ಸಿಟಿ ಮಂದಿ ಈ ಕಾರುಗಳನ್ನು ಕೊಳ್ಳಬಹುದು.. ಬೆಲೆಯೂ ಕಡಿಮೆ, ಪಾರ್ಕಿಂಗ್ ಮಾಡಲು ದೊಡ್ಡ ಜಾಗವು ಬೇಕಿಲ್ಲ!
ಬೆಂಗಳೂರಿನಂತಹ ಮಹಾನಗರಗಳಲ್ಲಿ ಸಾರ್ವಜನಿಕ ಸಾರಿಗೆ ಹೊರತುಪಡಿಸಿದರೆ, ಕಚೇರಿ ಕೆಲಸಕ್ಕೆ ತೆರಳಲು ಕಾರುಗಳು ತುಂಬಾ ಅನಿವಾರ್ಯ. ಆದರೆ, ಕೆಲವೆಡೆ ಮನೆಗಳ ಮುಂದೆ ಅಥವಾ ನೆಲ ಮಹಡಿಗಳಲ್ಲಿ ಕಾರುಗಳನ್ನು ಪಾರ್ಕಿಂಗ್ ಮಾಡುವುದಕ್ಕೆ ತುಂಬಾ ಚಿಕ್ಕ ಸ್ಥಳಾವಕಾಶವಿರುತ್ತದೆ. ಬಹುತೇಕರಿಗೆ ಆ ಪುಟ್ಟ ಜಾಗಗಳಿಗೆ ಯಾವ ಕಾರುಗಳು ಸರಿಹೊಂದುತ್ತವೆ, ಅವು ಬಜೆಟ್ ಬೆಲೆಯಲ್ಲಿ ಸಿಗುತ್ತವೆಯೇ, ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿರುತ್ತವೆಯೇ ಹಾಗೂ ಗರಿಷ್ಠ ಮೈಲೇಜ್ ನೀಡುತ್ತವೆಯೇ? ಎಂಬ ಹಲವು ಗೊಂದಲಗಳಿರುತ್ತವೆ. ಅಂತಹವರಿಗೆ ಈ ಜನಪ್ರಿಯ ಕಾರುಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ.
ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10):
ಇದೊಂದು ಸಣ್ಣ ಗಾತ್ರದ ಹ್ಯಾಚ್‌ಬ್ಯಾಕ್ ಆಗಿದ್ದು, ಕಿರಿದಾದ ಜಾಗದಲ್ಲಿಯೂ ಸುಲಭವಾಗಿ ಪಾರ್ಕಿಂಗ್ ಮಾಡಬಹುದು. ಜೊತೆಗೆ ಚಿಕ್ಕದಾಗಿರುವ ರಸ್ತೆಯಲ್ಲಿ ಕೂಡ ಸುಲಭ ಚಲಿಸಬಲ್ಲದು. ಅತ್ಯಂತ ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ಲಭ್ಯವಿದ್ದು, ರೂ.4.23 ಲಕ್ಷದಿಂದ ರೂ.6.21 ಲಕ್ಷ ಎಕ್ಸ್-ಶೋರೂಂ ದರವನ್ನು ಪಡೆದಿದೆ.

ಈ ಕಾರು ಬೆಲೆಗೆ ತಕ್ಕಂತೆ ಪವರ್‌ಟ್ರೇನ್‌ನ್ನು ಹೊಂದಿದೆ. 1-ಲೀ. ಸಾಮರ್ಥ್ಯದ ಪೆಟ್ರೋಲ್ & ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 24 ರಿಂದ 33 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದು 5 ಆಸನಗಳನ್ನು ಹೊಂದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ & ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.
ಎಂಜಿ ಕಾಮೆಟ್ ಇವಿ (MG Comet EV):
ಇದು ಪುಟ್ಟದಾಗಿರುವ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಆಗಿದೆ. ಈ ಕಾರನ್ನು ಸಹ ಸಣ್ಣ ಜಾಗದಲ್ಲಿ ಪಾರ್ಕಿಂಗ್ ಮಾಡಲು ಸಾಧ್ಯವಾಗಲಿದ್ದು, ಬಜೆಟ್ ಬೆಲೆಯಲ್ಲಿಯೇ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಅದಕ್ಕೆ ತಕ್ಕಂತೆ ಕನಿಷ್ಠ ರೂ.7.36 ಲಕ್ಷ ಹಾಗೂ ಗರಿಷ್ಠ ರೂ.9.86 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಒಳಗೊಂಡಿದೆ.

ನೂತನ ಕಾಮೆಟ್ ಕಾರು 17.3 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಚಾರ್ಜ್‌ನಲ್ಲಿ 230 ಕಿಲೋಮೀಟರ್ ಓಡುತ್ತದೆ. 4 ಆಸನಗಳನ್ನು ಹೊಂದಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಸ್ಕ್ರೀನ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.
ರೆನಾಲ್ಟ್ ಕ್ವಿಡ್ (Renault Kwid):
ಈ ಕಾರನ್ನು ಕೂಡ ಪುಟ್ಟದಲ್ಲಿ ಸ್ಥಳದಲ್ಲಿ ಸುಲಭವಾಗಿ ಪಾರ್ಕಿಂಗ್ ಮಾಡಬಹುದು. ಇದು ರೂ.4.70 ಲಕ್ಷದಿಂದ ರೂ.6.45 ಲಕ್ಷ ಎಕ್ಸ್-ಶೋರೂಂ ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಾಗಲಿದೆ. ಬೆಲೆಗೆ ಅನುಗುಣವಾಗಿ ಪವರ್‌ಟ್ರೇನ್‌ನ್ನು ಪಡೆದಿದ್ದು, ಏಕೈಕ 1-ಲೀ. ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 21 ರಿಂದ 22 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಹೊಸ ಕ್ವಿಡ್ ಹ್ಯಾಚ್‌ಬ್ಯಾಕ್‌ನಲ್ಲಿ 5 ಆಸನಗಳಿಗೆ ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಮತ್ತು 4-ಪವರ್ ವಿಂಡೋಗಳು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು ಹಾಗೂ ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಒಳಗೊಂಡಿದೆ.
ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio):
ಇದು ಚಿಕ್ಕ ಗಾತ್ರದ ಹ್ಯಾಚ್‌ಬ್ಯಾಕ್ ಆಗಿದ್ದು, ಸಣ್ಣ ಜಾಗದಲ್ಲೂ ಪಾರ್ಕಿಂಗ್ ಮಾಡಬಹುದಾಗಿದೆ. ಈ ಕಾರು ಕನಿಷ್ಠ ರೂ.5.64 ಹಾಗೂ ಗರಿಷ್ಠ ರೂ.7.37 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಹೊಂದಿದೆ. 1-ಲೀ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 24 ರಿಂದ 34 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ನೂತನ ಸೆಲೆರಿಯೊದಲ್ಲಿ 5 ಆಸನಗಳಿವೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಸೆಂಟ್ರಲ್ ಆರ್ಮ್‌ರೆಸ್ಟ್, ರೇರ್ ಎಸಿ ವೆಂಟ್‌ಗಳು, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್ ಮತ್ತು ಕೀಲೆಸ್ ಎಂಟ್ರಿ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ.


Click it and Unblock the Notifications