ಭಾರತದಲ್ಲಿ 10 ಲಕ್ಷಕ್ಕಿಂತ ಕಡಿಮೆ ಬೆಲೆಯ ಬೆಸ್ಟ್‌ ಎಸ್‌ಯುವಿಗಳು: ಮಾರುಕಟ್ಟೆ ನಾಯಕರು!

2025ರಲ್ಲಿ ಭಾರತದಲ್ಲಿ ರೂ. 10 ಲಕ್ಷಕ್ಕಿಂತ ಕಡಿಮೆ ಬೆಲೆಯ SUV ವಿಭಾಗದಲ್ಲಿ ಅತ್ಯುತ್ತಮ ಮಾರಾಟ ಕಂಡ ಟಾಪ್ ಕಾರುಗಳು ಇಲ್ಲಿವೆ. ಇವು ಉದಾರವಾದ ಕ್ಯಾಬಿನ್, ಹೆಚ್ಚಿನ ಬೂಟ್ ಸ್ಪೇಸ್‌, ಅತ್ಯುತ್ತಮ ಸುರಕ್ಷತೆ ಮತ್ತು ಬೆಸ್ಟ್ ಮೈಲೇಜ್ ನೀಡುವ ದಕ್ಷ ಎಂಜಿನ್‌ಗಳನ್ನು ಹೊಂದಿವೆ. ದೈನಂದಿನ ಪ್ರಯಾಣ ಮತ್ತು ವಾರಾಂತ್ಯದ ಲಾಂಗ್‌ ಡ್ರೈವ್‌ಗಳಿಗೂ ಉತ್ಸಾಹಭರಿತ ಪರ್ಫಾಮೆನ್ಸ್‌ಗೂ ಜನಪ್ರಿಯವಾಗಿವೆ. ಪ್ರಾಯೋಗಿಕತೆಗೆ ಆದ್ಯತೆ ನೀಡುವ ಬಜೆಟ್ - ಪ್ರಜ್ಞೆಯ ಕುಟುಂಬಗಳಿಗೆ ಬೆಸ್ಟ್ ಆಯ್ಕೆಯಾಗಿವೆ. ಬನ್ನಿ ವಿವರವಾಗಿ ನೋಡೋಣ.

ಟಾಟಾ ಪಂಚ್: ಟಾಟಾ ಪಂಚ್ ಬೆಲೆಯು ರೂ. 5.50 ಲಕ್ಷದಿಂದ (ಎಕ್ಸ್‌ ಶೋರೂಂ) ಪ್ರಾರಂಭವಾಗುತ್ತದೆ. ಪೆಟ್ರೋಲ್, ಸಿಎನ್‌ಜಿ ಹಾಗೂ ಎಲೆಕ್ಟ್ರಿಕ್ ಆವೃತ್ತಿಗಳಲ್ಲಿ ಖರೀದಿಗೆ ಲಭ್ಯವಿದೆ. ಎಲೆಕ್ಟ್ರಿಕ್ ಹಾಗೂ ಸಿಎನ್‌ಜಿ ಆವೃತ್ತಿಗಳ ಬೆಲೆ ದುಬಾರಿಯಾಗಿರುವುದರಿಂದ ಇಲ್ಲಿ ಪೆಟ್ರೋಲ್ ಚಾಲಿತ ಟಾಟಾ ಪಂಚ್ ಬಗ್ಗೆ ಮಾತ್ರ ವಿವರಿಸಲಾಗಿದೆ. 1.2 - ಲೀಟರ್ ರೆವೊಟ್ರಾನ್ ಪೆಟ್ರೋಲ್ ಎಂಜಿನ್ ಹೊಂದಿರುವ ಟಾಟಾ ಪಂಚ್, 5 - ಸ್ಪೀಡ್ ಮ್ಯಾನುವಲ್ ಅಥವಾ AMT ಜೊತೆಗೆ ಬರುತ್ತದೆ.

best-suvs-under-10-lakhs-in-india-market-leaders

ಫೀಚರ್ ವಿಷಯಕ್ಕೆ ಬಂದರೆ, ವೇರಿಯೆಂಟ್ ಅವಲಂಭಿಸಿ USB ಟೈಪ್-ಸಿ ಚಾರ್ಜಿಂಗ್ ಪೋರ್ಟ್, ವೈರ್‌ಲೆಸ್ ಚಾರ್ಜರ್, ಎಲೆಕ್ಟ್ರಿಕ್ ಸನ್‌ರೂಫ್ ಮತ್ತು ಹಿಂಭಾಗದಲ್ಲಿ ಎಸಿ ವೆಂಟ್‌ಗಳನ್ನು ಹೊಂದಿದೆ. ಇದರೊಂದಿಗೆ ವೈರ್‌ಲೆಸ್ ಆಪಲ್ ಕಾರ್ಪ್ಲೇ ಮತ್ತು ಆಂಡ್ರಾಯ್ಡ್ ಆಟೋದೊಂದಿಗೆ ಹೊಸ 10.25-ಇಂಚಿನ ಟಚ್ ಸ್ಕ್ರೀನ್ ಇನ್ಫೋಟೈನ್ ಮೆಂಟ್ ಸಿಸ್ಟಮ್ ನೀಡಲಾಗಿದೆ. ಇಂಧನ ಪ್ರಕಾರವನ್ನು ಅವಲಂಬಿಸಿ 18.8 ರಿಂದ 20.09 ಕಿ.ಮೀ ಮೈಲೇಜ್ ನೀಡುತ್ತದೆ.

ಟಾಟಾ ನೆಕ್ಸಾನ್: ಹೊಸ ಟಾಟಾ ನೆಕ್ಸಾನ್ ಬೆಲೆಯು ರೂ. 7.32 ಲಕ್ಷದಿಂದ (ಎಕ್ಸ್‌ ಶೋರೂಂ) ಪ್ರಾರಂಭವಾಗುತ್ತದೆ. ಇದು ಕೂಡ ಪೆಟ್ರೋಲ್, ಸಿಎನ್‌ಜಿ ಹಾಗೂ ಎಲೆಕ್ಟ್ರಿಕ್ ಆವೃತ್ತಿಗಳಲ್ಲಿ ಖರೀದಿಗೆ ಲಭ್ಯವಿದೆ. ಟಾಟಾ ನೆಕ್ಸಾನ್ 1.2-ಲೀ. ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17 ರಿಂದ 24 (ಸಿಎನ್‌ಜಿ) ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.

best-suvs-under-10-lakhs-in-india-market-leaders

ವೇರಿಯೆಂಟ್ ಅವಲಂಭಿಸಿ ಕಾರಿನಲ್ಲಿ 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಏರ್ ಪ್ಯೂರಿಫೈಯರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಕೋಲ್ಡ್ ಗ್ಲೋವ್‌ಬಾಕ್ಸ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಮಹೀಂದ್ರಾ XUV 3XO: ಮಹೀಂದ್ರಾ XUV 3XO ಬೆಲೆಯು ರೂ. 7.28 ಲಕ್ಷದಿಂದ (ಎಕ್ಸ್‌ ಶೋರೂಂ) ಪ್ರಾರಂಭವಾಗುತ್ತದೆ. ಇದು 1.2- ಲೀ. ಎಂಪಿಎಫ್ಐ ಟರ್ಬೊ ಪೆಟ್ರೋಲ್ ಎಂಜಿನ್ ಜೊತೆಗೆ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಈ ಕಾರು 18 ರಿಂದ 21 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.

best-suvs-under-10-lakhs-in-india-market-leaders

ಫೀಚರ್ಸ್ ವಿಷಯಕ್ಕೆ ಬಂದರೆ ವೇರಿಯೆಂಟ್ ಅವಲಂಭಿಸಿ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25 ಇಂಚಿನ ಡುಯಲ್ ಡಿಸ್​ಪ್ಲೇಗಳು, ಡುಯಲ್ ಜೋನ್ ಕ್ಲೇಮೇಟ್ ಕಂಟ್ರೋಲ್, ಯುಎಸ್‌‍ಬಿ-ಸಿ ಫಾಸ್ಟ್ ಚಾರ್ಜಿಂಗ್ ಪೋರ್ಟ್‌ಗಳು, ಪನೋರಮಿಕ್ ಸನ್‌ರೂಫ್ ಹಾಗೂ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ನಿಸ್ಸಾನ್ ಮ್ಯಾಗ್ನೈಟ್: ಹೊಸ ನಿಸ್ಸಾನ್ ಮ್ಯಾಗ್ನೈಟ್ ಬೆಲೆಯು ರೂ. 5.62 ಲಕ್ಷದಿಂದ (ಎಕ್ಸ್‌ ಶೋರೂಂ) ಪ್ರಾರಂಭವಾಗುತ್ತದೆ. 1-ಲೀಟರ್ ಟರ್ಬೋ ಹಾಗೂ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಹೊಂದಿರುವ ಈ ಕಾರು, 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ವೇರಿಯೆಂಟ್‌ಗಳಿಗೆ ಅನುಗುಣವಾಗಿ 17.4 ರಿಂದ 20 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.

ವೇರಿಯೆಂಟ್ ಅವಲಂಭಿಸಿ ಇದರಲ್ಲಿ 8 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಆಟೋಮೆಟಿಕ್ ಕ್ಲೈಮೇಟ್ ಕಂಟ್ರೋಲ್, 4-ಕಲರ್ ಆಂಬಿಯೆಂಟ್ ಲೈಟಿಂಗ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

More from DriveSpark

Article Published On: Monday, December 8, 2025, 18:29 [IST]
English summary
Best suvs under 10 lakhs in india market leaders
Read more on auto news
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+