ಸೇಫ್ಟಿಯಲ್ಲಿ ಕಿಂಗ್.. ಬೆಲೆಯೂ ತುಂಬಾ ಅಗ್ಗ, ಈ ಕಾರುಗಳಿಗೆ ಜನ ಕ್ಯೂ ನಿಲ್ಲುವರು!

ಹೊಸ ಕಾರು ಖರೀದಿ ಮಾಡುವವರೂ ಸುರಕ್ಷತೆಗೆ ಆದ್ಯತೆ ನೀಡುತ್ತಾರೆ. ಆದರೆ, ಯಾವ ಕಾರನ್ನು ಕೊಂಡುಕೊಳ್ಳಬೇಕು ಎಂಬುದರ ಕುರಿತಂತೆ ಹಲವರಿಗೆ ಗೊಂದಲವಿರುತ್ತಾರೆ. ಅಂತಹವರಿಗೆ ಮಾರುತಿ ಸುಜುಕಿ ಡಿಜೈರ್, ಮಾರುತಿ ಸುಜುಕಿ ವಿಕ್ಟೋರಿಸ್, ಕಿಯಾ ಸೈರಸ್ ಹಾಗೂ ಸ್ಕೋಡಾ ಕೈಲಾಕ್ ಕಾರುಗಳು ಅತ್ಯುತ್ತಮವಾದ ಆಯ್ಕೆಯಾಗಲಿದೆ. ಇವುಗಳನ್ನು ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಸಂಸ್ಥೆ ಭಾರತ್ ಎನ್‌ಸಿಎಪಿ (Bharat NCAP) ಉತ್ತಮ ಸುರಕ್ಷಿತ ಕಾರುಗಳೆಂದು ತೀರ್ಮಾನ ಮಾಡಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಮಾರುತಿ ಸುಜುಕಿ ಡಿಜೈರ್ (Maruti Suzuki Dzire):

ಇದೊಂದು ಸೆಡಾನ್ ಆಗಿದ್ದು, ಭಾರತ್ ಎನ್‌ಸಿಎಪಿ ಪರೀಕ್ಷೆಯಲ್ಲಿ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು 3 ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಪಡೆದಿದೆ.

Bharat NCAP Safety Cars Maruti Suzuki Dzire Maruti Suzuki Victoris Kia Syros And Skoda Kylaq

ಈ ಕಾರು 6.84 ಲಕ್ಷದಿಂದ ರೂ.10.19 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 24 ರಿಂದ 33 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris):

ಇದು ಎಸ್‌ಯುವಿಯಾಗಿದೆ. ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ.ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

Bharat NCAP Safety Cars Maruti Suzuki Dzire Maruti Suzuki Victoris Kia Syros And Skoda Kylaq

ನೂತನ ವಿಕ್ಟೋರಿಸ್ ರೂ.9.70 ಲಕ್ಷದಿಂದ ರೂ.15 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿರುವ ನಿರೀಕ್ಷೆಯಿದೆ. 1.5-ಲೀಟರ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಹಾಗೂ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 19 ರಿಂದ 28.65 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. 10.1 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಕಿಯಾ ಸೈರಸ್ (Kia Syros)

ಈ ಎಸ್‌ಯುವಿಯು ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಹೊಂದುವಲ್ಲಿ ಯಶಸ್ವಿಯಾಗಿದೆ. ಪ್ರಯಾಣಿಕರ ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ವಿಎಸ್ಎಂ (ವೆಹಿಕಲ್ ಸ್ಟೆಬಿಲಿಟಿ ಮ್ಯಾನೇಜ್‌ಮೆಂಟ್), ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, 3 ಪಾಯಿಂಟ್ ಸೀಟ್‌ಬೆಲ್ಟ್‌ಗಳು ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

Bharat NCAP Safety Cars Maruti Suzuki Dzire Maruti Suzuki Victoris Kia Syros And Skoda Kylaq

ಹೊಸ ಸೈರಸ್ ರೂ.9.50 ಲಕ್ಷದಿಂದ ರೂ.17.80 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ ಆಯ್ಕೆಯನ್ನು ಒಳಗೊಂಡಿದೆ. 17.65 ರಿಂದ 20.75 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಹೊಂದಿದೆ. ಇನ್ಫೋಟೈನ್‌ಮೆಂಟ್‌ ಸಿಸ್ಟಮ್ & ಡ್ರೈವರ್ಸ್ ಡಿಸ್‌ಪ್ಲೇಗಾಗಿ ಡುಯಲ್ ಸ್ಕ್ರೀನ್‌ ಸೆಟಪ್ ಹಾಗೂ 8 ಸ್ಪೀಕರ್ ಹರ್ಮನ್ ಕಾರ್ಡನ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಸ್ಕೋಡಾ ಕೈಲಾಕ್ (Skoda Kylaq):

ಇದು ಎಸ್‌ಯುವಿಯಾಗಿದೆ. ಭಾರತ್ ಎನ್‌ಸಿಎಪಿ ನಡೆಸಿದ ಸುರಕ್ಷತಾ ಪರೀಕ್ಷೆಯಲ್ಲಿ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. ಪ್ರಯಾಣಿಕರಿಗೆ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

Bharat NCAP Safety Cars Maruti Suzuki Dzire Maruti Suzuki Victoris Kia Syros And Skoda Kylaq

ಈ ಕೈಲಾಕ್ ಕಾರು ರೂ.8.25 ಲಕ್ಷದಿಂದ ರೂ.13.99 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.0-ಲೀಟರ್ ಪೆಟ್ರೋಲ್ ಎಂಜಿನ್‌ ಆಯ್ಕೆಯನ್ನು ಪಡೆದಿದೆ. 15 ರಿಂದ 18 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. 10 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಹಾಗೂ ಸಿಂಗಲ್-ಪೇನ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

Article Published On: Sunday, September 14, 2025, 22:09 [IST]
English summary
Bharat ncap safety cars maruti suzuki dzire maruti suzuki victoris kia syros and skoda kylaq
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+