ಬಡವರಿಗೆ ಪರ್ಫೆಕ್ಟ್ ಕಾರುಗಳಿವು.. 5 ಲಕ್ಷ ಬೆಲೆ, 34 ಕಿ.ಮೀ ವರೆಗೆ ಮೈಲೇಜ್.. 5 ಸೀಟರ್!

ಭಾರತದ ಮಧ್ಯಮ ವರ್ಗದ ಜನರಿಗೆ ಹೊಚ್ಚ ಹೊಸ ಕಾರೊಂದನ್ನು ಖರೀದಿಸಬೇಕೆಂಬ ಬಹುದೊಡ್ಡ ಆಸೆಯಿರುತ್ತದೆ. ಆದರೆ ಯಾವ ಕಾರನ್ನು ಕೊಳ್ಳಬೇಕು ಎಂಬುದರ ಬಗ್ಗೆ ಅರಿವು ಇರುವುದಿಲ್ಲ. ಅಂತಹವರಿಗೆ 2025ರಲ್ಲೂ ರೂ.5 ಲಕ್ಷ ಎಕ್ಸ್-ಶೋರೂಂ ದರದಲ್ಲಿ ಸಿಗುವ ಈ ನಾಲ್ಕು ಕಾರುಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ಇವುಗಳು ಬೆಲೆಗೆ ತಕ್ಕಂತೆ ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿವೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10):

ಇದು ಶ್ರೀಸಾಮಾನ್ಯರಿಗೆ ಉತ್ತಮವಾಗಬಲ್ಲ ಕಾರಾಗಿದ್ದು, ರೂ.4.20 ಲಕ್ಷದಿಂದ ರೂ.6.20 ಲಕ್ಷವರೆಗೆ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಒಳಗೊಂಡಿದೆ. 24 ರಿಂದ 33.85 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಎಲ್ಎಕ್ಸ್ಐ, ವಿಎಕ್ಸ್ಐ & ವಿಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

Best Small Cars In 2025 Rs 5 Lakh Ex-showroom Price Alto K10 S-Presso Tiago Kwid

ಈ ಹ್ಯಾಚ್‌ಬ್ಯಾಕ್ 4/ 5 ಆಸನಗಳನ್ನು ಒಳಗೊಂಡಿದೆ. ಮೆಟಾಲಿಕ್ ಸಿಜ್ಲಿಂಗ್ ರೆಡ್, ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಗ್ರಾನೈಟ್ ಗ್ರೇ ಮತ್ತು ಮೆಟಾಲಿಕ್ ಸ್ಪೀಡಿ ಬ್ಲೂ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ. 7-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಕೀಲೆಸ್ ಎಂಟ್ರಿ ಹಾಗೂ ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌, 6-ಏರ್‌ಬ್ಯಾಗ್‌ಗಳು ಮತ್ತು 3-ಪಾಯಿಂಟ್ ಸೀಟ್ ಬೆಲ್ಟ್‌ಗಳು ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso):

ಇದೊಂದು ಹ್ಯಾಚ್‌ಬ್ಯಾಕ್ ಆಗಿದ್ದು, ಬಜೆಟ್ ಬೆಲೆಯಲ್ಲಿಯೂ ಲಭ್ಯವಿದೆ. ಕನಿಷ್ಠ ರೂ.4.20 ಲಕ್ಷ ಹಾಗೂ ಗರಿಷ್ಠ 6.10 ಲಕ್ಷವರೆಗೆ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 1-ಲೀಟರ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ ಪಡೆದಿದ್ದು, 24.12 ರಿಂದ 32.73 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಸಾಲಿಡ್ ಫೈರ್ ರೆಡ್, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸಿಲ್ಕಿ ಸಿಲ್ವರ್ ಹಾಗೂ ಸಾಲಿಡ್ ಸಿಜಲ್ ಆರೆಂಜ್ ಎಂಬ ಬಣ್ಣಗಳನ್ನು ಪಡೆದಿದೆ.

Best Small Cars In 2025 Rs 5 Lakh Ex-showroom Price Alto K10 S-Presso Tiago Kwid

ನೂತನ ಎಸ್-ಪ್ರೆಸ್ಸೊ 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. 7-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಕೀಲೆಸ್ ಎಂಟ್ರಿ, ಡುಯಲ್-ಫ್ರಂಟ್ ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್‌ನಂತಹ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಟಾಟಾ ಟಿಯಾಗೊ (Tata Tiago):

ಈ ಕಾರು ರೂ.5 ಲಕ್ಷದಿಂದ ರೂ.8.50 ಲಕ್ಷವರೆಗೆ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಪಡೆದಿದೆ. 19 ರಿಂದ 28 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಪ್ರಿಸ್ಟೈನ್ ವೈಟ್, ಡೇಟೋನಾ ಗ್ರೇ, ಟೊರ್ನಾಡೊ ಬ್ಲೂ, ಸೂಪರ್ನೋವಾ ಕಾಪರ್, ಓಷನ್ ಬ್ಲೂ ಹಾಗೂ ಅರಿಜೋನಾ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Best Small Cars In 2025 Rs 5 Lakh Ex-showroom Price Alto K10 S-Presso Tiago Kwid

ಹೊಸ ಟಿಯಾಗೊ 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕೀಲೆಸ್ ಎಂಟ್ರಿ, ಪುಶ್ ಸ್ಟಾರ್ಟ್-ಸ್ಟಾಪ್ ಬಟನ್, ರೇರ್ ಸೆನ್ಸರ್ಸ್ ವೈಪರ್‌ಗಳು, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳು, ಡುಯಲ್-ಫ್ರಂಟ್ ಏರ್‌ಬ್ಯಾಗ್‌ಗಳು ಹಾಗೂ ರೇರ್ ಪಾರ್ಕಿಂಗ್ ಕ್ಯಾಮೆರಾ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ರೆನಾಲ್ಟ್ ಕ್ವಿಡ್ (Renault Kwid):

ಇದು ಕೈಗೆಟಕುವ ಬೆಲೆಯಲ್ಲಿ ಸಿಗಲಿದ್ದು, ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಂಡಕೊಳ್ಳಬಹುದು. ಈ ಕಾರು ಕನಿಷ್ಠ ರೂ.4.70 ಲಕ್ಷ ರೂ.6.40 ಲಕ್ಷವರೆಗೆ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1-ಲೀಟರ್ ಪೆಟ್ರೋಲ್ ಎಂಜಿನ್‌ ಹೊಂದಿದ್ದು, 21 ರಿಂದ 22 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಐಸ್ ಕೂಲ್ ವೈಟ್, ಔಟ್‌ಬ್ಯಾಕ್ ಬ್ರೊನ್ ಹಾಗೂ ಮೂನ್‌ಲೈಟ್ ಸಿಲ್ವರ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

Best Small Cars In 2025 Rs 5 Lakh Ex-showroom Price Alto K10 S-Presso Tiago Kwid

ನೂತನ ಕ್ವಿಡ್ 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್ (ಒ) ಹಾಗೂ ಆರ್‌ಎಕ್ಸ್‌ಟಿ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ. 8-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕೀ-ಲೆಸ್ ಎಂಟ್ರಿ, ಮ್ಯಾನುವಲ್ ಎಸಿ, ಡುಯಲ್-ಫ್ರಂಟ್ ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ ಸ್ಟಾರ್ಟ್ ಅಸಿಸ್ಟ್ & ರೇರ್ ಪಾರ್ಕಿಂಗ್ ಸೇನಾರ್ಸ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Article Published On: Wednesday, July 16, 2025, 8:28 [IST]
English summary
Best small cars in 2025 rs 5 lakh exshowroom price alto k10 s presso tiago kwid
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+