Budget 2025: ಗುಡ್‌ನ್ಯೂಸ್‌.. ಹೊಸ ಎಲೆಕ್ಟ್ರಿಕ್ ವಾಹನಗಳ ಬೆಲೆ ಇಳಿಕೆಯಾಗುವ ಸನಿಹಕ್ಕೆ!

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು, 2025-26ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್‌ನ್ನು ಯಶಸ್ವಿಯಾಗಿ ಮಂಡಿಸಿದ್ದಾರೆ. ಇದರೊಂದಿಗೆ 8ನೇ ಬಾರಿಗೆ ಬಜೆಟ್ ಮಂಡಿಸಿದ ದೇಶದ ಮೊಟ್ಟ ಮೊದಲ 'ಹಣಕಾಸು ಸಚಿವೆ' ಎಂಬ ಖ್ಯಾತಿಗೂ ಅವರು ಪಾತ್ರರಾಗಲಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮವನ್ನು ಬೆಂಬಲಿಸಬಲ್ಲ ಒಂದಷ್ಟು ಕ್ರಮಗಳ ಜಾರಿಗೂ ಕೇಂದ್ರ ಸರ್ಕಾರ ಮುಂದಾಗಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಅತಿ ಶೀಘ್ರದಲ್ಲಿಯೇ ಎಲೆಕ್ಟ್ರಿಕ್ ವಾಹನಗಳ ಬೆಲೆಯೂ ಕೂಡ ಇಳಿಕೆಯಾಗುವ ನಿರೀಕ್ಷೆಯಿದೆ.

ಕೇಂದ್ರ ಸರ್ಕಾರ, ಪರಿಸರ ಮಾಲಿನ್ಯವನ್ನು ಸಹಬದಿಗೆ ತರಲು ಮುಂದಾಗಿದೆ. ಈ ನಿಟ್ಟಿನಲ್ಲಿ ಮುಂದಿನ ಐದು ವರ್ಷದೊಳಗೆ (2030) ದೇಶದ ಒಟ್ಟು ವಾಹನಗಳ ಮಾರಾಟದ ಪೈಕಿ, ಶೇ.30ರಷ್ಟು ಎಲೆಕ್ಟ್ರಿಕ್ ವಾಹನಗಳು (Electric Vehicle) ಇರಬೇಕೆಂದು ಬಯಸಿದೆ. ಸದ್ಯ ಬಜೆಟ್‌ನಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮ ಉತ್ತೇಜಿಸಲು ಹಲವು ಯೋಜನೆಗಳನ್ನು ಘೋಷಣೆ ಮಾಡಿದೆ.

Budget 2025 Cut Duty On Goods Used In Batteries amp amp Semiconductor Production Expected EVs Become Cheaper

ಕೋಬಾಲ್ಟ್, ಲಿಥಿಯಂ-ಐಯಾನ್ ಬ್ಯಾಟರಿ ಸ್ಕ್ರ್ಯಾಪ್, ಲೀಡ್ (ಸೀಸ), ಜಿಂಕ್ (ಸತು) ಮತ್ತು ಇತರೆ 12 ಪ್ರಮುಖ ಖನಿಜಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ತೆಗೆದುಹಾಕಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ ಭಾಷಣದಲ್ಲಿ ಹೇಳಿದ್ದಾರೆ. ಈ ಖನಿಜಗಳನ್ನು ಬ್ಯಾಟರಿಗಳು ಹಾಗೂ ಸೆಮಿಕಂಡಕ್ಟರ್ ಉತ್ಪಾದನೆಯಲ್ಲಿ ಪ್ರಮುಖವಾದ ಪಾತ್ರ ವಹಿಸುತ್ತವೆ.

ಇದೇ ಬ್ಯಾಟರಿಗಳು ಮತ್ತು ಸೆಮಿಕಂಡಕ್ಟರ್‌ಗಳನ್ನು ಎತ್ತೆಚ್ಚವಾಗಿ ಎಲೆಕ್ಟ್ರಿಕ್ ವಾಹನಗಳು ಹಾಗೂ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ತಯಾರಿಕೆಯಲ್ಲಿ ಬಳಕೆ ಮಾಡಲಾಗುತ್ತದೆ. ಕೇಂದ್ರ ಸರ್ಕಾರ ವಿವಿಧ ಖನಿಜಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ತೆಗೆದುಹಾಕಿಸುರುವುದರಿಂದ ಉತ್ಪಾದನಾ ವೆಚ್ಚಗಳು ಬಹುತೇಕ ಕಡಿಮೆಯಾಗಲಿದೆ. ಅದರ ನೇರ ಲಾಭವನ್ನು ಕಂಪನಿಗಳು ಗ್ರಾಹಕರ ಮೇಲೆ ವರ್ಗಾವಣೆ ಮಾಡಿದರೆ, ಎಲೆಕ್ಟ್ರಿಕ್ ವಾಹನಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದೆ.

Budget 2025 Cut Duty On Goods Used In Batteries amp amp Semiconductor Production Expected EVs Become Cheaper

ಕೇಂದ್ರ ಸರ್ಕಾರ 'ಮೇಕ್ ಇನ್ ಇಂಡಿಯಾ' ಯೋಜನೆಯನ್ನು ಉತ್ತೇಜಿಸಲು ಸಹ ಮುಂದಾಗಿದೆ. ಈ ಹಿನ್ನೆಲೆ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಅವರು, 'ನ್ಯಾಷನಲ್ ಮ್ಯಾನುಫ್ಯಾಕ್ಚರಿಂಗ್ ಮಿಷನ್' ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಇದರಡಿ ಸ್ಥಳೀಯವಾಗಿ ಎಲೆಕ್ಟ್ರೋಲೈಸರ್‌ಗಳು, ವಿಂಡ್ ಟರ್ಬೈನ್‌ಗಳು, ಹೈ-ವೋಲ್ಟೇಜ್ ಟ್ರಾನ್ಸ್‌ಮಿಷನ್ ಎಕ್ಯುಪ್ಮೆಂಟ್, ಸೋಲಾರ್ ಸೆಲ್‌ಗಳು ಹಾಗೂ ಇವಿ (ಎಲೆಕ್ಟ್ರಿಕ್ ವಾಹನ) ಬ್ಯಾಟರಿ ತಯಾರಿಕೆಯನ್ನು ಉತ್ತೇಜಿಸಲಾಗುತ್ತದೆ.

ಇದು ಮಾತ್ರವಲ್ಲದೆ, ವಿಮಾನಯಾನ ವಲಯಕ್ಕೂ ಕೇಂದ್ರ ಸರ್ಕಾರ ಹೆಚ್ಚಿನ ಒತ್ತು ನೀಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಮುಂದಿನ 10 ವರ್ಷದಲ್ಲಿ ದೇಶದಲ್ಲಿ 120 ಹೊಸ ವಿಮಾನ ನಿಲ್ದಾಣಗಳನ್ನು ಸ್ಥಾಪಿಸುವುದಾಗಿ ಘೋಷಣೆ ಮಾಡಿದ್ದಾರೆ. ನೂತನ ವಿಮಾನ ನಿಲ್ದಾಣಗಳಿಂದ ಹೆಚ್ಚುವರಿಯಾಗಿ 4 ಕೋಟಿ ಪ್ರಯಾಣಿಕರನ್ನು ನಿರ್ವಹಿಸಲು ಸಾಧ್ಯವಾಗಲಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, February 1, 2025, 14:19 [IST]
English summary
Budget 2025 cut duty on goods used in batteries semiconductor production expected evs become cheaper
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+