7 ಆಸನಗಳಿರುವ 5 ಪ್ರಮುಖ ಕಾರುಗಳಿವು.. ಬೆಲೆಯೂ ಕಮ್ಮಿ! ವಿಶೇಷತೆಗಳೇನು?

ಸದ್ಯ, ಬಹುತೇಕರು 7 ಆಸನಗಳನ್ನು ಪಡೆದಿರುವ ಹೊಸ ಕಾರನ್ನು ಖರೀದಿಸಲು ಬಯಸುತ್ತಾರೆ. ವಿಶೇಷವಾಗಿ ಕೆಲವು ದೊಡ್ಡ ಗಾತ್ರದ ಎಸ್‌ಯುವಿ ಹಾಗೂ ಎಂಪಿವಿಗಳು ಮಾತ್ರವೇ ದೂರದ ಊರುಗಳಿಗೆ ತೆರಳುವಾಗ ಆರಾಮದಾಯಕವಾದ ಪ್ರಯಾಣವನ್ನು ಒದಗಿಸಬಲ್ಲವು. ನೀವು ಕೂಡ ತುಂಬು ಕುಟುಂಬಕ್ಕೆ ಹೆಚ್ಚು ಸೂಕ್ತವಾಗಬಲ್ಲ ನೂತನ ಕಾರೊಂದನ್ನು ಕೊಂಡುಕೊಳ್ಳಲು ಹುಡುಕಾಟ ನಡೆಸುತ್ತಿದ್ದೀರಾ.. ಹಾಗಾದರೆ ರೂ.15 ಲಕ್ಷದೊಳಗೆ ಸಿಗುವ ರೆನಾಲ್ಟ್ ಟ್ರೈಬರ್, ಮಹೀಂದ್ರಾ ಬೊಲೆರೊ, ಮಾರುತಿ ಸುಜುಕಿ ಎರ್ಟಿಗಾ, ಟೊಯೊಟಾ ರೂಮಿಯಾನ್ ಹಾಗೂ ಕಿಯಾ ಕ್ಯಾರೆನ್ಸ್ ಕ್ಲಾವಿಸ್‌ಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ಬನ್ನಿ, ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ರೆನಾಲ್ಟ್ ಟ್ರೈಬರ್ (Renault Triber):

ಇದೊಂದು ಎಂಪಿವಿಯಾಗಿದ್ದು, ಅತಿ ಕಡಿಮೆ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಕನಿಷ್ಠ ರೂ.5.76 ಲಕ್ಷ ಹಾಗೂ ಗರಿಷ್ಠ ರೂ.8.60 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಆಂಬರ್ ಟೆರಾಕೋಟಾ, ಜನ್ಸ್ಕರ್ ಬ್ಲೂ ಮತ್ತು ಶ್ಯಾಡೋ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

Best Five 7-Seater Cars Under Rs 15 Lakh Triber Bolero Ertiga Rumion And Carens Clavis

ನೂತನ 'ಟ್ರೈಬರ್' 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 20 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 7 ಆಸನಗಳನ್ನು ಒಳಗೊಂಡಿದೆ. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 84 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ ಹಾಗೂ ಮ್ಯಾನುವಲ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಮಹೀಂದ್ರಾ ಬೊಲೆರೊ (Mahindra Bolero):

ಈ ಎಸ್‌ಯುವಿಯನ್ನು ಫ್ಯಾಮಿಲಿ ಕಾರಾಗಿ ಆಯ್ಕೆ ಮಾಡಿಕೊಳ್ಳಬಹುದು. ಅದಕ್ಕೆ ತಕ್ಕಂತೆ ರೂ.7.99 ಲಕ್ಷದಿಂದ ರೂ.9.69 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಸ್ಟೆಲ್ತ್ ಬ್ಲ್ಯಾಕ್, ಡೈಮಂಡ್ ವೈಟ್, ಡಿಸ್ಯಾಟ್ ಸಿಲ್ವರ್ ಹಾಗೂ ರಾಕಿ ಬೀಜ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

Best Five 7-Seater Cars Under Rs 15 Lakh Triber Bolero Ertiga Rumion And Carens Clavis

ಹೊಸ 'ಬೊಲೆರೊ' 1.5-ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿದೆ. 14 ರಿಂದ 16 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 7 ಆಸನಗಳನ್ನು ಪಡೆದಿದೆ. ಬರೋಬ್ಬರಿ 370 ಬೂಟ್ ಸ್ಪೇನ್‌ನ್ನು ತನ್ನದಾಗಿಸಿಕೊಂಡಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಬ್ಲೂಟೂತ್‌ ಕನೆಕ್ಟಿವಿಟಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga):

ಇದು ಪ್ರಖ್ಯಾತ ಎಂಪಿವಿಯಾಗಿದೆ. ಕನಿಷ್ಠ ರೂ.8.80 ಲಕ್ಷ ಮತ್ತು ಗರಿಷ್ಠ ರೂ.12.94 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀ. ಪೆಟ್ರೋಲ್ ಹಾಗೂ 1.5-ಲೀ. ಪೆಟ್ರೋಲ್ + ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಒಳಗೊಂಡಿದೆ. 20 ರಿಂದ 26 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 7 ಆಸನಗಳನ್ನು ಹೊಂದಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

Best Five 7-Seater Cars Under Rs 15 Lakh Triber Bolero Ertiga Rumion And Carens Clavis

ಟೊಯೊಟಾ ರೂಮಿಯನ್ (Toyota Rumion):

ಈ ಎಂಪಿವಿಯನ್ನು ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ರೂ.10.44 ಲಕ್ಷದಿಂದ ರೂ.13.62 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.5-ಲೀ. ಪೆಟ್ರೋಲ್ ಮತ್ತು 1.5-ಲೀ. ಪೆಟ್ರೋಲ್ + ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 20 ರಿಂದ 26 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 7 ಆಸನಗಳನ್ನು ಪಡೆದಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

Best Five 7-Seater Cars Under Rs 15 Lakh Triber Bolero Ertiga Rumion And Carens Clavis

ಕಿಯಾ ಕ್ಯಾರೆನ್ಸ್ ಕ್ಲಾವಿಸ್ (Kia Carens Clavis):

ಇದನ್ನು ಸಹ ಕುಟುಂಬದ ಕಾರಾಗಿ ಆಯ್ದುಕೊಳ್ಳಬಹುದಾಗಿದೆ. ಕನಿಷ್ಠ ರೂ.11.08 ಲಕ್ಷ ಹಾಗೂ ಗರಿಷ್ಠ ರೂ.20.71 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀ.ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿದೆ. 15 ರಿಂದ 19 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 6 & 7 ಆಸನಗಳನ್ನು ತನ್ನದಾಗಿಸಿಕೊಂಡಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್‌ ಹಾಗೂ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

More from DriveSpark

Article Published On: Thursday, November 20, 2025, 11:08 [IST]
English summary
Best five 7 seater cars under rs 15 lakh triber bolero ertiga rumion and carens clavis
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+