Budget 2025: ಬೆಟ್ಟದಷ್ಟು ನಿರೀಕ್ಷೆ.. ನಾಳೆ ಹೊಸ ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಸಿಹಿ ಸುದ್ದಿ ಸಿಗುತ್ತಾ?
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನೇತೃತ್ವದಲ್ಲಿ ಎನ್ಡಿಎ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದೆ. ನಾಳೆ (ಫೆ.1) ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು, 2025 - 26ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್ (Budget - 2025) ಮಂಡನೆ ಮಾಡಲಿದ್ದಾರೆ. ಇದರೊಂದಿಗೆ ಎಂಟನೇ ಬಾರಿಗೆ ಬಜೆಟ್ ಮಂಡಿಸಿದ ದೇಶದ ಮೊದಲ 'ಹಣಕಾಸು ಸಚಿವೆ' ಎಂಬ ಹಿರಿಮೆಗೂ ಪಾತ್ರರಾಗಲಿದ್ದಾರೆ. ಈ ಬಜೆಟ್ ಮೇಲೆ ಸಾಮಾನ್ಯ ಜನರು ಕೂಡ ಬೆಟ್ಟದಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಅದರಲ್ಲೂ ಹೊಸ ಎಲೆಕ್ಟ್ರಿಕ್ ವಾಹನ ಖರೀದಿ ಮಾಡುವವರೂ ತೀವ್ರ ಕುತೂಹಲದಿಂದ ಎದುರು ನೋಡುತ್ತಿದ್ದಾರೆ.
ಕೇಂದ್ರ ಸರ್ಕಾರ, ಪರಿಸರ ಮಾಲಿನ್ಯವನ್ನು ಆದಷ್ಟು ಕಡಿಮೆಗೊಳಿಸಲು 2030ರ ವೇಳೆಗೆ ದೇಶದ ಒಟ್ಟು ವಾಹನಗಳ ಮಾರಾಟದಲ್ಲಿ ಸರಿ ಸುಮಾರು 30% ಎಲೆಕ್ಟ್ರಿಕ್ ವಾಹನಗಳು (Electric Vehicle) ಇರಬೇಕು ಎಂದು ಆಶಿಸಿದೆ. ಈ ಹಿನ್ನೆಲೆ, ಈ ಬಾರಿಯ ಬಜೆಟ್ನಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮವನ್ನು ಉತ್ತೀಜಿಸಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭರಪೂರ ಕೊಡುಗೆ ನೀಡಬಹುದು ಎಂದು ಪರಿಣಿತರು ವಿಶ್ಲೇಷಿಸಿದ್ದಾರೆ.

ಎಲೆಕ್ಟ್ರಿಕ್ ವಾಹನ ತಯಾರಿಕೆಯಲ್ಲಿ ಬ್ಯಾಟರಿಗಳು ಬಹುಮುಖ್ಯವಾದ ಪಾತ್ರವನ್ನು ವಹಿಸುತ್ತವೆ. ಬಹುತೇಕ 'ಲಿಥಿಯಂ ಅಯಾನ್' ಬ್ಯಾಟರಿಗಳನ್ನು ವಿದೇಶದಿಂದ ಆಮದು ಮಾಡಿಕೊಳ್ಳಲಾಗುತ್ತದೆ. ಇದರಿಂದ ಎಲೆಕ್ಟ್ರಿಕ್ ವಾಹನಗಳ ಬೆಲೆಯೂ ಹೆಚ್ಚಿದೆ. ಅದೇ ಬ್ಯಾಟರಿಗಳನ್ನು ದೇಶೀಯವಾಗಿ ಉತ್ಪಾದನೆ ಮಾಡಿದರೆ, ಎಲೆಕ್ಟ್ರಿಕ್ ವಾಹನಗಳ ದರ ಕಡಿಮೆಯಾಗಿ, ಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ಇದನ್ನು ಬೆಂಬಸುವ ಯೋಜನೆಯನ್ನು ಬಜೆಟ್ನಲ್ಲಿ ಕೂಡ ಕೇಂದ್ರ ಸರ್ಕಾರ ಘೋಷಣೆ ಮಾಡುವ ಸಾಧ್ಯತೆಯಿದೆ.
ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೆ, ಚಾರ್ಜಿಂಗ್ ಸ್ಟೇಷನ್ಗಳ ಕೊರತೆ ಸಾಕಷ್ಟು ಇದ್ದು, ಹೊಸ ಚಾರ್ಜಿಂಗ್ ಸ್ಟೇಷನ್ಗಳ ಸ್ಥಾಪನೆಯತ್ತ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಡುವ ನಿರೀಕ್ಷೆಯಿದೆ. ಅಲ್ಲದೆ, ಎಲೆಕ್ಟ್ರಿಕ್ ವಾಹನಗಳ ಖರೀದಿಯನ್ನು ಉತ್ತೇಜಿಸಲು ಜಿಎಸ್ಟಿಯನ್ನು ಒಂದಷ್ಟು ಕಡಿತಗೊಳಿಸಬಹುದು ಎಂದು ಹೇಳಲಾಗಿದೆ.
ಇನ್ನು, ಪ್ರಪಂಚದಲ್ಲಿಯೇ ಭಾರತ ಅತಿದೊಡ್ಡ ವಾಹನ ಮಾರುಕಟ್ಟೆಯನ್ನು ಹೊಂದಿದ್ದು, 3ನೇ ಸ್ಥಾನದಲ್ಲಿದೆ. ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಚರರ್ಸ್ (SIAM) ಮಾಹಿತಿ ಪ್ರಕಾರ, 2024ರಲ್ಲಿ ದೇಶದಲ್ಲಿ ಬರೋಬ್ಬರಿ 2,54,98,763 ವಾಹನಗಳು (ಇಂಧನ & ಎಲೆಕ್ಟ್ರಿಕ್) ಮಾರಾಟಗೊಂಡಿದ್ದವು. ಅವುಗಳಲ್ಲಿ 42,74,793 ಯುನಿಟ್ ಪ್ರಯಾಣಿಕ ವಾಹನಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸಲಾಗಿತ್ತು.
ಡ್ರೈವ್ಸ್ಪಾರ್ಕ್ ಕನ್ನಡ ವೆಬ್ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications