ಆನೆ ಗಾತ್ರದ ಸ್ವದೇಶಿ ಕಾರುಗಳಿವು.. ಫುಲ್ ಫ್ಯಾಮಿಲಿ ಟ್ರಿಪ್‌ಗೆ ಹೋಗಬಹುದು, ಬೆಲೆ ಎಷ್ಟು.. ವಿಶೇಷತೆಗಳೇನು?

ಪ್ರತಿಯೊಬ್ಬರಿಗೂ ತಮ್ಮ ಕುಟುಂಬಕ್ಕಾಗಿ ಹೊಚ್ಚ ಹೊಸ ಕಾರವೊಂದನ್ನು ಖರೀದಿ ಮಾಡಬೇಕು ಎಂಬ ಬಹುದೊಡ್ಡ ಆಸೆಯಿರುತ್ತದೆ. ಆದರೆ ಯಾವುದನ್ನು ತೆಗೆದುಕೊಳ್ಳಬೇಕು ಎಂಬ ಗೊಂದಲದಲ್ಲಿರುತ್ತಾರೆ. ಅಂತಹವರಿಗೆ ಟಾಟಾ ಸಫಾರಿ (Tata Safari) ಹಾಗೂ ಮಹೀಂದ್ರಾ ಎಕ್ಸ್‌ಯುವಿ 700 (Mahindra XUV 700) ಎಸ್‌ಯುವಿಗಳು ಉತ್ತಮ ಆಯ್ಕೆಯಾಗಲಿವೆ. ಇವುಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದ್ದು, ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿವೆ. ನಾವಿಲ್ಲಿ ಈ ಕಾರುಗಳ ಬೆಲೆ ಹಾಗೂ ವಿಶೇಷತೆ ಕುರಿತಂತೆ ಸಂಕ್ಷಿಪ್ತವಾಗಿ ವಿವರಿಸಿದ್ದೇವೆ.

ಮೊದಲಿಗೆ ಟಾಟಾ ಸಫಾರಿ ಎಸ್‌ಯುವಿ ಬಗ್ಗೆ ಮಾತನಾಡೋಣ. ಈ ಕಾರು ರೂ.15.49 ಲಕ್ಷದಿಂದ ರೂ.26.79 ಲಕ್ಷ (ಎಕ್ಸ್ ಶೋರೂಂ) ದರವನ್ನು ಹೊಂದಿದೆ. ಸ್ಮಾರ್ಟ್, ಪ್ಯೂರ್ & ಅಡ್ವೆಂಚರ್ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಪಡೆದಿದೆ. ಇದು 6 ಅಥವಾ 7 ಆಸನದೊಂದಿಗೆ ಲಭ್ಯವಾಗಲಿದೆ.

Best Family Cars Tata Safari And Mahindra XUV700 Price Mileage Features Details

ನೂತನ ಟಾಟಾ ಸಫಾರಿ ಎಸ್‌ಯುವಿ, 2-ಲೀಟರ್ ಡಿಸೇಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 170 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 350 ಎನ್ಎಂ (ನ್ಯೂಟನ್ ಮೀಟರ್) ಪೀಕ್ ತಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ. 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 16.3 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಈ ಕಾರು 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 10-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸವಾರರ ಸುರಕ್ಷತೆಗಾಗಿ 7 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

Best Family Cars Tata Safari And Mahindra XUV700 Price Mileage Features Details

ಮಹೀಂದ್ರಾ ಎಕ್ಸ್‌ಯುವಿ 700 ಕುರಿತಂತೆ ಹೇಳುವುದಾದರೆ, ಈ ಕಾರು ರೂ.13.99 ಲಕ್ಷದಿಂದ ರೂ.25.49 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. ಎಂಎಕ್ಸ್, ಎಎಕ್ಸ್, ಎಎಕ್ಸ್3 ಮತ್ತು ಎಎಕ್ಸ್5 ಸೇರಿದಂತೆ ವಿವಿಧ ರೂಪಾಂತರಗಳನ್ನು ಒಳಗೊಂಡಿದೆ. ಇದು 5, 6 ಮತ್ತು 7 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ.

ಹೊಸ ಮಹೀಂದ್ರಾ ಎಕ್ಸ್‌ಯುವಿ 700 ಎಸ್‌ಯುವಿ, 2-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಡೀಸೆಲ್ ಎಂಜಿನ್‌ ಹೊಂದಿದೆ. 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಪಡೆದಿದೆ. 17 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಜೊತೆಗೆ ಎವರೆಸ್ಟ್ ವೈಟ್, ಮಿಡ್ನೈಟ್ ಬ್ಲ್ಯಾಕ್ ಮತ್ತು ನಪೋಲಿ ಬ್ಲ್ಯಾಕ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ.

ಈ ಕಾರು 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 12-ಸ್ಪೀಕರ್‌ ಆಡಿಯೊ ಸಿಸ್ಟಮ್, ಸನ್‌ರೂಫ್ ಮತ್ತು ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 7 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, January 12, 2025, 13:07 [IST]
English summary
Best family cars tata safari and mahindra xuv700 price mileage features details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+