕ್ಷದಿಂದ ರೂ.13 ಲಕ್ಷವರೆಗೆ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಇದರಲ್ಲಿಯೂ 5 ಆಸನ ಆಯ್ಕೆ ವ್ಯವಸ್ಥೆಯಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಬಹುದು.

ಈ ಕಾರು ನೂತನ ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿ, ಪೆಟ್ರೋಲ್ & ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. ಸರಿ ಸುಮಾರು 20.1 ರಿಂದ 28.51 ಕೆಎಂಪಿಎಲ್‌ವರೆಗೆ ಮೈಲೇಜ್‌ನ್ನು ನೀಡುತ್ತದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, May 7, 2025, 19:24 [IST]
English summary
Best 7 alternative cars for tata nexon suv brezza venue sonet taisor kiger fronx
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+