Safest cars: ಆನೆಯಷ್ಟೇ ಬಲಿಷ್ಠ ಕಾರುಗಳು... 5-ಸ್ಟಾರ್ ರೇಟಿಂಗ್, ಇವುಗಳ ಬಗ್ಗೆ ಯಾರೂ ಹೇಳುವುದಿಲ್ಲ!
ಭಾರತದಲ್ಲಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ, ಕಾರು ತಯಾರಕರು ಕೂಡ ಕಾರುಗಳ ನಿರ್ಮಾಣ ಗುಣಮಟ್ಟವನ್ನು ಸುಧಾರಿಸಲಾಗುತ್ತಿದೆ. ಪ್ರಸ್ತುತ ಗುಣಮಟ್ಟದ ಕಾರುಗಳನ್ನು ನೀಡುವ ಪ್ರಮುಖ ದೇಶೀಯ ಬ್ರಾಂಡ್‌ಗಳಾಗಿ ಟಾಟಾ ಮೋಟಾರ್ಸ್ ಹಾಗೂ ಮಹೀಂದ್ರಾ ಕಂಪನಿಗಳು ಗುರ್ತಿಸಿಕೊಂಡಿವೆ. ಇವುಗಳಿಗೆ ಪೈಪೋಟಿ ನೀಡಲು ಇತ್ತೀಚೆಗೆ ಎಲ್ಲಾ ಬ್ರಾಂಡ್‌ಗಳು ತಮ್ಮ ನಿರ್ಮಾಣ ಗುಣಮಟ್ಟವನ್ನು ಸುಧಾರಿಸಿವೆ. ಪ್ರಸ್ತುತ ಭಾರತದಲ್ಲಿ ನಮಗೆ ಖರೀದಿಗೆ ಲಭ್ಯವಿರುವ ಹಾಗೂ ಭಾರತ್ NCAP ಇಂದ 5-ಸ್ಟಾರ್ ರೇಟಿಂಗ್ ಗಳಿಸಿದ ಅತ್ಯಂತ ಸುರಕ್ಷಿತ ಕಾರು (Safest cars) ಗಳನ್ನು ಇಲ್ಲಿ ಪಟ್ಟಿ ಮಾಡಲಾಗಿದೆ.
ಟಾಟಾ ನೆಕ್ಸಾನ್ ಇವಿ: ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಸಂಸ್ಥೆ ಭಾರತ್ ಎನ್‌ಸಿಎಪಿ (Bharat NCAP) ನೆಕ್ಸಾನ್ ಇವಿ ಕಾರನ್ನು ಅತ್ಯಂತ ಸುರಕ್ಷಿತ ಕಾರೆಂದು ನಿರ್ಣಯಿಸಿದೆ. ಈ ಕಾರು ವಯಸ್ಕರ ರಕ್ಷಣೆ ವಿಭಾಗದಲ್ಲಿ (Adult Occupant Protection) 32ಕ್ಕೆ 29.86 ಅಂಕಗಳನ್ನು ಗಳಿಸಿದೆ. ಅದೇ ರೀತಿಯಲ್ಲಿ ಮಕ್ಕಳ ರಕ್ಷಣೆ ವಿಭಾಗದಲ್ಲಿ (Child Occupant Protection) 49ಕ್ಕೆ 44.95 ಅಂಕಗಳನ್ನು ಗಳಿಸಿದೆ.

ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನಲ್ಲಿ ಸುರಕ್ಷತೆಯ ದೃಷ್ಟಿಯಿಂದ 6 - ಏರ್‌ಬ್ಯಾಗ್‌ಗಳು, ಐಎಸ್ಒಎಫ್ಐಎಕ್ಸ್ ಚೈಲ್ಡ್ ಸೀಟ್ ಆಂಕಾರೇಜ್‌ಗಳು, ಆಲ್ - ವೀಲ್ ಡಿಸ್ಕ್ ಬ್ರೇಕ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ಪಾಕಿಂಗ್ ಸೆನ್ಸರ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಟಾಟಾ ನೆಕ್ಸಾನ್ ಇವಿ ಬಜೆಟ್ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಇದರ ಬೇಸ್ ವೇರಿಯೆಂಟ್ ಬೆಲೆಯು ರೂ.12.49 ಲಕ್ಷ ಹಾಗೂ ಗರಿಷ್ಠ ರೂ.17.19 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಈ ಕಾರಿಗೆ ಎಂಜಿ ವಿಂಡ್ಸರ್ ಇವಿ (MG Windsor EV) ನೇರವಾದ ಪ್ರತಿಸ್ಪರ್ಧಿಯಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.

ಕಿಯಾ ಸೈರಸ್: ಇತ್ತೀಚೆಗೆ ಬಿಡುಗಡೆಯಾಗಿ ಉತ್ತಮ ಗ್ರಾಹಕ ಪ್ರತಿಕ್ರಿಯೆ ಪಡೆದುಕೊಂಡಿರುವ ಕಿಯಾ ಸೈರಸ್ (Kia Syros) ಎಸ್‌ಯುವಿ, ಭಾರತ್ ಎನ್‌ಸಿಎಪಿ ನಡೆಸಿದ ಸುರಕ್ಷತಾ ಪರೀಕ್ಷೆಯಲ್ಲಿ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದುಕೊಂಡಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 30.21 ಅಂಕಗಳನ್ನು ಗಳಿಸಿದೆ. ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 44.42 ಅಂಕಗಳನ್ನು ಪಡೆದಿದೆ.
ಕಿಯಾ ಸೈರಸ್ ಎಸ್‌ಯುವಿಯ ಸುರಕ್ಷತೆಗಾಗಿ ಕಾರಿನಲ್ಲಿ 6-ಏರ್‌ಬ್ಯಾಗ್‌ಗಳು, ಹೆಚ್ಎಸ್ಎ (ಹಿಲ್ ಸ್ಟಾರ್ಟ್ ಅಸಿಸ್ಟ್), ವಿಎಸ್ಎಂ (ವೆಹಿಕಲ್ ಸ್ಟೆಬಿಲಿಟಿ ಮ್ಯಾನೇಜ್‌ಮೆಂಟ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಆಟೋ ಹೋಲ್ಡ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಹೆಚ್‌ಟಿಕೆ, ಹೆಚ್‌ಟಿಕೆ (ಒ), ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್ ಮತ್ತು ಹೆಚ್‌ಟಿಎಕ್ಸ್ ಪ್ಲಸ್ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಪಡೆದಿದೆ. ಕಿಯಾ ಸೈರಸ್ ಕಾರು, ರೂ.8.99 ಲಕ್ಷದಿಂದ ಆರಂಭವಾಗಿ ರೂ.17.80 ಲಕ್ಷ ಎಕ್ಸ್ - ಶೋರೂಂ ಬೆಲೆಯನ್ನು ಹೊಂದಿದೆ. ಸ್ಪಾರ್ಕ್ಲಿಂಗ್ ಸಿಲ್ವರ್, ಗ್ರಾವಿಟಿ ಗ್ರೇ, ಇಂಪೀರಿಯಲ್ ಬ್ಲೂ, ಇಂಟೆನ್ಸ್ ರೆಡ್ & ಪ್ಯೂಟರ್ ಆಲಿವ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ.
ಸ್ಕೋಡಾ ಕೈಲಾಕ್: ಸ್ಕೋಡಾ ಕೈಲಾಕ್ (Skoda Kylaq) ಎಸ್‌ಯುವಿ, ಭಾರತ್ ಎನ್‌ಸಿಎಪಿ ನಡೆಸಿದ ಸುರಕ್ಷತಾ ಪರೀಕ್ಷೆಯಲ್ಲಿ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ತನ್ನದಾಗಿಸಿಕೊಂಡಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 30.88 ಅಂಕಗಳನ್ನು ಗಳಿಸಿದೆ. ಅದೇ ರೀತಿಯಲ್ಲಿ ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 45 ಅಂಕಗಳನ್ನು ಪಡೆದಿದೆ.
ಹೊಸ ಸ್ಕೋಡಾ ಕೈಲಾಕ್ ಎಸ್‌ಯುವಿ ರೂ.7.89 ಲಕ್ಷದಿಂದ ರೂ.14.40 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. ಬ್ರಿಲಿಯಂಟ್ ಸಿಲ್ವರ್, ಲಾವಾ ಬ್ಲೂ, ಆಲಿವ್ ಗೋಲ್ಡ್, ಕಾರ್ಬನ್ ಸ್ಟೀಲ್ & ಟೊರ್ನಾಡೊ ರೆಡ್ ಸೇರಿದಂತೆ ಕ್ಲಾಸಿಕ್, ಹಲವು ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಸಿಗುತ್ತದೆ. ಸಿಗ್ನೇಚರ್ ಹಾಗೂ ಪ್ರೆಸ್ಟೀಜ್ ಒಳಗೊಂಡಂತೆ ವಿವಿಧ ವೇರಿಯೆಂಟ್ ಆಯ್ಕೆಯನ್ನು ಹೊಂದಿದೆ.
ಸ್ಕೋಡಾ ಕೈಲಾಕ್ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು 360-ಡಿಗ್ರಿ ಕ್ಯಾಮೆರಾ ಸೇರಿದಂತೆ ಸಾಕಷ್ಟು ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಮಹೀಂದ್ರಾ ಬಿಇ 6: ಮಹೀಂದ್ರಾ ಬಿಇ 6 (Mahindra BE 6) ಎಲೆಕ್ಟ್ರಿಕ್ ಎಸ್‌ಯುವಿ, ಭಾರತ್ ಎನ್‌ಸಿಎಪಿ ನಡೆಸಿದ ಸುರಕ್ಷತಾ ಪರೀಕ್ಷೆಯ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದುಕೊಂಡಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 31.97 ಅಂಕಗಳನ್ನು ಪಡೆದರೆ, ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 45 ಅಂಕಗಳನ್ನು ಗಳಿಸಿದೆ.
ಈ ಮಹೀಂದ್ರಾ ಬಿಇ 6 ಎಲೆಕ್ಟ್ರಿಕ್ ಕಾರು, ರೂ.18.90 ಲಕ್ಷದಿಂದ ರೂ.26.90 ಲಕ್ಷ (ಎಕ್ಸ್ ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ವಿನೂತನವಾದ ಹೆಡ್‌ಲ್ಯಾಂಪ್‌ಗಳು, 'ಜೆ' ಅಕ್ಷರದ ರೀತಿಯಲ್ಲಿರುವ ಡಿಆರ್‌ಎಲ್‌ಗಳು, 20-ಇಂಚಿನ ವೀಲ್‌ಗಳು, ಫ್ಲಶ್-ಡೋರ್ ಹ್ಯಾಂಡಲ್‌ಗಳನ್ನು ಪಡೆದಿದೆ. ಒಟ್ಟಾರೆ ಅಂತರಾಷ್ಟ್ರೀಯ ಇವಿ ಕಾರುಗಳಿಗೆ ಸೆಡ್ಡು ಹೊಡೆಯುವ ಡಿಸೈನ್ ಹೊಂದಿದೆ.
ಹೊಸ ಮಹೀಂದ್ರಾ ಬಿಇ 6 ಎಲೆಕ್ಟ್ರಿಕ್ ಎಸ್‌ಯುವಿಯಲ್ಲಿ ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು 360 ಡಿಗ್ರಿ ಕ್ಯಾಮೆರಾದಂತಹ ವಿವಿಧ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಮಹೀಂದ್ರಾ ಎಕ್ಸ್ ಇವಿ 9ಇ: ಮಹೀಂದ್ರಾ ಎಕ್ಸ್ ಇವಿ 9ಇ ಕಾರನ್ನು ಭಾರತ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್ ಮಾಡಿದ್ದು, ವಯಸ್ಕ ಮತ್ತು ಮಕ್ಕಳ ಪ್ರಯಾಣಿಕರ ರಕ್ಷಣೆಯಲ್ಲಿ ಪೂರ್ಣ 5-ಸ್ಟಾರ್ ಸುರಕ್ಷತಾ ರೇಟಿಂಗ್ ಗಳಿಸಿದೆ. ವಯಸ್ಕರ ರಕ್ಷಣೆಯಲ್ಲಿ 32 ರಲ್ಲಿ 32 ಅಂಕಗಳನ್ನು ಗಳಿಸಿದರೆ, ಮಕ್ಕಳ ರಕ್ಷಣೆಯಲ್ಲಿ 49 ಕ್ಕೆ 45 ಅಂಕಗಳನ್ನು ಗಳಿಸಿದೆ.
ಮಹೀಂದ್ರಾ ಎಕ್ಸ್ ಇವಿ 7ಇ ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ದರದಂತೆ ರೂ.21.90 ಲಕ್ಷದಿಂದ ರೂ.30.50 ಲಕ್ಷಗಳಾಗಿದೆ. ಇದು ಟಾಟಾ ಸಫಾರಿ ಇವಿ ಮತ್ತು ಟಾಟಾ ಹ್ಯಾರಿಯರ್ ಇವಿಗೆ ನೇರ ಪ್ರತಿಸ್ಪರ್ಧಿಯಾಗಲಿದೆ. ಹಾಗೆಯೇ ಇದನ್ನು ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ಮತ್ತು ಮಹೀಂದ್ರಾ ಬಿಇ 6 ಗೆ ಪ್ರೀಮಿಯಂ ಪರ್ಯಾಯವೆಂದು ಪರಿಗಣಿಸಬಹುದು.
ಈ ಕಾರಿನಲ್ಲಿ 7 ಏರ್ ಬ್ಯಾಗ್ ಗಳು, ಲೇನ್-ಕೀಪ್ ಅಸಿಸ್ಟ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್ ಮತ್ತು ಫಾರ್ವರ್ಡ್ ಕೊಲಿಷನ್ ವಾರ್ನಿಂಗ್, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ (ಇಎಸ್ ಪಿ), 360 ಡಿಗ್ರಿ ಕ್ಯಾಮೆರಾ, ಲೆವೆಲ್ 2 ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್ (ಎಡಿಎಎಸ್) ತಂತ್ರಜ್ಞಾನದೊಂದಿಗೆ ಬರುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications