Maruti Suzuki: ಇನ್ನು ಯಾರು ಮೂಗು ಮುರಿಯುವಂತಿಲ್ಲ.. ಅತಿ ಸುರಕ್ಷಿತ ಮಾರುತಿ ಕಾರುಗಳಿವು, ಬೆಲೆಯೂ ಕಮ್ಮಿ!

ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಸಂಸ್ಥೆಯಾಗಿ ಭಾರತ್ ಎನ್‌ಸಿಎಪಿ (Bharat NCAP) ಗುರುತಿಸಿಕೊಂಡಿದೆ. ಮಾರುತಿ ಸುಜುಕಿ ಕಂಪನಿಗೆ ಸೇರಿದ ವಿಕ್ಟೋರಿಸ್, ಇನ್ವಿಕ್ಟೊ, ಡಿಜೈರ್ ಹಾಗೂ ಬಲೆನೊವನ್ನು ಅತ್ಯಂತ ಸುರಕ್ಷಿತ ಕಾರುಗಳೆಂದು ನಿರ್ಣಯಿಸಿದೆ. ಇವುಗಳು ಹೆಚ್ಚಿನ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಗ್ರಾಹಕರ ಲಭ್ಯವಿವೆ. ಬನ್ನಿ.. ಈ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris):

ಇದೊಂದು ಎಸ್‌ಯುವಿಯಾಗಿದೆ. ಭಾರತ್ ಎನ್‌ಸಿಎಪಿಯು 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ನೀಡಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ (Adult Occupant Protection) 32ಕ್ಕೆ 31.66 ಅಂಕಗಳನ್ನು ಪಡೆದಿದೆ. ಅದೇ ರೀತಿಯಲ್ಲಿ ಮಕ್ಕಳ ರಕ್ಷಣೆ ವಿಭಾಗದಲ್ಲಿ (Child Occupant Protection) 49ಕ್ಕೆ 43 ಅಂಕಗಳನ್ನು ಗಳಿಸಿದೆ.

Bharat NCAP Rated Maruti Suzuki Safety Cars Victoris Invicto Dzire And Baleno

ನೂತನ ವಿಕ್ಟೋರಿಸ್ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ. ರೂ.10.50 ಲಕ್ಷದಿಂದ ರೂ.20 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ.

ಮಾರುತಿ ಸುಜುಕಿ ಇನ್ವಿಕ್ಟೋ (Maruti Suzuki Invicto):

ಈ ಎಂಪಿವಿಯು ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ತನ್ನದಾಗಿಸಿಕೊಂಡಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 30.43 ಅಂಕಗಳನ್ನು ಗಳಿಸಿದೆ. ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 45 ಅಂಕಗಳನ್ನು ಪಡೆದಿದೆ. ಇದು 'ಟೊಯೊಟಾ ಇನ್ನೋವಾ ಹೈಕ್ರಾಸ್' ಎಂಪಿವಿಯನ್ನು ಆಧರಿಸಿದೆ.

Bharat NCAP Rated Maruti Suzuki Safety Cars Victoris Invicto Dzire And Baleno

ಹೊಸ ಇನ್ವಿಕ್ಟೋ ಅತಿ ಹೆಚ್ಚಿನ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360 ಡಿಗ್ರಿ ಕ್ಯಾಮೆರಾ, ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ. ರೂ.24.97 ಲಕ್ಷದಿಂದ ರೂ.28.61 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ.

ಮಾರುತಿ ಸುಜುಕಿ ಡಿಜೈರ್ (Maruti Suzuki Dzire):

ಇದು ಸೆಡಾನ್ ಆಗಿದ್ದು, ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 29.46 ಅಂಕಗಳನ್ನು ಪಡೆದಿದೆ. ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 41.57 ಅಂಕಗಳನ್ನು ಗಳಿಸಿದೆ. ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವ ಕಾರಾಗಿಯೂ ಹೊರಹೊಮ್ಮಿದೆ.

Bharat NCAP Rated Maruti Suzuki Safety Cars Victoris Invicto Dzire And Baleno

ಹೊಸ ಮಾರುತಿ ಡಿಜೈರ್ ಗರಿಷ್ಠ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ. 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), 3 ಪಾಯಿಂಟ್ ಸೀಟ್ ಬೆಲ್ಟ್‌ಗಳು ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ. ರೂ.6.26 ಲಕ್ಷದಿಂದ ರೂ.9.31 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ.

ಮಾರುತಿ ಸುಜುಕಿ ಬಲೆನೊ (Maruti Suzuki Baleno):

ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಸುರಕ್ಷತೆಯಿಂದಲೂ ಮನೆ ಮಾತಾಗಿದ್ದು, ಭಾರತ್ ಎನ್‌ಸಿಎಪಿಯಿಂದ 4-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ತನ್ನದಾಗಿಸಿಕೊಂಡಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 26.52 ಅಂಕಗಳನ್ನು ಪಡೆದಿದೆ. ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 34.81 ಅಂಕಗಳನ್ನು ಗಳಿಸಿದೆ.

Bharat NCAP Rated Maruti Suzuki Safety Cars Victoris Invicto Dzire And Baleno

ನೂತನ ಬಲೆನೊ ಸಹ ಅತಿ ಹೆಚ್ಚಿನ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ. 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಹಿಲ್ ಹೋಲ್ಡ್ ಅಸಿಸ್ಟ್, ರೇರ್ ಪಾರ್ಕಿಂಗ್ ಸೇನಾರ್ಸ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ. ರೂ.5.99 ಲಕ್ಷದಿಂದ ರೂ.9.10 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ.

Article Published On: Sunday, September 28, 2025, 23:03 [IST]
English summary
Bharat ncap rated maruti suzuki safety cars victoris invicto dzire and baleno
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+