ಬೈಕ್‌ನಂತೆ 28 Km ಮೈಲೇಜ್.. 7.21 ಲಕ್ಷ.. ಈ ಟೊಯೊಟಾ ಕಾರಿನ ಹೊಸ ಆನ್-ರೋಡ್ ದರವೆಷ್ಟು.. EMI ಇಷ್ಟೆನಾ?

ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ (Toyota Urban Cruiser Taisor) ವಿಶ್ವಾಸಾರ್ಹ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಸೆ.22 ರಿಂದ ಪರಿಷ್ಕೃತ ಜಿಎಸ್‌ಟಿ ತೆರಿಗೆ ದರಗಳು ಜಾರಿಗೊಂಡಿವೆ. ಇದರ ಸಂಪೂರ್ಣ ಲಾಭವು 'ಟೈಸರ್' ಕಾರಿಗೂ ದೊರೆಯುತ್ತಿದ್ದು, ರೂ.1.12 ಲಕ್ಷ ವರೆಗೆ ಬೆಲೆ ಇಳಿಕೆಯಾಗಿದೆ. ರೂ.7.21 ಲಕ್ಷದಿಂದ ರೂ.12.06 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, 'ಟೊಯೊಟಾ ಟೈಸರ್' ಅತ್ಯುತ್ತಮ ಆಯ್ಕೆಯಾಗಲಿದೆ. ನಾವಿಲ್ಲಿ ಇದೇ ಎಸ್‌ಯುವಿಯ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಕುರಿತಂತೆ ಪ್ರಮುಖ ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.

ನೂತನ 'ಟೊಯೊಟಾ ಟೈಸರ್' ಹಲವು ವಿಧದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದರ ಇ (ಪೆಟ್ರೋಲ್) ರೂಪಾಂತರ, ರೂ.8.61 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.6.61 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.13,000 ವರೆಗೆ ಇಎಂಐ ಕಟ್ಟಬೇಕು.

Best Mileage Toyota Urban Cruiser Taisor New On Road Price And Emi Details

ಇನ್ನೊಂದು ಎಸ್ (ಪೆಟ್ರೋಲ್) ರೂಪಾಂತರ, ರೂ.9.53 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.7.53 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ 5 ವರ್ಷಗಳಿಗೆ ತಿಂಗಳಿಗೆ ರೂ.15,000 ವರೆಗೆ ಇಎಂಐ ಪಾವತಿಸಬೇಕು.

ಮತ್ತೊಂದು ಎಸ್ ಪ್ಲಸ್ (ಪೆಟ್ರೋಲ್) ರೂಪಾಂತರ, ರೂ.9.92 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ತೆಗೆದುಕೊಂಡರೆ, ರೂ.7.92 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಕ್ಕೆ ಮಾಸಿಕ ರೂ.16,000 ವರೆಗೆ ಇಎಂಐ ಕಟ್ಟಬೇಕು.

Best Mileage Toyota Urban Cruiser Taisor New On Road Price And Emi Details

ಇದೇ ಕಾರಿನ ಇ (ಸಿಎನ್‌ಜಿ) ರೂಪಾಂತರ, ರೂ.9.66 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಪಡೆದಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಖರೀದಿಸಿದರೆ, ರೂ.7.66 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ 5 ವರ್ಷಗಳಿಗೆ ತಿಂಗಳಿಗೆ ರೂ.15,500 ವರೆಗೆ ಇಎಂಐ ಪಾವತಿ ಮಾಡಬೇಕು.

ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ವಿಶೇಷತೆಗಳೇನು:

ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಅದು ನೋಡುಗರ ಕಣ್ಣು ಕುಕ್ಕುವಂತಿದೆ. ಸ್ಪೋರ್ಟಿನ್ ರೆಡ್, ಬ್ಲ್ಯೂಯಿಸ್ ಬ್ಲ್ಯಾಕ್, ಲ್ಯೂಸೆಂಟ್ ಆರೆಂಜ್, ಕೆಫೆ ವೈಟ್ ಮತ್ತು ಗೇಮಿಂಗ್ ಗ್ರೇ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. 190 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 2,520 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. ಬರೋಬ್ಬರಿ 1,060 ಕೆಜಿ ತೂಕವಿದೆ.

ಇದು 1.2-ಲೀ. ಪೆಟ್ರೋಲ್, 1.0-ಲೀ. ಟರ್ಬೊ ಪೆಟ್ರೋಲ್ ಮತ್ತು 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 19 ರಿಂದ 28 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 175 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 10.98 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ನೂತನ 'ಟೈಸರ್' 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 308 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳು, ಕ್ರೂಸ್ ಕಂಟ್ರೋಲ್ ಹಾಗೂ ರೇರ್ ಎಸಿ ವೆಂಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ನಿಮ್ಮ ಗಮನಕ್ಕೆ.. ಈ ಕಾರಿನ ಕೆಲವೇ ರೂಪಾಂತರಗಳ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆ ಬಗ್ಗೆ ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

Article Published On: Wednesday, October 8, 2025, 8:40 [IST]
English summary
Best mileage toyota urban cruiser taisor new on road price and emi details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+