BYD: ಚೀನಾದ ಅಗ್ಗದ ಎಲೆಕ್ಟ್ರಿಕ್ ಕಾರು ಭಾರತದಲ್ಲಿ ಬಿಡುಗಡೆಯಾಗಲಿದೆ.. ಬೆಲೆ ಇಷ್ಟೇನಾ, ನಿರೀಕ್ಷೆಗೂ ಮೀರಿದ ವೈಶಿಷ್ಟ್ಯಗಳು!

ಚೀನಾದ ಬಿವೈಡಿ (BYD) ಜನಪ್ರಿಯ ಎಲೆಕ್ಟ್ರಿಕ್ ಕಾರು ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ಜಾಗತಿಕವಾಗಿ ಎಲಾನ್ ಮಸ್ಕ್ ಒಡೆತನದ ಟೆಸ್ಲಾದೊಂದಿಗೆ ಸ್ಪರ್ದಿಸುತ್ತಿದೆ. ದೇಶೀಯವಾಗಿ ಇಮ್ಯಾಕ್ಸ್ 7, ಅಟ್ಟೊ 3, ಸೀಲ್ ಹಾಗೂ ಸೀಲಿಯನ್ ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಗ್ರಾಹಕರು ಕೂಡ ಇಷ್ಟುಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ಇದೇ ಬಿವೈಡಿ ಕಂಪನಿಯು ಭಾರತದ ಮಾರುಕಟ್ಟೆಯಲ್ಲಿ ಹೊಚ್ಚ ಹೊಸ ಕಾರೊಂದನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲು ತಯಾರಿ ಮಾಡಿಕೊಳ್ಳುತ್ತಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಎಲ್ಲವು ಅಂದುಕೊಂಡಂತೆ ನಡೆದರೆ, ನೂತನ ಬಿವೈಡಿ ಅಟ್ಟೊ 2 (BYD Atto 2) ಎಲೆಕ್ಟ್ರಿಕ್ ಎಸ್‌ಯುವಿಯು ಈ ವರ್ಷಾಂತ್ಯದೊಳಗೆ ಮಾರಾಟಕ್ಕೆ ಬರಲಿದೆ. ಈಗಾಗಲೇ ದೇಶದ ರಸ್ತೆಯಲ್ಲಿ ಪ್ರಾಯೋಗಿಕ ಸಂಚಾರ ನಡೆಸುವಾಗಲೂ ಕಾಣಿಸಿಕೊಂಡಿದೆ. ಹೊರಭಾಗದಲ್ಲಿ ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಪಡೆದಿದೆ. ಎಲ್ಇಡಿ ಲೈಟ್‌ಗಳು, ಬಾಡಿ ಕ್ಲಾಡಿಂಗ್ ಹಾಗೂ ಅಲಾಯ್ ವೀಲ್‌ಗಳನ್ನು ಹೊಂದಿದೆ.

BYD Atto 2 Electric Suv Launch Soon In India Expected Price Details

ಅಂತರರಾಷ್ಟ್ರೀಯವಾಗಿ ಖರೀದಿಗೆ ಲಭ್ಯವಿರುವ ಇದೇ ಬಿವೈಡಿ ಅಟ್ಟೊ 2 ಕಾರು, 4,310 ಎಂಎಂ ಉದ್ದ, 1,830 ಎಂಎಂ ಅಗಲ, 1,675 ಎಂಎಂ ಎತ್ತರ ಹಾಗೂ 2,620 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. 5 ಆಸನಗಳನ್ನು ಪಡೆದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 663 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ.

ಈ ಎಸ್‌ಯುವಿಯು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 45.1 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 380 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಇದರಲ್ಲಿರುವ ಎಲೆಕ್ಟ್ರಿಕ್ ಮೋಟಾರ್, 175 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 290 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

BYD Atto 2 Electric Suv Launch Soon In India Expected Price Details

ಹೊಸ ಅಟ್ಟೊ 2 ಕಾರು 160 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 7.9 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಇದರ ಬ್ಯಾಟರಿ ಪ್ಯಾಕ್ 65 ಕೆಡಬ್ಲ್ಯೂ ಡಿಸಿ ಫಾಸ್ಟ್ ಚಾರ್ಜರ್‌ ಬಳಕೆಯಲ್ಲಿ 40 ನಿಮಿಷಗಳಲ್ಲಿ 10% ರಿಂದ 80% ವರೆಗೆ ಚಾರ್ಜ್ ಆಗುತ್ತದೆ. 11 ಕೆಡಬ್ಲ್ಯೂ ಎಸಿ ಚಾರ್ಜರ್ ಉಪಯೋಗ ಮಾಡಿದಾಗ, 5.5 ಗಂಟೆಗಳನ್ನು ಸಂಪೂರ್ಣವಾಗಿ ಚಾರ್ಜ್ ಆಗಿ ಬಿಡುತ್ತದೆ.

ಇದು ಅಚ್ಚುಕಟ್ಟಾದ ಕ್ಯಾಬಿನ್ ವಿನ್ಯಾಸವನ್ನು ಹೊಂದಿದೆ. 15.6-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 8.8-ಇಂಚಿರುವ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪನೋರಮಿಕ್ ಸನ್‌ರೂಫ್, ಮಲ್ಟಿ ಯುಎಸ್‌‍ಬಿ ಪೋರ್ಟ್‌ಗಳು, ಕನೆಕ್ಟ್ಡ್ ಕಾರ್ ಟೆಕ್, ಆಂಬಿಯೆಂಟ್ ಲೈಟಿಂಗ್, ಮಲ್ಟಿಪಲ್ ಏರ್‌ಬ್ಯಾಗ್‌ಗಳು ಹಾಗೂ ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಈ ಕಾರು ರೂ.17 ಲಕ್ಷದಿಂದ ರೂ.24 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುವ ನಿರೀಕ್ಷೆಯಿದೆ. ಇದಕ್ಕೆ ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್, ಟಾಟಾ ಕರ್ವ್ ಇವಿ, ಟಾಟಾ ಹ್ಯಾರಿಯರ್ ಇವಿ, ಎಂಜಿ ವಿಂಡ್ಸರ್ ಇವಿ, ಎಂಜಿ ಝಡ್ಎಸ್ ಇವಿ ಹಾಗೂ ಮಾರುತಿ ಸುಜುಕಿ ಇ ವಿಟಾರಾ ಎಲೆಕ್ಟ್ರಿಕ್ ಎಸ್‌ಯುವಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.

ದೇಶೀಯವಾಗಿ ಬಿವೈಡಿ ಮಾರಾಟಗೊಳಿಸುವ ಪ್ರಮುಖ ಕಾರುಗಳಿವು:

ಬಿವೈಡಿ ಇಮ್ಯಾಕ್ಸ್ 7 (BYD eMAX 7): ಈ ಎಲೆಕ್ಟ್ರಿಕ್ ಎಂಪಿವಿಯು ರೂ.26.90 ಲಕ್ಷದಿಂದ ರೂ.29.90 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 55.4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 71.8 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಪೂರ್ತಿ ಚಾರ್ಜ್‌ನಲ್ಲಿ 420 ರಿಂದ 530 ಕಿಲೋಮೀಟರ್ ಓಡುತ್ತದೆ. 6, 7 ಆಸನಗಳನ್ನು ಹೊಂದಿದೆ. 12.8-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಬಿವೈಡಿ ಸೀಲ್ (BYD Seal): ಇದೊಂದು ಸೆಡಾನ್ ಆಗಿದೆ. ರೂ.41 ಲಕ್ಷದಿಂದ ರೂ.53.15 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 61.44ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 82.56 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 510 ರಿಂದ 650 ಕಿಲೋಮೀಟರ್ ಕ್ರಮಿಸುತ್ತದೆ. 5 ಆಸನಗಳನ್ನು ಹೊಂದಿದೆ.

ಬಿವೈಡಿ ಅಟ್ಟೊ 3 (BYD Atto 3): ಈ ಎಸ್‌ಯುವಿಯು ರೂ.24.99 ಲಕ್ಷದಿಂದ ರೂ.33.99 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 49.92 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 60.48 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 468 ರಿಂದ 521 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ.

ಬಿವೈಡಿ ಸೀಲಿಯನ್ (BYD Sealion): ಇದು ಸಹ ಎಸ್‌ಯುವಿಯಾಗಿದೆ. ರೂ.48.90 ಲಕ್ಷದಿಂದ ರೂ.54.90 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 82.56 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಪೂರ್ತಿ ಚಾರ್ಜ್‌ನಲ್ಲಿ 567 ಕಿಲೋಮೀಟರ್ ಓಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. 15.6-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

More from DriveSpark

Article Published On: Saturday, August 16, 2025, 13:39 [IST]
English summary
Byd atto 2 electric suv launch soon in india expected price details
Read more on byd india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+