ತಗೋಳೋದು ತಗೋಳ್ತೀರಾ 7-ಸೀಟರ್‌ನ ಹೊಸ ಫ್ಯಾಮಿಲಿ ಕಾರು ತಗೊಳ್ಳಿ: ಮೂಲ ಬೆಲೆ 5.76 ಲಕ್ಷದಿಂದ ಶುರು.. ಬೆಸ್ಟ್ ಮೈಲೇಜ್!

ಪ್ರತಿಯೊಬ್ಬರಿಗೂ ನೂತನ ಕಾರೊಂದನ್ನು ಖರೀದಿ ಮಾಡಬೇಕೆಂಬ ಬಹುದೊಡ್ಡ ಹೆಬ್ಬಯಕೆ ಇರುತ್ತದೆ. ಆದರೆ ಬಹುತೇಕರಿಗೆ ಈ ವಿಚಾರದಲ್ಲಿ ಸಾಕಷ್ಟು ಗೊಂದಲವಿರುತ್ತದೆ. ನೀವು ಹೊಚ್ಚ ಹೊಸ ಫ್ಯಾಮಿಲಿ ಕಾರೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ, ರೆನಾಲ್ಟ್ ಟ್ರೈಬರ್, ಮಾರುತಿ ಸುಜುಕಿ ಎರ್ಟಿಗಾ, ಮಹೀಂದ್ರಾ ಬೊಲೆರೊ, ಮಹೀಂದ್ರಾ ಬೊಲೆರೊ ನಿಯೋ ಹಾಗೂ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಮಾಡೆಲ್‌ಗಳು ಬೆಸ್ಟ್ ಚಾಯ್ಸ್ ಆಗಲಿವೆ. ಬನ್ನಿ.. ಇವುಗಳ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ರೆನಾಲ್ಟ್ ಟ್ರೈಬರ್ (Renault Triber):

ಇದೊಂದು ಜನಪ್ರಿಯ ಎಂಪಿವಿ ಎಂದೇ ಹೆಸರುವಾಸಿಯಾಗಿದ್ದು, ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ದೊರೆಯುತ್ತದೆ. ರೂ.5.76 ಲಕ್ಷದಿಂದ ರೂ.8.60 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿದ್ದು, ಮಧ್ಯಮ ಹಾಗೂ ಶ್ರೀಮಂತ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. 7 ಆಸನಗಳನ್ನು ಪಡೆದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಸಂಚರಿಸಬಹುದು.

Best Five 7 Seater Family Cars Rs 5 76 Starting Price Triber Ertiga Bolero Bolero Neo And Carens Clavis

ನೂತನ 'ಟ್ರೈಬರ್' ಬೆಲೆಗೆ ತಕ್ಕಂತೆ 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 17 ರಿಂದ 20 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ ಹಾಗೂ ಮ್ಯಾನುವಲ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga):

ಈ ಎಂಪಿವಿಯನ್ನು ಶ್ರೀಸಾಮಾನ್ಯರು ಮೆಚ್ಚಿಕೊಂಡಿದ್ದಾರೆ. ಅದಕ್ಕೆ ತಕ್ಕಂತೆ ಬಜೆಟ್ ದರದಲ್ಲೂ ಸಿಗಲಿದೆ. ರೂ.8.80 ಲಕ್ಷದಿಂದ ರೂ.12.94 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. 7 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ದೂರದ ಊರುಗಳಿಗೆ ಸುಲಭವಾಗಿ ಓಡಾಟ ನಡೆಸಬಹುದು.

Best Five 7 Seater Family Cars Rs 5 76 Starting Price Triber Ertiga Bolero Bolero Neo And Carens Clavis

ಹೊಸ 'ಎರ್ಟಿಗಾ' ರೂಪಾಂತರಗಳಿಗೆ ಅನುಗುಣವಾಗಿ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 20 ರಿಂದ .26.11 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಕೀಲೆಸ್ ಎಂಟ್ರಿಯಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಮಹೀಂದ್ರಾ ಬೊಲೆರೊ (Mahindra Bolero):

ಇದು ಪ್ರಮುಖ ಎಸ್‌ಯುವಿಯಾಗಿದ್ದು, ಗ್ರಾಮೀಣ ಭಾಗದ ಜನರ ನೆಚ್ಚಿನ ಕಾರಾಗಿ ಹೊರಹೊಮ್ಮಿದೆ. ಕಡಿಮೆ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.7.99 ಲಕ್ಷದಿಂದ ರೂ.9.69 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 14 ರಿಂದ 16 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 7 ಆಸನಗಳನ್ನು ಪಡೆದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

Best Five 7 Seater Family Cars Rs 5 76 Starting Price Triber Ertiga Bolero Bolero Neo And Carens Clavis

ಮಹೀಂದ್ರಾ ಬೊಲೆರೊ ನಿಯೋ (Mahindra Bolero Neo):

ಈ ಎಸ್‌ಯುವಿಯನ್ನು ಹಳ್ಳಿ ಹಾಗೂ ಪಟ್ಟಣ ಪ್ರದೇಶದ ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಲಭ್ಯವಿದೆ. ರೂ.8.49 ಲಕ್ಷದಿಂದ ರೂ.10.49 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 17.29 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 7 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಪಡೆದಿದೆ.

Best Five 7 Seater Family Cars Rs 5 76 Starting Price Triber Ertiga Bolero Bolero Neo And Carens Clavis

ಕಿಯಾ ಕ್ಯಾರೆನ್ಸ್ ಕ್ಲಾವಿಸ್ (Kia Carens Clavis):

ಇದನ್ನು ಖರೀದಿದಾರರು ಇಷ್ಟಪಟ್ಟಿದ್ದಾರೆ. ಸ್ವಲ್ಪ ಮಟ್ಟಿಗೆ ದುಬಾರಿಯಾಗಿದೆ. ರೂ.11.08 ಲಕ್ಷದಿಂದ ರೂ.20.71 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 15.34 ರಿಂದ 19.54 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 7 ಆಸನಗಳನ್ನು ಪಡೆದಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್‌ ಹಾಗೂ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

More from DriveSpark

Article Published On: Tuesday, December 23, 2025, 8:30 [IST]
English summary
Best five 7 seater family cars rs 5 76 starting price triber ertiga bolero bolero neo and carens
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+