ಎರಡು ಕುಟುಂಬ ಹೋಗಬಹುದು.. 7-ಸೀಟರ್, 15 ಲಕ್ಷಕ್ಕಿಂತ ಕಡಿಮೆ ಬೆಲೆಗೆ ಸಿಗುವ SUV & MPVs!

ಭಾರತದಲ್ಲಿ ಮಧ್ಯಮ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದಾರೆ. ಅವರಿಗೆ ತಮ್ಮ ತುಂಬು ಕುಟುಂಬಕ್ಕಾಗಿ ಹೊಚ್ಚ ಹೊಸ ಕಾರೊಂದನ್ನು ಖರೀದಿ ಮಾಡಬೇಕು ಎಂಬ ಬಹುದೊಡ್ಡ ಆಸೆಯಿರುತ್ತದೆ. ನೀವು ರೂ.15 ಲಕ್ಷಕ್ಕಿಂತ ಕಡಿಮೆ ಬೆಲೆಗೆ ಲಭ್ಯವಿರುವ 7-ಆಸನಗಳ ಎಸ್‌ಯುವಿ ಅಥವಾ ಎಂಪಿವಿಯನ್ನು ಹುಡುಕುತ್ತಿರುವಿರಾ?.. ಹಾಗಾದರೆ, ಸಿಟ್ರನ್ ಏರ್‌ಕ್ರಾಸ್, ಮಹೀಂದ್ರಾ ಬೊಲೆರೊ ನಿಯೋ, ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್, ಮಾರುತಿ ಸುಜುಕಿ ಎರ್ಟಿಗಾ ಹಾಗೂ ಟೊಯೊಟಾ ರೂಮಿಯನ್ ಕಾರುಗಳು ಅತ್ಯುತ್ತಮ ಆಯ್ಕೆಯಾಗಲಿವೆ. ಬನ್ನಿ, ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಯೋಣ.

ಸಿಟ್ರನ್ ಏರ್‌ಕ್ರಾಸ್ (Citroen Aircross):

ಇದೊಂದು ಎಸ್‌ಯುವಿಯಾಗಿದೆ. ರೂ.8.62 ಲಕ್ಷದಿಂದ ರೂ.14.60 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಈ ಕಾರು 5 ಮತ್ತು 5+2 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 511 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

Best 7-Seater SUV And MPVs Under Rs 15 Lakh Aircross Bolero Scorpio Ertiga Rumion

ನೂತನ ಏರ್‌ಕ್ರಾಸ್ ಎಸ್‌ಯುವಿ 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 17.5 ರಿಂದ 18.5 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಮಹೀಂದ್ರಾ ಬೊಲೆರೊ ನಿಯೋ (Mahindra Bolero Neo):

ಈ ಎಸ್‌ಯುವಿಯನ್ನು ರೂ.15 ಲಕ್ಷಕ್ಕಿಂತ ಕಡಿಮೆ ಬೆಲೆಗೆ ಖರೀದಿ ಮಾಡಬಹುದು. ಇದು ರೂ.9.95 ಲಕ್ಷದಿಂದ ರೂ.11.47 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಇದರಲ್ಲಿ 7 ಆಸನ ಆಯ್ಕೆ ವ್ಯವಸ್ಥೆಯಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ಜಾಸ್ತಿ ಲಗೇಜ್ ಸಾಗಿಸಲು 384 ಲೀಟರ್‌ನ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

Best 7-Seater SUV And MPVs Under Rs 15 Lakh Aircross Bolero Scorpio Ertiga Rumion

ಹೊಸ ಬೊಲೆರೊ ನಿಯೋ 1.5-ಲೀ. ಸಾಮರ್ಥ್ಯದ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 17.29 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕ್ರೂಸ್ ಕಂಟ್ರೋಲ್ ಮತ್ತು ಕೀಲೆಸ್ ಎಂಟ್ರಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ (Mahindra Scorpio Classic):

ಇದು ಎಸ್‌ಯುವಿಯಾಗಿದೆ. ರೂ.13.77 ಲಕ್ಷದಿಂದ ರೂ.17.72 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 2.2-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದ್ದು, 14 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 7/ 9 ಆಸನಗಳಿವೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಆಟೋ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಹೊಂದಿದೆ.

Best 7-Seater SUV And MPVs Under Rs 15 Lakh Aircross Bolero Scorpio Ertiga Rumion

ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga):

ಈ ಎಂಪಿವಿ ಅತಿ ಕಡಿಮೆ ಬೆಲೆಗೆ ಖರೀದಿಗೆ ದೊರೆಯಲಿದ್ದು, ರೂ.8.96 ಲಕ್ಷದಿಂದ ರೂ.13.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್ ಹೊಂದಿದ್ದು, 20 ರಿಂದ 26 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಜೊತೆಗೆ 7 ಆಸನಗಳನ್ನು ಪಡೆದಿದ್ದು, 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಆಟೋ ಎಸಿ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 4 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

Best 7-Seater SUV And MPVs Under Rs 15 Lakh Aircross Bolero Scorpio Ertiga Rumion

ಟೊಯೊಟಾ ರೂಮಿಯನ್ (Toyota Rumion):

ಇದೊಂದು ಎಂಪಿವಿಯಾಗಿದೆ. ರೂ.10.66 ಲಕ್ಷದಿಂದ ರೂ.13.96 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.5-ಲೀ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. 20 ರಿಂದ 26 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿಯೂ 7 ಆಸನಗಳಿವೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 6-ಸ್ಪೀಕರ್ ಸೌಂಡ್ ಸಿಸ್ಟಮ್ ಮತ್ತು ಆಟೋಮೆಟಿಕ್ ಎಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 4-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

Article Published On: Sunday, June 22, 2025, 20:39 [IST]
English summary
Best 7 seater suv and mpvs under rs 15 lakh aircross bolero scorpio ertiga rumion
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+