7-ಸೀಟರ್.. ಅತಿ ಶೀಘ್ರದಲ್ಲೇ ದೊಡ್ಡ ಗಾತ್ರದ ಹೊಸ ಮಾರುತಿ ಎರ್ಟಿಗಾ ಎಂಪಿವಿ ಬಿಡುಗಡೆ.. ರೂ.9 ಲಕ್ಷ ಬೆಲೆ?

ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga) ವಿಶ್ವಾಸಾರ್ಹ ಎಂಪಿವಿ ಎಂದೇ ಹೆಸರುವಾಸಿಯಾಗಿದೆ. ಇದು ಅಚ್ಚುಕಟ್ಟಾದ ವಿನ್ಯಾಸ ಹಾಗೂ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಪ್ರತಿ ತಿಂಗಳು ಸರಾಸರಿ 15,000 ಯುನಿಟ್ 'ಎರ್ಟಿಗಾ' ಕಾರುಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗುತ್ತಿದೆ. ಈ ಎಂಪಿವಿಯನ್ನು ಗ್ರಾಹಕರಿಗೆ ಮತ್ತಷ್ಟು ಹತ್ತಿರವಾಗಿಸಲು ಕಂಪನಿಯು ಮುಂದಾಗಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಅತಿ ಶೀಘ್ರದಲ್ಲೇ ನವೀಕೃತ ರೂಪದಲ್ಲಿ 'ಮಾರುತಿ ಸುಜುಕಿ ಎರ್ಟಿಗಾ' ಕಾರು ಬಿಡುಗಡೆಯಾಗಲಿದ್ದು, ಗಾತ್ರದಲ್ಲಿ ಸ್ವಲ್ಪ ಮಟ್ಟಿಗೆ ದೊಡ್ಡದಾಗಿರಲಿದೆ. ಇದರ ಉದ್ದವನ್ನು 4.39 ಮೀಟರ್‌ಗಳಿಂದ 4.43 ಮೀಟರ್‌ಗಳಿಗೆ ಹೆಚ್ಚಿಸಲಾಗುತ್ತದೆ. ಇದರಿಂದ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ ಬೂಟ್ ಸ್ಪೇಸ್‌ ತುಂಬಾ ವಿಶಾಲವಾಗಿರಲಿದೆ ಎಂದು ವರದಿಯಾಗಿದೆ. ಆದರೆ, 2.74 ಮೀಟರ್‌ನ ವೀಲ್‌ಬೇಸ್‌ನಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎನ್ನಲಾಗಿದೆ.

Big Size Maruti Suzuki Ertiga Mpv Launch Soon Details

ಈಗಾಗಲೇ ವಾಣಿಜ್ಯೋದ್ದೇಶಕ್ಕೆ ಬಳಕೆ ಮಾಡುವ ಎರ್ಟಿಗಾದ ಟೂರ್ ಎಂ ಮಾಡೆಲ್, ಹೊಸ ಅಳತೆಯಲ್ಲಿಯೇ ಗ್ರಾಹಕರ ಖರೀದಿಗೆ ಲಭ್ಯವಿದೆ. ನೂತನ ಎರ್ಟಿಗಾ ಎಂಪಿವಿಯು ಸುರಕ್ಷತೆಯ ದೃಷ್ಟಿಯಿಂದ ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಆಯ್ಕೆಯನ್ನು ಪಡೆದಿರುವ ನಿರೀಕ್ಷೆಯಿದೆ. ಹಾಗೆಯೇ ಎರಡನೇ ಸಾಲಿನ ಆಸನದಲ್ಲಿ ಕುಳಿತುಕೊಳ್ಳುವ ಪ್ರಯಾಣಿಕರಿಗಾಗಿ ಎಸಿ ವೆಂಟ್‌ಗಳನ್ನು ಹೊಂದಬಹುದು ಎಂದು ಹೇಳಲಾಗಿದೆ.

ಹೊಸ ಮಾರುತಿ ಎರ್ಟಿಗಾ ಎಂಪಿವಿ ದರದಲ್ಲೂ ಯಾವುದೇ ವ್ಯತ್ಯಾಸವಿರುವುದಿಲ್ಲ. ಇದು ಪ್ರಸ್ತುತ ಮಾಡೆಲ್‌ನಂತೆ ಕನಿಷ್ಠ ರೂ. 9.11 ಲಕ್ಷ ಹಾಗೂ ಗರಿಷ್ಠ ರೂ.13.40 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರುವ ಸಾಧ್ಯತೆಯಿದೆ. ಎಲ್ಎಕ್ಸ್ಐ, ವಿಎಕ್ಸ್ಐ ಹಾಗೂ ಝಡ್ಎಕ್ಸ್ಐ (ಒ) ಸೇರಿದಂತೆ ವಿವಿಧ (ವೇರಿಯೆಂಟ್) ರೂಪಾಂತರಗಳ ಆಯ್ಕೆಯಲ್ಲಿಯೂ ಲಭ್ಯವಾಗಲಿದೆ.

Big Size Maruti Suzuki Ertiga Mpv Launch Soon Details

ಈ ಕಾರಿನ ವಿನ್ಯಾಸವು ಬದಲಾಗುವುದಿಲ್ಲ ಎನ್ನಲಾಗಿದೆ. ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಫ್ಲೋಟಿಂಗ್-ಟೈಪ್ ರೂಫ್ ಡಿಸೈನ್ ಹಾಗೂ 3ಡಿ ಒರಿಗಮಿ ಸ್ಟೈಲ್ ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಒಳಗೊಂಡಿಯಲಿದೆ. ಪರ್ಲ್ ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮೆಟಾಲಿಕ್ ಆಬರ್ನ್ ರೆಡ್, ಪರ್ಲ್ ಮೆಟಾಲಿಕ್ ಆಕ್ಸ್‌ಫರ್ಡ್ ಬ್ಲೂ ಮತ್ತು ಪರ್ಲ್ ಮೆಟಾಲಿಕ್ ಡಿಗ್ನಿಟಿ ಬ್ರೌನ್ ಎಂಬ ಬಣ್ಣಗಳೊಂದಿಗೂ ಸಿಗಲಿದೆ.

ನೂತನ ಎರ್ಟಿಗಾದ ಪವರ್‌ಟ್ರೇನ್‌ನಲ್ಲೂ ಮಾಪಾಡುಗಳಿರುವುದಿಲ್ಲ ಎನ್ನಲಾಗಿದೆ. ಇದರ 1.5-ಲೀಟರ್ ಪೆಟ್ರೋಲ್ ಎಂಜಿನ್, 102 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 139 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸಲಿದೆ. 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿರಲಿದೆ.

ಇನ್ನೊಂದು 1.5-ಲೀಟರ್ ಪೆಟ್ರೋಲ್/ಸಿಎನ್‌ಜಿ ಎಂಜಿನ್‌, 87 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 121 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕಲಿದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿರಲಿದೆ. ಈ ಕಾರು 20 ರಿಂದ 26 ಕಿ.ಮೀವರೆಗೂ ಮೈಲೇಜ್ ಕೊಡಬಲ್ಲದು.

ಹೊಸ ಎರ್ಟಿಗಾ ಎಂಪಿವಿಯು ಸಹ 7 ಆಸನಗಳನ್ನು ಹೊಂದಿರಲಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. 7-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಪ್ಯಾಡಲ್ ಶಿಫ್ಟರ್ಸ್, ಕೀಲೆಸ್ ಎಂಟ್ರಿ, ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ಆಟೋ ಎಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದುಕೊಂಡಿರಲಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ರಕ್ಷಣೆ ಒದಗಿಸಲಿದೆ. 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ರೇರ್ ಪಾರ್ಕಿಂಗ್ ಸೇನಾರ್ಸ್ ಹಾಗೂ ಹಿಲ್ ಹೋಲ್ಡ್ ಅಸಿಸ್ಟ್‌ನ್ನು ಕೂಡ ಒಳಗೊಂಡಿರಲಿದೆ ಎನ್ನಲಾಗಿದೆ. ಇದಕ್ಕೆ ಟೊಯೊಟಾ ರೂಮಿಯನ್ ಹಾಗೂ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಕಾರುಗಳು ಪ್ರಬಲವಾದ ಪ್ರತಿ ಸ್ಪರ್ಧಿಯಾಗಲಿವೆ.

More from DriveSpark

Article Published On: Saturday, August 23, 2025, 8:55 [IST]
English summary
Big size maruti suzuki ertiga mpv launch soon details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+