2025ರ ಜನಪ್ರಿಯ 5-ಸ್ಟಾರ್ ಸೇಫ್ಟಿ ಕಾರುಗಳಿವು.. ಬೆಲೆ ಎಷ್ಟು.. ವಿಶೇಷತೆಗಳೇನು?

ನೀವು ಸುರಕ್ಷಿತ ಕಾರೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, ಟೊಯೊಟಾ ಇನ್ನೋವಾ ಹೈಕ್ರಾಸ್, ಟಾಟಾ ಹ್ಯಾರಿಯರ್ ಇವಿ, ಮಾರುತಿ ಸುಜುಕಿ ಡಿಜೈರ್, ಕಿಯಾ ಸೈರಸ್ ಹಾಗೂ ಸ್ಕೋಡಾ ಕೈಲಾಕ್ ಮಾಡೆಲ್‌ಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ಈ ವರ್ಷ (2025) ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಸಂಸ್ಥೆ ಭಾರತ್ ಎನ್‌ಸಿಎಪಿಯು, ಇದೇ ಕಾರುಗಳಿಗೆ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ನೀಡಿದೆ. ನಾವಿಲ್ಲಿ, ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.

ಟಾಟಾ ಹ್ಯಾರಿಯರ್ ಇವಿ (Tata Harrier EV):

ಇದೊಂದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. 'ಭಾರತ್ ಎನ್‌ಸಿಎಪಿ'ಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 32 ಅಂಕ ಹಾಗೂ ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 45 ಅಂಕಗಳನ್ನು ಗಳಿಸಿದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಆಲ್ ವೀಲ್ ಡಿಸ್ಕ್ ಬ್ರೇಕ್ ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

Best Five Safest Cars In 2025 Harrier Ev Innova Hycross Syros Kylaq Dzire

ಈ ಕಾರು ರೂ.21.49 ಲಕ್ಷದಿಂದ ರೂ.28.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 65 ಮತ್ತು 75 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 538 ರಿಂದ 627 ಕಿಲೋಮೀಟರ್ ಓಡುತ್ತದೆ. 5 ಆಸನಗಳನ್ನು ಹೊಂದಿದೆ. 14.5-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿರುವ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಹಾಗೂ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross):

ಇದು ಕೂಡ 'ಭಾರತ್ ಎನ್‌ಸಿಎಪಿ'ಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ತನ್ನದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 30.47 ಅಂಕ ಮತ್ತು ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 45 ಅಂಕಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

Best Five Safest Cars In 2025 Harrier Ev Innova Hycross Syros Kylaq Dzire

ನೂತನ ಇನ್ನೋವಾ ಹೈಕ್ರಾಸ್ ಎಂಪಿವಿ ಕನಿಷ್ಠ ರೂ.19.94 ಲಕ್ಷ ಮತ್ತು ಗರಿಷ್ಠ ರೂ.32.58 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 2.0-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ & 2.0-ಲೀ. ಹೈಬ್ರಿಡ್ (ಎಲೆಕ್ಟ್ರಿಕ್+ಪೆಟ್ರೋಲ್) ಎಂಜಿನ್ ಹೊಂದಿದ್ದು, 23 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 7/ 8 ಆಸನಗಳನ್ನು ಹೊಂದಿದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಕಿಯಾ ಸೈರಸ್ (Kia Syros):

ಈ ಎಸ್‌ಯುವಿಯು 'ಭಾರತ್ ಎನ್‌ಸಿಎಪಿ'ಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ವಿಎಸ್ಎಂ (ವೆಹಿಕಲ್ ಸ್ಟೆಬಿಲಿಟಿ ಮ್ಯಾನೇಜ್‌ಮೆಂಟ್), 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ. ರೂ.9.50 ಲಕ್ಷದಿಂದ ರೂ.17.80 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ.

Best Five Safest Cars In 2025 Harrier Ev Innova Hycross Syros Kylaq Dzire

ಸ್ಕೋಡಾ ಕೈಲಾಕ್ (Skoda Kylaq):

ಇದೊಂದು ಎಸ್‌ಯುವಿಯಾಗಿದ್ದು, 'ಭಾರತ್ ಎನ್‌ಸಿಎಪಿ'ಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ತನ್ನದಾಗಿಸಿಕೊಳ್ಳುವಲ್ಲಿಯೂ ಯಶಸ್ವಿಯಾಗಿದೆ. 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾದಂತಹ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದಿದೆ. ಕನಿಷ್ಠ ರೂ.8.25 ಲಕ್ಷ ಮತ್ತು ಗರಿಷ್ಠ ರೂ.13.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ.

Best Five Safest Cars In 2025 Harrier Ev Innova Hycross Syros Kylaq Dzire

ಮಾರುತಿ ಸುಜುಕಿ ಡಿಜೈರ್ (Maruti Suzuki Dzire):

ಈ ಸೆಡಾನ್ ಸಹ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಹೊಂದಿದೆ. ರೂ.6.84 ಲಕ್ಷದಿಂದ ರೂ.10.19 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಾಗುತ್ತದೆ.

Article Published On: Monday, July 28, 2025, 13:26 [IST]
English summary
Best five safest cars in 2025 harrier ev innova hycross syros kylaq dzire
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+