ಬದುಕಿನ ಬಂಡಿ ಎಳೆಯಲು ಟ್ಯಾಕ್ಸಿ ಖರೀದಿಸಬೇಕೇ.. ಇವುಗಳು ಬೆಸ್ಟ್, 34 ಕಿ.ಮೀ ಮೈಲೇಜ್.. 5.64 ಲಕ್ಷ ಬೆಲೆ!
ಬದುಕಿನ ಬಂಡಿ ಎಳೆಯಲು ಒಬ್ಬೊಬ್ಬರು ಒಂದೊಂದು ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ನೀವು ಕಾರನ್ನು ಓಡಿಸಲು ಕಲಿತಿದ್ದು, ಚಾಲಕರಾಗಿ ಜೀವನ ಕಟ್ಟಿಕೊಳ್ಳಲು ಆಲೋಚಿಸಿದ್ದೀರಾ.. ಹಾಗಾದರೆ, ಮಾರುತಿ ಸುಜುಕಿ ಡಿಜೈರ್ ಟೂರ್ ಎಸ್, ಟಾಟಾ ಟಿಗೊರ್, ಹ್ಯುಂಡೈ ಔರಾ, ಮಾರುತಿ ಸುಜುಕಿ ವ್ಯಾಗನ್ ಆರ್ ಹಾಗೂ ಮಾರುತಿ ಸುಜುಕಿ ಎರ್ಟಿಗಾ ಕಾರುಗಳು ಹೆಚ್ಚು ಸೂಕ್ತವಾಗಲಿವೆ. ಬನ್ನಿ.. ಈ ಕಾರುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.
ಮಾರುತಿ ಸುಜುಕಿ ಡಿಜೈರ್ ಟೂರ್ ಎಸ್ (Maruti Suzuki Dzire Tour S): ಇದೊಂದು ಸೆಡಾನ್ ಆಗಿದ್ದು, ಬಜೆಟ್ ಬೆಲೆಯಲ್ಲಿ ಸಿಗುತ್ತದೆ. ಈ ಕಾರಿನ ಪೆಟ್ರೋಲ್ ಚಾಲಿತ ಮಾಡೆಲ್, ರೂ.6.79 ಲಕ್ಷ ದರವನ್ನು ಹೊಂದಿದೆ. ಅದೇ ರೀತಿಯಲ್ಲಿ ಸಿಎನ್‌ಜಿ ಚಾಲಿತ ಮಾಡೆಲ್ ರೂ.7.74 ಲಕ್ಷ (ಎಕ್ಸ್ ಶೋರೂಂ) ಗ್ರಾಹಕರ ಖರೀದಿಗೆ ಲಭ್ಯವಾಗುತ್ತದೆ.

ಈ ಡಿಜೈರ್ ಟೂರ್ ಎಸ್ ಸೆಡಾನ್ 1.2-ಲೀ. ಸಾಮರ್ಥ್ಯದ 3-ಸಿಲಿಂಡರ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. ಇದರೊಟ್ಟಿಗೆ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಮಾತ್ರ ಹೊಂದಿದೆ. 22.72 ರಿಂದ 24.69 ಕೆಎಂಪಿಎಲ್‌ವರೆಗೆ ಕೊಡುತ್ತದೆ. ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಸಬಹುದು.
ನೂತನ ಮಾರುತಿ ಸುಜುಕಿ ಡಿಜೈರ್ ಟೂರ್ ಎಸ್ ಕಾರು ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್ ಮತ್ತು ಬ್ಲೂಯಿಶ್ ಬ್ಲೂ ಎಂಬ ಬಣ್ಣಗಳ ಆಯ್ಕೆಯನ್ನು ಒಳಗೊಂಡಿದೆ. ಅಲಾಯ್ ವೀಲ್‌ಗಳು, ರೇರ್ ಡಿಫಾಗರ್ & ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಪಡೆದಿದೆ.

ಟಾಟಾ ಟಿಗೂರ್ (Tata Tigor): ಈ ಸೆಡಾನ್ ಟ್ಯಾಕ್ಸಿ ಸೇವೆ ಒದಗಿಸಲು ಹೆಚ್ಚು ಸೂಕ್ತವಾಗಿದೆ. ರೂ.6 ಲಕ್ಷದಿಂದ ರೂ.9.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಎಕ್ಸ್ಎಂ, ಎಕ್ಸ್‌ಟಿ ಹಾಗೂ ಎಕ್ಸ್‌ಜಡ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ. ಇದರಲ್ಲಿಯೂ 5 ಆಸನಗಳಿವೆ.
ಹೊಸ ಟಾಟಾ ಟಿಗೂರ್ ಕಾರು 1.2-ಲೀ. ಪೆಟ್ರೋಲ್ ಹಾಗೂ 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಇಂಧನ ದಕ್ಷತೆ ವಿಚಾರವಾಗಿ ಹೇಳುವುದಾದರೆ, ಈ ಸೆಡಾನ್ 19.43 ರಿಂದ 28.06 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ.

ಈ ಟಿಗೂರ್ ಸೆಡಾನ್ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಹ್ಯುಂಡೈ ಔರಾ (Hyundai Aura): ಇದು ಕೂಡ ಸೆಡಾನ್ ಆಗಿದೆ. ರೂ.6.54 ಲಕ್ಷದಿಂದ ರೂ.9.11 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಇ, ಎಸ್, ಎಸ್ಎಕ್ಸ್ & ಎಸ್ಎಕ್ಸ್ (ಒ) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಪಡೆದಿದೆ. ಟೈಫೂನ್ ಸಿಲ್ವರ್, ಸ್ಟಾರಿ ನೈಟ್, ಅಟ್ಲಾಸ್ ವೈಟ್, ಟೈಟಾನ್ ಗ್ರೇ & ಟೀಲ್ ಬ್ಲೂ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ ಹ್ಯುಂಡೈ ಔರಾ ಸೆಡಾನ್ 1.2-ಲೀ. 4-ಸಿಲಿಂಡರ್ ಪೆಟ್ರೋಲ್ ಮತ್ತು 1.2-ಲೀ. ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟೆಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17 ರಿಂದ 28.4 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಈ ಕಾರಿನಲ್ಲೂ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು. 6.5-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR): ಈ ಹ್ಯಾಚ್‌ಬ್ಯಾಕ್ ರೂ.5.64 ಲಕ್ಷದಿಂದ ರೂ.7.47 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ & ಝಡ್ಎಕ್ಸ್ಐ ಒಳಗೊಂಡಂತೆ ವಿವಿಧ ರೂಪಾಂತರಗಳನ್ನು (ವೇರಿಯೆಂಟ್) ಹೊಂದಿದೆ. ಗ್ಯಾಲಂಟ್ ರೆಡ್, ಪೂಲ್‌ಸೈಡ್ ಬ್ಲೂ, ಸುಪೀರಿಯರ್ ವೈಟ್ ಮತ್ತು ಸಿಲ್ಕಿ ಸಿಲ್ವರ್ ಎಂಬ ಬಣ್ಣಗಳನ್ನು ಒಳಗೊಂಡಿದೆ.

ಈ ಮಾರುತಿ ವ್ಯಾಗನ್ಆರ್ ಕಾರು 1-ಲೀ. ಪೆಟ್ರೋಲ್, 1.2-ಲೀ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 23.56 ರಿಂದ 34.05 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣ ಮಾಡಬಹುದು.
ಹೊಸ ಮಾರುತಿ ಸುಜುಕಿ ವ್ಯಾಗನ್ಆರ್ ಹ್ಯಾಚ್‌ಬ್ಯಾಕ್ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು 312 ಲೀ. ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಡಿಸ್‌ಪ್ಲೇ, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್ ಮತ್ತು ಸ್ಟೀರಿಂಗ್ ಮೌಂಟೆಡ್ ಆಡಿಯೋ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.
ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga): ಇದೊಂದು ಎಂಪಿವಿಯಾಗಿದೆ. ರೂ.8.84 ಲಕ್ಷದಿಂದ ರೂ.13.13 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ವಿಎಕ್ಸ್ಐ, ಝಡ್ಎಕ್ಸ್ಐ & ಝಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳನ್ನು (ವೇರಿಯೆಂಟ್) ಪಡೆದಿದೆ. ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮಿಡ್‌ನೈಟ್ ಬ್ಲ್ಯಾಕ್, ಪರ್ಲ್ ಆರ್ಕ್ಟಿಕ್ ವೈಟ್, ಡಿಗ್ನಿಟಿ ಬ್ರೌನ್ & ಪರ್ಲ್ ಮೆಟಾಲಿಕ್ ಆಕ್ಸ್‌ಫರ್ಡ್ ಬ್ಲೂ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.
ನೂತನ ಎರ್ಟಿಗಾ ಕಾರು 1.5-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಹೊಂದಿದೆ. 20.3 ರಿಂದ 26.11 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಈ ಕಾರು 7 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ.
ಈ ಎಂಪಿವಿಯು ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು 209 ಲೀ.ನ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಪ್ಯಾಡಲ್ ಶಿಫ್ಟರ್, ಕ್ರೂಸ್ ಕಂಟ್ರೋಲ್ ಮತ್ತು ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 4 ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಹಾಗೂ ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications