ಹೊಸ ಕಾರು ಖರೀದಿಸಬೇಕೇ.. 3.25 ಲಕ್ಷ ಆರಂಭ ಬೆಲೆ, ಭಾರೀ ಮೈಲೇಜ್!

ಭಾರತದಲ್ಲಿ ಮಧ್ಯಮ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಾರೆ. ಅವರಿಗೆ ಜೀವನದಲ್ಲಿ ಹೊಸ ಕಾರು ಖರೀದಿ ಮಾಡಬೇಕು ಎಂಬ ಬಹುದೊಡ್ಡ ಆಸೆಯಿರುತ್ತದೆ. ಆದರೆ, ಯಾವ ಕಾರನ್ನು ಕೊಂಡುಕೊಳ್ಳಬೇಕು ಎಂಬ ಗೊಂದಲದಲ್ಲಿರುತ್ತಾರೆ... ನಾವಿಲ್ಲಿ ಅತಿ ಕಡಿಮೆ ಬೆಲೆ ಹಾಗೂ ಆಕರ್ಷಕ ವಿನ್ಯಾಸ ಹೊಂದಿರುವ ವೇವ್ ಮೊಬಿಲಿಟಿ ಇವಾ (Vayve Mobility Eva), ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso), ರೆನಾಲ್ಟ್ ಕ್ವಿಡ್ (Renault Kwid) ಹಾಗೂ ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಕಾರುಗಳ ಬಗ್ಗೆ ವಿವರಿಸಿದ್ದೇವೆ.

ಮೊದಲಿಗೆ ವೇವ್ ಮೊಬಿಲಿಟಿ ಇವಾ ಕಾರಿನ ಬಗ್ಗೆ ಮಾತನಾಡೋಣ. ಇದೊಂದು ಸೋಲಾರ್ ಚಾಲಿತ ಎಲೆಕ್ಟ್ರಿಕ್ ಕಾರು ಆಗಿದೆ. ರೂ.3.25 ಲಕ್ಷದಿಂದ ರೂ.4.49 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 12.6 ಮತ್ತು 18 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 250 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.

Best Cars Rs 3 25 Lakh Starting Price Vayve Mobility Eva Maruti S-Presso Alto K10 Renault Kwid

ಈ ಕಾರು ಡಿಸಿ ಫಾಸ್ಟ್ ಚಾರ್ಜಿಂಗ್ ಆಯ್ಕೆಯಲ್ಲಿ ಕೇವಲ 45 ನಿಮಿಷಗಳಲ್ಲಿ ಶೇಕಡ 80% ಚಾರ್ಜ್ ಆಗುತ್ತದೆ. ಇದು 2 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ಡುಯಲ್ ಡಿಜಿಟಲ್ ಡಿಸ್‌ಪ್ಲೇಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕುರಿತಂತೆ ಹೇಳುವುದಾದರೆ, ಇದು ಕನಿಷ್ಠ ರೂ.4.26 ಲಕ್ಷ ಮತ್ತು ಗರಿಷ್ಠ ರೂ.6.11 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಈ ಕಾರು 1-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 24.12 ರಿಂದ 32.73 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ.

Best Cars Rs 3 25 Lakh Starting Price Vayve Mobility Eva Maruti S-Presso Alto K10 Renault Kwid

ನೂತನ ಮಾರುತಿ ಎಸ್-ಪ್ರೆಸ್ಸೊ ಕಾರಿನಲ್ಲಿ 5 ಮಂದಿ ಓಡಾಟ ನಡೆಸಬಹುದು. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಕೀಲೆಸ್ ಎಂಟ್ರಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ.

ಮಾರುತಿ ಸುಜುಕಿ ಆಲ್ಟೊ ಕೆ10 ಕೂಡ ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದೆ. ಈ ಕಾರು ರೂ.4.09 ಲಕ್ಷದಿಂದ ರೂ.6.04 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಹೊಂದಿದ್ದು, 24.39 ರಿಂದ 33.85 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕೀಲೆಸ್ ಎಂಟ್ರಿ ಮತ್ತು ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್ಸ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

Best Cars Rs 3 25 Lakh Starting Price Vayve Mobility Eva Maruti S-Presso Alto K10 Renault Kwid

ಕಡೆಯದಾಗಿ ರೆನಾಲ್ಟ್ ಕ್ವಿಡ್ ಕಾರಿನ ಬಗ್ಗೆ ಮಾತನಾಡುವುದಾದರೆ, ಇದು ರೂ.4.70 ಲಕ್ಷದಿಂದ ರೂ.6.45 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1-ಲೀಟರ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 21.46 ರಿಂದ 22.3 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕೀಲೆಸ್ ಎಂಟ್ರಿ ಹಾಗೂ ಮ್ಯಾನುವಲ್ ಎಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, February 23, 2025, 10:11 [IST]
English summary
Best cars rs 3 25 lakh starting price vayve mobility eva maruti s presso alto k10 renault kwid
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+