ಈ ಕಾರುಗಳನ್ನು ಕಂಡರೆ ಗ್ರಾಹಕರು ಮುಗಿಬೀಳುವರು.. 33+ ಕಿ.ಮೀಗೂ ಅಧಿಕ ಮೈಲೇಜ್, ಬೆಲೆ ಇಷ್ಟೇನಾ ಗುರು!
ಹೊಸ ಕಾರುಗಳನ್ನು ಖರೀದಿ ಮಾಡಬೇಕು ಎಂಬುದು ಪ್ರತಿಯೊಬ್ಬರ ಆಸೆಯಾಗಿರುತ್ತದೆ.. ಬಹುತೇಕರು ಕಡಿಮೆ ನಿರ್ವಹಣಾ ವೆಚ್ಚ ಹಾಗೂ ಗರಿಷ್ಠ ಮೈಲೇಜ್ ನೀಡುವ ಕಾರನ್ನು ಕೊಂಡುಕೊಳ್ಳಲು ಆಲೋಚಿಸುತ್ತಾರೆ. ಅಂತಹವರಿಗೆ ಮಾರುತಿ ಸುಜುಕಿ ಡಿಜೈರ್ (Maruti Suzuki Dzire), ಟಾಟಾ ಟಿಗೂರ್ (Tata Tigor) ಹಾಗೂ ಹ್ಯುಂಡೈ ಔರಾ (Hyundai Aura) ಸೆಡಾನ್‌ಗಳು ಅತ್ಯುತ್ತಮ ಆಯ್ಕೆಯಾಗಲಿವೆ. ಇವುಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ದೊರೆಯುತ್ತವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಮೊದಲಿಗೆ ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಸೆಡಾನ್ ಬಗ್ಗೆ ಮಾತನಾಡೋಣ. ಇದರ ಸಿಎನ್‌ಜಿ ಮಾಡೆಲ್ ರೂ.8.79 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಹೊಂದಿದೆ. 1.2-ಲೀಟರ್ ಸಿಎನ್‌ಜಿ ಎಂಜಿನ್ ಪಡೆದಿದ್ದು, 70 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 102 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಈ ಮಾರುತಿ ಡಿಜೈರ್ ಸೆಡಾನ್ 33.73 ಕೆಎಂ/ಕೆಜಿ ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಮಂದಿ ಓಡಾಟ ನಡೆಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜರ್, ಕ್ರೂಸ್ ಕಂಟ್ರೋಲ್, ಸನ್‌ರೂಫ್ ಹಾಗೂ ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), 3-ಪಾಯಿಂಟ್ ಸೀಟ್ ಬೆಲ್ಟ್‌ಗಳು ಹಾಗೂ 360-ಡಿಗ್ರಿ ಕ್ಯಾಮೆರಾಗಳನ್ನು ಒಳಗೊಂಡಿದೆ.
ಟಾಟಾ ಟಿಗೂರ್ (Tata Tigor) ಸಿಎನ್‌ಜಿ ಸೆಡಾನ್ ಕುರಿತಂತೆ ಹೇಳುವುದಾದರೆ, ಈ ಕಾರು ರೂ.8.90 ಲಕ್ಷ ಎಕ್ಸ್-ಶೋರೂಂ ದರವನ್ನು ಒಳಗೊಂಡಿದೆ. ಇದರ 1.2-ಲೀಟರ್ ಸಿಎನ್‌ಜಿ ಎಂಜಿನ್, 73.5 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 95 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ.

ನೂತನ ಟಾಟಾ ಟಿಗೂರ್ ಸಿಎನ್‌ಜಿ ಕಾರು 26.49 ಕೆಎಂ/ಕೆಜಿ ಮೈಲೇಜ್ ಕೊಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 8 ಸ್ಪೀಕರ್‌ಗಳು, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್, ಕ್ರೂಸ್ ಕಂಟ್ರೋಲ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿದೆ.
ಕಡೆಯದಾಗಿ ಹ್ಯುಂಡೈ ಔರಾ (Hyundai Aura) ಸಿಎನ್‌ಜಿ ಸೆಡಾನ್ ಬಗ್ಗೆ ಮಾತನಾಡುವುದಾದರೆ, ಇದು ರೂ.8.37 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.2-ಲೀಟರ್ ಸಿಎನ್‌ಜಿ ಎಂಜಿನ್ ಪಡೆದಿದೆ. 69 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 95 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿದೆ.

ಹ್ಯುಂಡೈ ಔರಾ ಸಿಎನ್‌ಜಿ ಸೆಡಾನ್ 22 ಕೆಎಂ/ಕೆಜಿ ಮೈಲೇಜ್ ನೀಡುತ್ತದೆ. ಇದರಲ್ಲಿಯೂ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಫೋನ್ ಚಾರ್ಜರ್, ಆಟೋಮೆಟಿಕ್ ಹೆಡ್‌ಲೈಟ್‌ಗಳು ಹಾಗೂ ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications